ದೇಶದ ಪ್ರಗತಿಗೆ ಸಂವಿಧಾನವೇ ಮೂಲ
Team Udayavani, Dec 9, 2017, 12:26 PM IST
ಭಾಲ್ಕಿ: ಸ್ವಾತಂತ್ರ್ಯ ನಂತರ ದೇಶದ ಪ್ರಗತಿಯಲ್ಲಿ ಸಂವಿಧಾನದ ಅಂಶಗಳು ಅತಿ ಮಹತ್ವ ಪಡೆದಿವೆ. ದೇಶದ ಪ್ರಗತಿಗೆ ಸಂವಿಧಾನವೇ ಮೂಲ ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕದ ವತಿಯಿಂದ ಡಾ| ಅಂಬೇಡ್ಕರ್ ಅವರ 61ನೇ ಮಹಾಪರಿನಿರ್ವಾಣ ದಿನದ ನಿಮಿತ್ತ ಆಯೋಜಿಸಿದ್ದ ಶ್ರದ್ಧಾ ಸುಮನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ದೇಶದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಪ್ರಗತಿ ಹೊಂದುವುದಕ್ಕೆ ಸಂವಿಧಾನವೇ ಮೂಲ ಕಾರಣವಾಗಿದೆ. ಜಗತ್ತಿನ ಅತಿ ಶ್ರೇಷ್ಠ ಸಂವಿಧಾನವನ್ನು ಡಾ| ಬಾಬಾ ಸಾಹೇಬ ಅಂಬೇಡ್ಕರ್ ಅವರು ನಮಗೆ ರಚಿಸಿ ಕೊಟ್ಟಿದ್ದಾರೆ. ಹೀಗಾಗಿ ಅಂತಹ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಕೆಲವು ಪಟ್ಟಭದ್ರ ಹಿತಾಸಕ್ತಿ ಉಳ್ಳವರು ಆಹಾರ ಮತ್ತು ಧರ್ಮದ ಹೆಸರಿನಲ್ಲಿ ದೌರ್ಜನ್ಯ ನಡೆಸುತ್ತಿರುವುದು ವಿಷಾದನೀಯವಾಗಿದೆ. ಜಾತಿ ವಿಷ ಬೀಜ ಬಿತ್ತಿ ದೇಶವನ್ನು ದುರ್ಬಲ ಗೊಳಿಸಲಾಗುತ್ತಿದೆ ಎಂದು ಖೇದ ವ್ಯಕ್ತ ಪಡಿಸಿದರು.
ದಲಿತ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ವಿಲಾಸ ಮೋರೆ ಪ್ರಾಸ್ತಾವಿಕವಾಗಿ ಮಾತನಾಡಿ, ಸಚಿವ ಈಶ್ವರ ಖಂಡ್ರೆ ಅವರು ಬೌದ್ಧ ಮಹಾಸಭಾ ಕಟ್ಟಡ ನಿರ್ಮಿಸಲು ಸುಮಾರು ಒಂದು ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಂಶುಪಾಲ ವಿಠಲದಾಸ ಪ್ಯಾಗೆ ವಿಷೇಶ ಉಪನ್ಯಾಸ ಮಂಡಿಸಿದರು. ಭಂತೆ ವರಜ್ಯೋತಿ ಮಹಾಥೇರೋ, ಭಂತೆ
ಕಷ್ಯಪ್ ಮತ್ತು ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇದೇವೇಳೆ ಮುಂಬೈ ಗಾಯಕ ಆನಂದ ಶಿಂಧೆ ಅವರು ಡಾ| ಬಿ.ಆರ್.ಅಂಬೇಡ್ಕರ್ ತತ್ವಾದರ್ಶಗಳ ಕುರಿತು ಸುಮಧುರ ಸಂಗಿತ ಪ್ರಸ್ತುತಪಡಿಸಿದರು. ಜಿಪಂ ಸದಸ್ಯ ವಿದ್ಯಾಸಾಗರ ಸಿಂಧೆ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ವಿಶಾಲ ಪುರಿ, ವಿಜಯಕುಮಾರ ಗಾಯಕವಾಡ, ನರಸಿಂಗರಾವ್ ಸೂರ್ಯವಂಶಿ, ಪ್ರೊ| ಚಂದ್ರಕಾಂತ ಬಿರಾದಾರ, ಅಂಬಾದಾಸ ಗಾಯಕವಾಡ, ಪ್ರಕಾಶ ಭಾವಿಕಟ್ಟಿ, ಸಂಜುಕುಮಾರ ಭಾವಿಕಟ್ಟೆ, ಮುನೀರ್ ಲಾಸೂನೆ ಉಪಸ್ಥಿತರಿದ್ದರು. ರಾಜಕುಮಾರ ಮೋರೆ ಸ್ವಾಗತಿಸಿದರು. ಕೈಲಾಸ ಭಾವಿಕಟ್ಟೆ ನಿರೂಪಿಸಿದರು. ಸಂಜಿಕುಮಾರ ಭಾವಿಕಟ್ಟೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.