ಜಿಲ್ಲಾ ಉಸ್ತುವಾರಿ ಸಚಿವರಿಂದ ಡಾ| ಚಿದಾನಂದ ಭೇಟಿ


Team Udayavani, Dec 7, 2017, 2:19 PM IST

7-Dec-11.jpg

ಸುಳ್ಯ : ಸುಳ್ಯ ನ.ಪಂ. ಆಡಳಿತ ಗಿಡ ನಾಶಗೊಳಿಸಿದ ಕ್ರಮದಿಂದ ಬೇಸತ್ತು ಸ್ವತ್ಛತಾ ರಾಯಭಾರಿ ಸ್ಥಾನಕ್ಕೆ ರಾಜೀನಾಮೇ ನೀಡಿದ್ದ ಡಾ| ಕೆ.ವಿ. ಚಿದಾನಂದ ಅವರ ಮನೆಗೆ ಮಂಗಳವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮತ್ತು ಕಾಂಗ್ರೆಸ್‌ ಮುಖಂಡರು ಭೇಟಿ ನೀಡಿದ್ದಾರೆ.

ಈ ಸಂದರ್ಭ ಸಚಿವ ರಮಾನಾಥ ರೈ ಮತ್ತು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಎಂ. ವೆಂಕಪ್ಪ ಗೌಡರು ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡಿದರಲ್ಲದೆ, ಸಮಾನ ಮನಸ್ಕ ಸಂಘಟನೆಗಳಿಂದ ಡಿ. 12ರಂದು ಬಂಟ್ವಾಳದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ‘ಸಾಮರಸ್ಯನಡಿಗೆ ಸೌಹಾರ್ದ ಕಡೆಗೆ’ ಪಾಲ್ಗೊಳ್ಳುವಂತೆಯೂ ಮನವಿ ಮಾಡಿದರು.

ಸಾಮರಸ್ಯವೇ ಧ್ಯೇಯ
ಮನವಿಗೆ ಪ್ರತಿಕ್ರಿಯಿಸಿದ ಡಾ| ಕೆ.ವಿ. ಚಿದಾನಂದ ಅವರು, ಹಿಂದೆ ನ.ಪಂ. ಕಸದ ರಾಶಿ ತಮ್ಮ ಮನೆಯಂಗಳಕ್ಕೆ ಬಿದ್ದು ತೊಂದರೆ ಆಗುತ್ತಿದ್ದ ಕುರಿತು ತಿಳಿಸಿದ್ದರೂ ಪಂಚಾಯತ್‌ ಆಡಳಿತ ಸ್ಪಂದಿಸಿರಲಿಲ್ಲ. ನ.ಪಂ. ನಡೆದುಕೊಂಡ ರೀತಿ ಬೇಸರ ತರಿಸಿದೆ ಎಂದು ವಿವರಿಸಿದರು. ಸಾಮರಸ್ಯವೇ ನಮ್ಮ ಧ್ಯೇಯ. ಸಾಮರಸ್ಯ ಕಾರ್ಯಕ್ರಮಕ್ಕೆ ನಮ್ಮ ಪೂರ್ಣ ಸಹಕಾರವಿದೆ ಎಂದರು.

ನ.ಪಂ. ಸದಸ್ಯ ಕೆ.ಎಂ. ಮುಸ್ತಫಾ ಮಾತನಾಡಿ, ಡಾ| ಚಿದಾನಂದ ಅವರು ಸಾಮರಸ್ಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು. ಈ ಸಂದರ್ಭ ಕೆಪಿಸಿಸಿ ಸದಸ್ಯ ಡಾ| ರಘು, ಕೆವಿಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ| ಲೀಲಾಧರ್‌, ಸಿಬಂದಿ ರಜತ್‌ ಅಡ್ಯಾರ್‌, ಯುವ ಕಾಂಗ್ರೆಸ್‌ ಕಾರ್ಯದರ್ಶಿ ಶರೀಫ್ ಕಂಠಿ, ಶಾಫಿ ಕುತ್ತಮೊಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಸಹಾನುಭೂತಿ
ಜಿಲ್ಲಾ ಕಾಂಗ್ರೆಸ್‌ ವಕ್ತಾರ ಎಂ. ವೆಂಕಪ್ಪ ಗೌಡ ಅವರು, ಗಿಡ ನಾಶಗೊಳಿಸಿರುವುದರ ಹಿಂದೆ ನ.ಪಂ. ಆಡಳಿತದ ಕೈವಾಡವಿದೆ. ಬಿಜೆಪಿ ನ.ಪಂ. ಆಡಳಿತದ ಆವಶ್ಯಕ ಸಂದರ್ಭ ಡಾ| ಚಿದಾನಂದ ಅವರನ್ನು ಬಳಸಿಕೊಂಡು ಈಗ ಅವಮಾನಿಸುತ್ತಿರುವುದು ಖಂಡನೀಯ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ ಎರಡೇ ದಿನದಲ್ಲಿ ಕಾಂಗ್ರೆಸ್‌ ಮುಖಂಡರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿರುವುದು ಗಮನ ಸೆಳೆದಿದೆ.

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.