ಕೂಡಲಸಂಗಮದಲ್ಲಿ 19ರಂದು ನಮ್ಮ ಕಾಂಗ್ರೆಸ್ ಪಕ್ಷ ಉದ್ಘಾಟನೆ
Team Udayavani, Dec 8, 2017, 7:40 AM IST
ಯಾದಗಿರಿ: “ಕೂಡಲಸಂಗಮದಲ್ಲಿ ಡಿ.19ರಂದು ನಮ್ಮ ಕಾಂಗ್ರೆಸ್ ಪಕ್ಷ ಉದ್ಘಾಟನೆಯಾಗಲಿದೆ’ ಎಂದು ಸಂಸ್ಥಾಪಕ ಹಾಗೂ ಶಾಸಕ ವರ್ತೂರು ಪ್ರಕಾಶ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ನಡೆಯುವ ಸಮಾರಂಭದಲ್ಲಿ 3ರಿಂದ 4 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಕಾಂಗ್ರೆಸ್ ಪಕ್ಷ ಅಹಿಂದ ವರ್ಗವನ್ನು ನಿರ್ಲಕ್ಷ್ಯ ಮಾಡಿದೆ. ಅಹಿಂದ ಪರ ಯಾವುದೇ ಕಾರ್ಯಕ್ರಮ ಜಾರಿಗೊಳಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದಲ್ಲಿದ್ದ ನಾಯಕರಾದ ಎಚ್. ವಿಶ್ವನಾಥ, ಶ್ರೀನಿವಾಸ ಪ್ರಸಾದ, ಎಸ್.ಎಂ.ಕೃಷ್ಣ ಅವರನ್ನು ಮೂಲೆಗುಂಪು ಮಾಡಿದ ಪರಿಣಾಮ ಅವರೆಲ್ಲರೂ ಪಕ್ಷ ಬಿಟ್ಟು ಹೋಗಿದ್ದಾರೆ. ಆದ್ದರಿಂದ ಅಹಿಂದ ವರ್ಗದ ಕಲ್ಯಾಣಕ್ಕಾಗಿ ಹೊಸ ಪಕ್ಷ ಸ್ಥಾಪಿಸಲಾಗುತ್ತಿದೆ ಎಂದರು.
ಸಿಎಂ ವಿರೋಧ: ಕೋಲಾರ ಜಿಲ್ಲೆಯಲ್ಲಿ ಪಕ್ಷೇತರ ಶಾಸಕನಾಗಿ ಲೋಕಸಭೆ ಹಾಗೂ ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾನು ಶ್ರಮಿಸಿದ್ದೇನೆ. ಆದರೆ ನಾನು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಕೆಂಡಕಾರಿದರು.
ಮುಂಬರುವ ಚುನಾವಣೆಯಲ್ಲಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಮೊದಲು ಪಕ್ಷ ಉದ್ಘಾಟನೆಗೊಂಡು ಅಲ್ಲಿ ಜನರ ನಿರೀಕ್ಷೆ ಏನಿದೆ ಎಂಬುದನ್ನು ತಿಳಿದುಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.