ಪದ್ಯಾಣ ಪ್ರಶಸ್ತಿಗೆ ಬಲಿಪ ನಾರಾಯಣ ಭಾಗವತರು
Team Udayavani, Dec 8, 2017, 4:20 PM IST
ತೆಂಕು ತಿಟ್ಟು ಯಕ್ಷಗಾನದ ಮಹಾಭಾಗವತ ಬಲಿಪ ನಾರಾಯಣ ಭಾಗವತರಿಗೆ ಈ ಸಾಲಿನ ಪದ್ಯಾಣ ಪ್ರಶಸ್ತಿ ಘೋಷಣೆಯಾಗಿದೆ. ಸುಳ್ಯ ತಾಲೂಕು ಕಲ್ಮಡ್ಕದ ಪದ್ಯಾಣ ಪ್ರಶಸ್ತಿ ಸಮಿತಿಯ ಆಯೋಜನೆಯಲ್ಲಿ ಬೆಳ್ಳಾರೆ ಅಜಪಿಲ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ದಲ್ಲಿ ಡಿಸೆಂಬರ್ 10ರಂದು ಅಪರಾಹ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಡಾ| ಟಿ. ಶ್ಯಾಮ ಭಟ್ ವಹಿಸಲಿದ್ದಾರೆ. ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ (ರಿ.) ಇದರ ಅಧ್ಯಕ್ಷ ಯು. ಗಂಗಾಧರ ಭಟ್, ಹಿರಿಯ ಅಥìದಾರಿ ಉಡುವೆಕೋಡಿ ಸುಬ್ಬಪ್ಪಯ್ಯ ಮುಖ್ಯ ಅತಿಥಿಗಳಾಗಿರುತ್ತಾರೆ. ಕಲಾವಿದ ವಾಸುದೇವ ರಂಗಾಭಟ್ ಆಭಿನಂದನಾ ಭಾಷಣ ಮಾಡಲಿದ್ದಾರೆ.
ಪದ್ಯಾಣ ಕುಟುಂಬದ ಹಿರಿಯರಾದ ಕೀರ್ತಿಶೇಷ ಪದ್ಯಾಣ ಪುಟ್ಟು ಭಾಗವತರ ನೆನಪಿನಲ್ಲಿ ಕಳೆದ ವರುಷ “ಪದ್ಯಾಣ ಪ್ರಶಸ್ತಿ’ ಸ್ಥಾಪಿತವಾಗಿದೆ. ಮೊದಲ ಪ್ರಶಸ್ತಿಯನ್ನು ಹಿರಿಯ ಭಾಗವತರಾದ ಅಗರಿ ರಘುರಾಮ ಭಾಗವತರಿಗೆ ಪ್ರದಾನಿಸಲಾಗಿತ್ತು. ಪದ್ಯಾಣ ಮನೆತನಕ್ಕೆ ಯಕ್ಷ ಕಲೆಯು ನೀಡಿದ ಗೌರವಕ್ಕೆ ಕಲಾಕೃತಜ್ಞತೆಯ ದ್ಯೋತಕವಾಗಿ ಈ ಪ್ರಶಸ್ತಿ ಸ್ಥಾಪಿತವಾಗಿದೆ. ಈ ವರುಷ ಬಲಿಪ ನಾರಾಯಣ ಭಾಗವತರಿಗೆ ಪ್ರಶಸ್ತಿ. ತೆಂಕುತಿಟ್ಟಿನ ಹಳೆಯ ಪಾರಂಪರಿಕ ಶೈಲಿಯೊಂದಕ್ಕೆ ಸಲ್ಲುವ ಗೌರವವಿದು.
ಇಂದಿನ ಯಕ್ಷಗಾನ ರಂಗದಲ್ಲಿ ಸರ್ವಾನುಮತ ಮತ್ತು ಶ್ರೇಷ್ಠತೆ ಎರಡನ್ನೂ ಹೊಂದಿದ ಬೆರಳೆಣಿಕೆಯ ಸಾಧಕರಲ್ಲಿ ಪ್ರಾಯಃ ಬಲಿಪ ನಾರಾಯಣ ಭಾಗವತರು ಮೂರ್ಧನ್ಯರು. ದೇಶದ ಪ್ರಾಚೀನ ರಂಗಭೂಮಿಯ ಅಗ್ರಪಂಕ್ತಿಯಲ್ಲಿ ಬಲಿಪರು ಸ್ಥಾನ ಪಡೆದವರು. ಎಂಬತ್ತು ವರುಷ ವಯಸ್ಸಿನ ಬಲಿಪರು ಕಳೆದ ಎಪ್ಪತ್ತು ವರುಷಗಳಿಂದಲೂ ಹಾಡುತ್ತಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಶ್ರೀ ಹನುಮಗಿರಿ ಮೇಳದವರಿಂದ ದಕ್ಷಾಧ್ವರ-ಗಿರಿಜಾಕಲ್ಯಾಣ ಪ್ರಸಂಗಗಳ ಬಯಲಾಟ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.