ಹ್ಯಾಟ್ರಿಕ್ ಹೀರೋ ಆಗಲಿದ್ದಾರೆ ಬಿಎಸ್‌ವೈ
Team Udayavani, Dec 9, 2017, 10:31 AM IST
ಚಿಂಚೋಳಿ: ರಾಜ್ಯದಲ್ಲಿ ಬರುವ 2018 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸುವ
ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತೇ ಮುಖ್ಯಮಂತ್ರಿಗಳಾಗಿ 3ನೇ ಬಾರಿಗೆ ಹ್ಯಾಟ್ರಿಕ್ ಹೀರೋ ಆಗಲಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದರು.
ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಶುಕ್ರವಾರ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿ ಕಾರಕ್ಕೆ ಬಂದು ತನ್ನ ಅಧಿಕಾರ ಪೂರ್ಣಗೊಳಿಸುತ್ತಿದೆ. ಆದರೆ ಚಿಂಚೋಳಿ-ದೇಗಲಮಡಿ ರಾಜ್ಯ ಹೆದ್ದಾರಿ ರಸ್ತೆ ಇನ್ನು ಸುಧಾರಣೆ ಆಗಲಿಲ್ಲ. ಕಾಂಗ್ರೆಸ್ ಶಾಸಕ ಡಾ| ಉಮೇಶ ಜಾಧವ್ ಶಾಸಕರಾಗಿ ಅಭಿವೃದ್ಧಿಪಡಿಸುತ್ತಿಲ್ಲ. ಅವರು ಕಲೆಕ್ಷಷನ್ ಮಾಡುತ್ತಿದ್ದಾರೆಂದು ಟೀಕಿಸಿದರು.
ತಾಲೂಕಿನಲ್ಲಿ ನಡೆಯುತ್ತಿರುವ ಕೆಳದಂಡೆ ಮುಲ್ಲಾಮಾರಿ ಯೋಜನೆ ಕಾಮಗಾರಿಗಳಲ್ಲಿ ರಸ್ತೆ,ಚರಂಡಿ, ದವಾಖಾನೆ, ಶೌಚಾಲಯಗಳಲ್ಲಿ ಸ್ವತ್ಛ ಕಲೆಕ್ಷಶನ್ ನಡೆಯುತ್ತಿದೆ. ಅಭಿವೃದ್ದಿ ಎಂಬುದೇ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರ ಭಸ್ಮಾಸುರ ಕಂಪನಿ. ಎಲ್ಲಿ ಕೈ ಇಡತಾರೋ ಅಲ್ಲಿ ಬೂದಿ ಆಗುತ್ತದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಯಾತ್ರೆ ಮಧ್ಯದಲ್ಲಿಯೇ ಠುಸ್ ಆಯಿತು. ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ ಮಧ್ಯೆ ಭಿನ್ನಮತ ಇರುವುದರಿಂದರಿ ಎತ್ತು ಏರಿಗೆ ಎಳೆದರೆ ಕೋಣ ನೀರಿಗೆ ಎಳೆಯಿತು ಎಂಬಂತಾಗಿದೆ ಸ್ಥಿತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಮೇಶ್ವರ ಮಧ್ಯೆ ನಾನೊಂದು ತೀರಾ ನೀನೊಂದು ತೀರಾ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಾಜ್ಯದ 224 ವಿಧಾನಸಭಾ ಮತಕ್ಷೇತ್ರಗಳಲ್ಲಿ ಪ್ರವಾಸ ಮಾಡುವ ಮೂಲಕ ಇತಿಹಾಸ ನಿರ್ಮಿಸುತ್ತಿದ್ದಾರೆ. ಅಲ್ಲದೇ 650ಕೋಟಿ ಜನರ ಭಾವನೆಗಳನ್ನು ಅರಿತುಕೊಳ್ಳುತ್ತಿದ್ದಾರೆ. ಅವರು ರೈತರ ಪರವಾಗಿ ಪ್ರತ್ಯೇಕ ಬಜೆಟ್ ಮಂಡಿಸಿದ್ದಾರೆ. ಪ್ರಧಾನಮಂತ್ರಿ ಹಿಂದುಳಿದ ವರ್ಗದವರಾಗಿರುವುದರಿಂದ ಇಂದು ಹಿಂದುಳಿದ ವರ್ಗಕ್ಕೆ ಸೇರಿದ ರಾಮನಾಥ ಕೋವಿಂದ ಅವರಿಗೆ ರಾಷ್ಟ್ರಪತಿ ಹುದ್ದೆ ನೀಡಿ ಗೌರವಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.