ಸಂಪುಟದಿಂದ ರಾಯರಡ್ಡಿ ಕೈಬಿಡಲು ಶೋಭಾ ಆಗ್ರಹ
Team Udayavani, Dec 7, 2017, 7:10 AM IST
ಬೆಂಗಳೂರು: ನಕಲಿ ಅಂಕಪಟ್ಟಿ ತಡೆಗಟ್ಟುವಲ್ಲಿ ವಿಫಲವಾಗಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ವಿದ್ಯಾರ್ಥಿಗಳಿಗೆ ಉತ್ತಮ ಸಂದೇಶ ತಲುಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ನಕಲಿ ಅಂಕಪಟ್ಟಿ ಹಾವಳಿ ತಡೆಯುವಲ್ಲಿ ಸಚಿವ ರಾಯರೆಡ್ಡಿ ವಿಫಲರಾಗಿದ್ದು, ಎನ್‌ಎಫ್ಸಿ ತಂತ್ರಜ್ಞಾನ ಬಳಸಿದ ಮಾರ್ಕ್ಸ್ ಕಾರ್ಡ್ ಬಳಕೆಗೆ ಅವಕಾಶ ನೀಡದೆ ಮಹಾರಾಷ್ಟ್ರದ ಕಂಪನಿಗೆ ನೀಡಿದ್ದಾರೆ. ಇದರಲ್ಲಿ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಎನ್‌ಎಸ್‌ಯುಐ ಮಾಡಿರುವ ಆರೋಪ ಕುರಿತು ಬುಧವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮುಟ್ಟಿದ್ದೆಲ್ಲಾ ಭ್ರಷ್ಟಾಚಾರವಾಗುತ್ತಿದೆ. ಈ ಹಿಂದೆ ಲ್ಯಾಪ್‌ಟಾಪ್ ವಿತರಣೆಯಲ್ಲೂ ಅಕ್ರಮ ನಡೆದಿತ್ತು. ಆದ್ದರಿಂದ ವಿವಿಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಈ ಪ್ರಕರಣಗಳ ಕುರಿತು ಮುತುವರ್ಜ ವಹಿಸಬೇಕು ಮತ್ತು ಮುಖ್ಯಮಂತ್ರಿಗಳು ಸಚಿವ ರಾಯರೆಡ್ಡಿ ಅವರನ್ನು ಸಂಪುಟದಿಂದ ಕೈಬಿಟ್ಟು ವಿದ್ಯಾರ್ಥಿಗಳಿಗೆ ಉತ್ತಮ ಸಂದೇಶ ರವಾನಿಸಬೇಕು ಎಂದು ಒತ್ತಾಯಿಸಿದರು.
ಕೆ.ಸಿ.ವೇಣುಗೋಪಾಲ್ ಅವರು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕೇರಳ ವಿಧಾನಸಭೆಯಲ್ಲಿ ವರದಿ ಮಂಡನೆಯಾಗಿದೆ. ರಾಜ್ಯ ಉಸ್ತುವಾರಿಯಾಗಿ ನೇಮಿಸಲು 100 ವರ್ಷದ ಇತಿಹಾಸವಿದೆ ಎಂದು ಹೇಳುವ ಕಾಂಗ್ರೆಸ್‌ನವರಿಗೆ ವೇಣುಗೋಪಾಲ್ ಬಿಟ್ಟರೆ ಬೇರೆ ಯಾರೂ ಇಲ್ಲವೇ? ಇದನ್ನು ನೋಡಿದರೆ ಕಾಂಗ್ರೆಸ್ ಅತ್ಯಾಚಾರಿಗಳು, ಭ್ರಷ್ಟಾಚಾರಿಗಳನ್ನು ಪೋಷಿಸುತ್ತದೆ ಎಂಬುದು ಸಾಬೀತಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.