ರಾಜ್ಯದಲ್ಲಿ “ಚೈಲ್ಡ್‌ ಗ್ರಿಡ್‌’ ಸ್ಥಾಪನೆಗೆ ಸಲಹೆ


Team Udayavani, Dec 10, 2017, 6:10 AM IST

Rajeev-Chandrasekhar.jpg

ಬೆಂಗಳೂರು: ಮಕ್ಕಳ ಲೈಂಗಿಕ ಶೋಷಣೆ ಜಾಲ ವ್ಯಾಪಕವಾಗಿ ಬೆಳೆಯುತ್ತಿದ್ದು, ಇದನ್ನು ಬೇರು ಸಮೇತ ಕಿತ್ತು ಹಾಕಲು ರಾಜ್ಯದಲ್ಲಿ “ಚೈಲ್ಡ್‌ ಗ್ರಿಡ್‌’ (ಮಕ್ಕಳ ಸುರಕ್ಷತೆ ಜಾಲ) ಸ್ಥಾಪಿಸುವ ಅವಶ್ಯಕತೆಯಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ “ಮಕ್ಕಳ ಸುರಕ್ಷತೆಗಾಗಿನ ರಾಷ್ಟ್ರೀಯ ಮೈತ್ರಿ'(ಎನ್‌ಸಿಪಿಓಸಿ)ಯ ಪ್ರವರ್ತಕರಾದ ರಾಜೀವ ಚಂದ್ರಶೇಖರ್‌ ಅಭಿಪ್ರಾಯಪಟ್ಟಿದ್ದಾರೆ.

ಎನ್‌ಸಿಪಿಓಸಿ ವತಿಯಿಂದ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ “ಮಕ್ಕಳ ಮೇಲಿನ ಲೈಂಗಿಕ ಶೋಷಣೆ’
ತಡೆಯುವ ಕುರಿತ ಸರ್ಕಾರದ ಅಂಗಸಂಸ್ಥೆಗಳು  ಸ್ವಯಂಸೇವಾ ಸಂಘಟನೆಗಳು, ತಜ್ಞರ ಜತೆಗಿನ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಲೈಂಗಿಕ ಶೋಷಣೆ ಮಾಡಲು ಸಾಗಾಟ ಮಾಡುವ ಜಾಲ ನಿಯಂತ್ರಿಸಬೇಕಾದರೆ ಕಾನೂನು ಜಾರಿ ಸಂಸ್ಥೆಗಳ ಬಳಿ ಸಮರ್ಪಕ ಮಾಹಿತಿ, ಸೂಕ್ತ ಅಂಕಿ-ಸಂಖ್ಯೆ ಇರಬೇಕು.
ಅದಕ್ಕಾಗಿ ರಾಜ್ಯಮಟ್ಟದಲ್ಲಿ ಚೈಲ್ಡ್‌ಗ್ರಿಡ್‌ ಸ್ಥಾಪನೆಯಾಗಬೇಕೆಂದು ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇದರ ಮುಂದಾಳತ್ವ ತೆಗೆದುಕೊಂಡರೆ, ಎನ್‌ಸಿಪಿಓಸಿ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಕೃಪಾ ಆಳ್ವ, ಮಕ್ಕಳ ವಿರುದಟಛಿದ ಅಪರಾಧಗಳ ಬಗ್ಗೆ
ಜಾಗೃತಿ ಮೂಡಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಮಕ್ಕಳನ್ನು ಸುಶಿಕ್ಷಿತ ಮತ್ತು ಜಾಗೃತರನ್ನಾಗಿ ಮಾಡಿದರೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಮಕ್ಕಳ ಹಕ್ಕುಗಳ ರಕ್ಷಣೆ ಅದರಲ್ಲೂ ವಿಶೇಷವಾಗಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಬಾಲವೇಶ್ಯಾವಾಟಿಕೆ ತಡೆಗಟ್ಟುವುದು ಕೇವಲ ಸರ್ಕಾರ, ಸರ್ಕಾರಿ ಅಂಗಸಂಸ್ಥೆಗಳ ಹೊಣೆಗಾರಿಕೆ ಅಲ್ಲ, ಇದು ಇಡೀ ಸಮಾಜದ ಜವಾಬ್ದಾರಿ. ಕಡ್ಡಾಯ ಶಿಕ್ಷಣ ನೀಡುವ ಆರ್‌ಟಿಇ ಕಾಯ್ದೆಯಡಿ 18 ವರ್ಷದವರೆಗಿನ ಮಕ್ಕಳನ್ನು ಪರಿಗಣಿಸಬೇಕು. ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಗ್ರಾಹಕರು ಮತ್ತು ಬೇಡಿಕೆಗೆ ಮಟ್ಟ ಹಾಕಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಆದರೆ, ಮಕ್ಕಳ ಅಕ್ರಮ ಸಾಗಾಟದ ಜಾಲವನ್ನೇ ಮಟ್ಟ ಹಾಕಿದರೆ, ಗ್ರಾಹಕರು ಮತ್ತು ಬೇಡಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಅನ್ನುವುದು ನನ್ನ ಅಭಿಪ್ರಾಯ ಎಂದರು.

