ಅಂತಾರಾಷ್ಟ್ರೀಯ ದ್ರಾಕ್ಷಾರಸ ಉತ್ಸವ: 150 ಬ್ರ್ಯಾಂಡ್ ಗಳ ಪ್ರದರ್ಶನ


Team Udayavani, Dec 9, 2017, 11:38 AM IST

9-Dec–5.jpg

ಮಹಾನಗರ : ಕರ್ನಾಟಕ ದ್ರಾಕ್ಷಾರಸ ಮಂಡಳಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಡಿ.8ರಿಂದ 10ರ ವರೆಗೆ ಕದ್ರಿ ಪಾರ್ಕ್‌ ನಲ್ಲಿ ನಡೆಯಲಿರುವ ಮಂಗಳೂರು ಅಂತಾರಾಷ್ಟ್ರೀಯ ದ್ರಾಕ್ಷಾರಸ ಉತ್ಸವ-2017ಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆಯಿತು.

ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಸುಮಾರು 12ರಿಂದ 15 ವೈನರಿಗಳು ಭಾಗವಹಿಸಿ ಸುಮಾರು 150ಕ್ಕೂ ಹೆಚ್ಚು
ಬ್ರ್ಯಾಂಡ್‌ಗಳನ್ನು ಉತ್ಸವದಲ್ಲಿ ಪ್ರದರ್ಶಿಸಿತು. ಹಳೆಯ ವೈನ್‌ ಪ್ರದೇಶಗಳಾದ ಯುರೋಪ್‌ ಖಂಡ ಮತ್ತು ಹೊಸ ವೈನ್‌ ಪ್ರದೇಶಗಳಾದ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌, ಚಿಲ್ಲಿ, ಅಮೆರಿಕ ಮೊದಲಾದ ದೇಶಗಳ ವೈನ್‌ಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. 

ಉತ್ಸವದಲ್ಲಿ ವಿವಿಧ ಕಂಪೆನಿಗಳ 10ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ವಿವಿಧ   ಬ್ರ್ಯಾಂಡ್ ಗಳ ವೈನ್‌ಗಳನ್ನು ಮಾರಾಟಕ್ಕಿಡಲಾಗಿತ್ತು. ಗ್ರಾಹಕರಿಗೆ ರುಚಿ ನೋಡುವ ಅವಕಾಶಗಳನ್ನು ಕೆಲವು ಮಳಿಗೆಗಳಲ್ಲಿ ಒದಗಿಸಲಾಗಿತ್ತು.

10 ದೇಶಗಳ ವೈನ್‌
ವೈನ್‌ ಉತ್ಸವದಲ್ಲಿ ಮಳಿಗೆಯನ್ನು ಹಾಕಿದ್ದ ಬೆಂಗಳೂರಿನ ಗೌತಮ್‌ ಎಂಬವರ ಬಳಿ ಸ್ಪೇನ್‌, ಸೌತ್‌ ಆಫ್ರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್‌ ಸಹಿತ ಹತ್ತು ದೇಶಗಳ ವಿವಿಧ ಬ್ರ್ಯಾಂಡ್ ಗಳ ವೈನ್‌ಗಳನ್ನು ಮಾರಾಟಕ್ಕಿಡಲಾಗಿತ್ತು. ಮಳಿಗೆಯಲ್ಲಿ ರೈಡಿಂಗ್‌ ಹೈ ಎನ್ನುವ ಬ್ರ್ಯಾಂಡ್ ನ‌ 2008ರಷ್ಟು ಹಳೆಯ ವೈನ್‌ ಎಲ್ಲರ ಆಕರ್ಷಣೆಯಾಗಿತ್ತು.

20 ರೂ. ಪ್ರವೇಶದರ
 ವೈನ್‌ ಮೇಳದ ಪ್ರವೇಶ ದರ 20 ರೂ. ನಿಗದಿಪಡಿಸಲಾಗಿದೆ. ಉತ್ಸವದಲ್ಲಿ ಎಲ್ಲ ವೈನ್‌ ಬ್ರ್ಯಾಂಡ್ ಮಾರಾಟಗಳ ಮೇಲೆ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ವೈನ್‌ ಮೇಳ ನಡೆಯುವ ಮೂರು ದಿವಸವೂ ಸಂಜೆ ವಿವಿಧ ಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 

ಕಳೆದ ಬಾರಿ 20 ಲಕ್ಷ ರೂ. ಆದಾಯ
ವೈನ್‌ ಬಳಕೆಯನ್ನು ಉತ್ತೇಜಿಸುವ ಹಾಗೂ ವೈನ್‌ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಳೆದ ಬಾರಿ ನಗರದಲ್ಲಿ ಆಯೋಜಿಸಲಾಗಿದ್ದ ವೈನ್‌ ಮೇಳದಲ್ಲಿ ದೊರೆತ ಉತ್ತಮ ಸ್ಪಂದನೆಯ ಹಿನ್ನೆಲೆಯಲ್ಲಿ ಈ ಬಾರಿಯೂ  ಯೋಜಿಸಲಾಗಿದೆ. ಕಳೆದ ಬಾರಿ 20 ಲಕ್ಷ ರೂ. ಆದಾಯವಾಗಿತ್ತು. ಈಗಷ್ಟೇ ಪ್ರದರ್ಶನ ಆರಂಭಗೊಂಡಿದೆ. ತುಂಬಾ ಜನರು ಇಲ್ಲಿ ಸೇರಿದ್ದಾರೆ. ಮಂಗಳೂರು ಜನರಿಂದ ಅದ್ಭುತ ಸ್ಪಂದನೆ ದೊರೆಯುವ ನಿರೀಕ್ಷೆಯಲ್ಲಿದ್ದೇವೆ.
– ರವೀಂದ್ರ ಶಂಕರ್‌ ಮಿರ್ಜೆ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.