ನಿಲ್ಲಿಸಿದ ಕಾರಿನಲ್ಲಿದ್ದ 12ಲಕ್ಷ ರೂ. ಕದ್ದು ಪರಾರಿ
Team Udayavani, Dec 10, 2017, 12:01 PM IST
ಬೆಂಗಳೂರು: ಮಲ್ಲೇಶ್ವರ ಕ್ಲಬ್ ಬಳಿ ನಿಲ್ಲಿಸಿದ ಕಾರಿನ ಗಾಜು ಒಡೆದಿರುವ ದುಷ್ಕರ್ಮಿಗಳು 12.49 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ವಿಮಾನ ಟಿಕೆಟ್ ಬುಕ್ಕಿಂಗ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿರುವ ಪುಟ್ಟ ಬಸವರಾಜು ಎಂಬುವರು ಡಿ.7ರಂದು ಸಂಜೆ 7 ಗಂಟೆ ಸುಮಾರಿಗೆ ಗ್ರಾಹಕರಿಗೆ ದಾಖಲಾತಿಗಳನ್ನು ನೀಡಲು ಮಲ್ಲೇಶ್ವರಕ್ಕೆ ತೆರಳಿದ್ದರು.
7ನೇ ಕ್ರಾಸ್ನಲ್ಲಿರುವ ಮಲ್ಲೇಶ್ವರ ಕ್ಲಬ್ ಬಳಿ ತಮ್ಮ ಕಾರನ್ನು ಪಾರ್ಕ್ ಮಾಡಿ ಕೆಲಸದ ಮೇಲೆ ಹೋಗಿದ್ದರು. ಈ ವೇಳೆ ದುಷ್ಕರ್ಮಿಗಳು ಕಾರಿನ ಗಾಜು ಒಡೆದು ಕಾರಿನ ಬ್ಯಾಗ್ನಲ್ಲಿದ್ದ 5.35 ಲಕ್ಷ ರೂ. ನಗದು, 4.40 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಹಾಗೂ ಮೂರು ಎಟಿಎಂ ಕಾರ್ಡ್ಗಳನ್ನು ದೋಚಿ ಪರಾರಿಯಾಗಿದ್ದಾರೆ.
ಬಸವರಾಜು ಕೆಲಸ ಮುಗಿಸಿಕೊಂಡುವಾಪಾಸ್ ಬಂದಾಗ ಕಳ್ಳತನ ಗೊತ್ತಾಗಿದೆ. ಎಟಿಎಂ ಕಾರ್ಡ್ಗಳನ್ನು ಕದ್ದೊಯ್ದಿದ್ದ ದುಷ್ಕರ್ಮಿಗಳು ಕಾರ್ಡ್ ಹಿಂದೆ ಬರೆದಿದ್ದ ಪಿನ್ ನಂಬರ್ ಬಳಸಿ ಪುನ: 2.70 ಲಕ್ಷ ರೂ. ಡ್ರಾ ಮಾಡಿಕೊಂಡಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಬಸವರಾಜು ಮಲ್ಲೇಶ್ವರಂ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.