ಬೆಳೆ ಸಾಲ ತೀರಿಸದ ರೈತರ ವಿರುದ್ಧ ದಾವೆ
Team Udayavani, Dec 7, 2017, 6:50 AM IST
ಮಂಡ್ಯ: ಜಿಲ್ಲೆಯನ್ನು ಬರಪೀಡಿತವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿ, ರೈತರಿಗೆ ಸಾಲದ ನೋಟಿಸ್ ಜಾರಿಗೊಳಿಸದಂತೆ ಆದೇಶ ಹೊರಡಿಸಿದ್ದರೂ ವಿಜಯಾ ಬ್ಯಾಂಕ್ ಬೆಳೆ ಸಾಲ ಮರುಪಾವತಿಗೆ ರೈತರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿದೆ.
ಸಾಲ ಮರುಪಾವತಿ ಮಾಡದ ರೈತರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ವಕೀಲರೊಂದಿಗೆ ವಿಚಾರಣೆಗಾಗಿ
ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.
ಇದುವರೆಗೆ ಸಾಲ ತೀರಿಸದ ರೈತರಿಗೆ ನೋಟಿಸ್ ಜಾರಿಗೊಳಿಸುತ್ತಿದ್ದ ಬ್ಯಾಂಕುಗಳು ಇದೀಗ ದಾವೆ ಹೂಡುವ
ಮೂಲಕ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿವೆ.
ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ ಪಂಚಾಯಿತಿಯ ಹಂಪಾಪುರ, ಕರಡಿಕೊಪ್ಪಲು, ಗುಡಿಗೇನಹಳ್ಳಿ, ಮಲ್ಲಾಘಟ್ಟ
ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ರೈತರ ಮನೆಗೆ ಬಂದು ಸಾಲ
ಬಾಕಿ ಉಳಿದಿರುವ ಬಗ್ಗೆ ಸಹಿಯನ್ನೂ ಪಡೆಯದೇ ರೈತರ ಗಮನಕ್ಕೂ ತಾರದೆ ವಿಜಯಾಬ್ಯಾಂಕ್ ಅಧಿಕಾರಿಗಳು
ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ
ಇತ್ತೀಚೆಗೆ ನಡೆದ ರೈತ ಮುಖಂಡರ ಸಭೆಯಲ್ಲಿ ಬೆಳೆ ಸಾಲ ಪಡೆದ ರೈತರಿಗೆ ನೋಟಿಸ್ ಜಾರಿಗೊಳಿಸುವುದಿಲ್ಲ ಹಾಗೂ ಚಿನ್ನಾಭರಣವನ್ನೂ ಹರಾಜು ಮಾಡುವುದಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೂ,
ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಗಾಳಿಗೆ ತೂರಿರುವ ಅಧಿಕಾರಿಗಳು ರೈತರ ವಿರುದಟಛಿ ದಾವೆ ಹೂಡುವುದನ್ನು
ಮುಂದುವರಿಸುತ್ತಾ ಶೋಷಣೆ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.