ಪ್ರತಿಭಟನೆ ಹಿಂಪಡೆಯುವಂತೆ ಸಚಿವ ವಿನಯ ಮನವಿ
Team Udayavani, Dec 9, 2017, 1:22 PM IST
ಧಾರವಾಡ: ಉಚಿತ ಲ್ಯಾಪ್‌ಟಾಪ್ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕವಿವಿ ಆಡಳಿತ ಮಂಡಳಿ ಕಚೇರಿ ಎದುರು ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಶುಕ್ರವಾರವೂ ಮುಂದುವರಿಯಿತು.
ಶುಕ್ರವಾರ ವಿವಿ ಆವರಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಮಾಡಿದ ಮನವಿಗೂ ವಿದ್ಯಾರ್ಥಿಗಳು ಸ್ಪಂದಿಸಲಿಲ್ಲ. ಕಳೆದ ವರ್ಷವೂ ತಾವು ಹೇಳಿದಂತೆ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೆವು.
ಆದರೆ, ಈ ವರೆಗೆ ಅವರು ನಮ್ಮ ಒಂದು ಬೇಡಿಕೆಗೂ ಸ್ಪಂದಿಸಿಲ್ಲ. ಹೀಗಾಗಿ ಅವರನ್ನು ಮೊದಲು ಕುಲಪತಿ ಸ್ಥಾನದಿಂದ ಕೆಳಗೆ ಇಳಿಸುವಂತೆ ಆಗ್ರಹಿಸಿದರು. ನಮ್ಮ ಸಮಸ್ಯೆಗೆ ಕುಲಪತಿ ಪ್ರೊ| ಪ್ರಮೋದ ಗಾಯಿ ಅವರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಘೋಷಣೆ ಕೂಗಿದ ವಿದ್ಯಾರ್ಥಿಗಳು ವಿವಿ ಆಡಳಿತ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ವಿವಿಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಸರಿಯಾಗಿ ಶಿಷ್ಯವೇತನ ನೀಡುವಂತೆ ಒತ್ತಾಯಿಸಿದರು. ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು. ನಂತರ ಸಚಿವ ವಿನಯ ಕುಲಕರ್ಣಿ ಅವರು ನಿಮ್ಮ ಬೇಡಿಕೆಗಳ ಬಗ್ಗೆ ಸಭೆ ಆಯೋಜಿಸಿ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.