ಕರ್ನಾಟಕದಲ್ಲಿ 201ರಲ್ಲಿ “ಕಾನೂನು ಬಾಹಿರ ಸಾಗಾಟ (ನಿಯಂತ್ರಣ) ಕಾಯ್ದೆಯಡಿ 7 ಪ್ರಕರಣಗಳು ದಾಖಲಾಗಿವೆ. ಇದು ದೇಶದಲ್ಲಿ 2ನೇ ಅತಿ ಹೆಚ್ಚು ಪ್ರಕರಣಗಳಾಗಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ (ಎನ್‌ಸಿಆರ್‌ಬಿ) ಮಾಹಿತಿ ಪ್ರಕಾರ ರಾಜ್ಯದಲ್ಲಿ ಪೋಕೊÕà ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. 2014ರಲ್ಲಿ 620 ಪ್ರಕರಣಗಳು ದಾಖಲಾಗಿದ್ದರೆ, 2015ರಲ್ಲಿ 1,480, 2016ರಲ್ಲಿ 1,826 ಪ್ರಕರಣಗಳು ದಾಖಲಾಗಿವೆ. ಮೊಬೈಲ್‌ ಫೋನ್‌ ಮತ್ತು ಇಂಟರ್‌ನೆಟ್‌ನ ಸುಲಭ ಲಭ್ಯತೆಯಿಂದಾಗಿ “ಚೈಲ್ಡ್‌ ಪೊರ್ನೋಗ್ರಾμ’ಯ 7 ಪ್ರಕರಣಗಳು ದಾಖಲಾಗಿವೆ.

ಮಕ್ಕಳ ಮೇಲಿನ ಲೈಂಗಿಕ ಶೋಷಣೆಯ 1,063 ಪ್ರಕರಣಗಳು ದಾಖಲಾಗುವ ಮೂಲಕ ಪ್ರಕರಣಗಳು ಹೆಚ್ಚಾಗುತ್ತಿರುವ ದೇಶದ ಪ್ರಮುಖ ನಗರಗಳಲ್ಲಿ ಬೆಂಗಳೂರು ಒಂದಾಗಿದೆ. 4,736 ಪ್ರಕರಣಗಳ ಇತ್ಯರ್ಥಕ್ಕೆ ಬಾಕಿ ಇವೆ ಅನ್ನುವ ಎನ್‌ಸಿಆರ್‌ಬಿ ಅಂಕಿ-ಅಂಶಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದು, ತಜ್ಞರು ಪ್ರಮುಖ ಶಿಫಾರಸುಗಳನ್ನು ಮಾಡಿದರು.

ಟಾಟಾ ಇನ್ಸಿಟ್ಯೂಟ್‌ ಆಫ್ ಸೋಶಿಯಲ್‌ ಸೈನ್ಸ್‌ನ ಪ್ರಾಧ್ಯಾಪಕ ಡಾ. ಪಿ.ಎಂ. ನಾಯರ್‌ ಸೇರಿ ವಿವಿಧ ಕ್ಷೇತ್ರಗಳ ತಜ್ಞರು ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Ignoring MES is better than banning it: Satish Jarakiholi

Belagavi; ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

Voyager 1 encountered a problem in interstellar space 25 billion km away

25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1

12-bng

Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್‌’

ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ

Vijayapura: ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ignoring MES is better than banning it: Satish Jarakiholi

Belagavi; ಎಂಇಎಸ್‌ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್‌ ಜಾರಕಿಹೊಳಿ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

26

Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ

25

Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

24

Mangaluru: ಕರಾವಳಿ ಕೆಥೋಲಿಕರಿಂದ ಮೃತರು, ಸಂತ ಭಕ್ತರ ವಿಶಿಷ್ಟ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.