ಬಂಟರ ಸಂಘ ಮುಂಬಯಿ ಜ್ಞಾನ ಮಂದಿರ ಸಮಿತಿ ರಚನೆ
Team Udayavani, Dec 10, 2017, 3:55 PM IST
ಮುಂಬಯಿ: ಬಂಟರ ಸ ಂಘ ಮುಂಬಯಿ ಇದರ ಪ್ರತಿಷ್ಠಿತ ಜ್ಞಾನ ಮಂದಿರ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಉದ್ಯಮಿ, ಸಮಾಜ ಸೇವಕ ರವೀಂದ್ರನಾಥ ಭಂಡಾರಿ ಅವರು ಡಿ. 8ರಂದು ಕುರ್ಲಾ ಪೂರ್ವದ ಬಂಟರ ಭವನದ ಸಂಕುಲದಲ್ಲಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿಧಾನದಲ್ಲಿ ಅಧಿಕಾರ ಸ್ವೀಕರಿಸಿದರು.
ಧಾರ್ಮಿಕ ಕಾರ್ಯಕ್ರಮವಾಗಿ ರವೀಂದ್ರನಾಥ ಭಂಡಾರಿ ಹಾಗೂಪರಿವಾರದವರ ಉಪಸ್ಥಿತಿಯಲ್ಲಿ ಬೆಳಗ್ಗೆ ಗಣಹೋಮ, ನಾಗದೇವರಿಗೆ ನಾಗತಂಬಿಲ, ಸಂಜೆ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಕುಂಕುಮಾರ್ಚನೆ, ಶ್ರೀ ಮಹಾವಿಷ್ಣು ಮಂದಿರದಲ್ಲಿ ದೀಪಾಲಂಕಾರ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪಸಮಿತಿಗಳ ಸದಸ್ಯರು, ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಮಹಿಳಾ ವಿಭಾಗದವರು, ಸಮಾಜ ಬಾಂಧವರು, ಭಕ್ತಾದಿಗಳು, ರವೀಂದ್ರನಾಥ ಭಂಡಾರಿ ಅವರ ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಅರವಿಂದ ಬನ್ನಿಂತಾಯ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಬಂಟರ ಸಂಘ ಜ್ಞಾನ ಮಂದಿರ ಸಮಿತಿಯ ನಿರ್ಗಮನ ಕಾರ್ಯಾಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ ಅವರು ನೂತನ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ ವಿವಿಧ ಉಪಸಮಿತಿಗಳ ಪದಾಧಿಕಾರಿಗಳಾದ ಶಾಂತಾರಾಮ ಶೆಟ್ಟಿ, ಎನ್. ಸಿ. ಶೆಟ್ಟಿ, ಸಂಘದ ಮುಖವಾಣಿ ಬಂಟರವಾಣಿಯ ಗೌರವ ಸಂಪಾದಕ ಅಶೋಕ್ ಪಕ್ಕಳ, ವಿಟuಲ್ ರೈ, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಇದರ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ, ಉದ್ಯಮಿ ಪ್ರಕಾಶ್ ಶೆಟ್ಟಿ ನಲ್ಯಗುತ್ತು, ಅನ್ನದಾತ ರಾಘು ಪಿ. ಶೆಟ್ಟಿ, ಅಶೋಕ್ ಶೆಟ್ಟಿ ಕಾಪು, ಪ್ರಕಾಶ್ ಆಳ್ವ, ವಿಟuಲ್ ಆಳ್ವ, ಪ್ರಸನ್ನ ಶೆಟ್ಟಿ, ಮಹೇಶ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ, ಲತಾ ಪಿ. ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ರತ್ನಾ ಶೆಟ್ಟಿ, ಆಶಾ ವಿಟuಲ್ ರೈ ಹಾಗೂ ಇತರ
ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಕಾರ್ಯಕಾರಿ ಸಮಿತಿಯ ಸದಸ್ಯರು, ಭಕ್ತಾದಿಗಳು ಪಾಲ್ಗೊಂಡು ನೂತನ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
ರವೀಂದ್ರನಾಥ ಭಂಡಾರಿ ಅವರು ನಗರದಲ್ಲಿ ಯಶಸ್ವಿ ಉದ್ಯಮಿಯಾಗಿ, ಸಮಾಜ ಸೇವಕರಾಗಿ ಈಗಾಗಲೇ ಪ್ರಸಿದ್ಧರಾಗಿದ್ದು, ಬಂಟರ ಸಂಘದ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಸಮಾಜ ಬಾಂಧವರ ಪ್ರೀತ್ಯಾದರಗಳಿಗೆ ಪಾತ್ರರಾಗಿದ್ದಾರೆ. ಎಲ್ಲರೊಂದಿಗೆ ಆತ್ಮೀಯ ಭಾವನೆಯನ್ನು ಹೊಂದಿರುವ ಇವರು ಸರಳ, ಸಜ್ಜನಿಕೆಯ ವ್ಯಕ್ತಿತ್ವದವರು. ನಾಡಿನ ಕಲೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಅಪಾರ ಒಲವನ್ನು ಹೊಂದಿರುವ ಇವರು ಬಂಟರ ಸಂಘದ ಮುಖಾಂತರ ಪ್ರತೀ ವರ್ಷ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಿಂದಲೇ ಯಕ್ಷಗಾನ ಪ್ರದರ್ಶನ ನೀಡಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ.
ಸಂಘದ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆಯ ಹಿಮ್ಮೇಳ-ಮುಮ್ಮೇಳದ ಪರಿಪೂರ್ಣ ವೇಷ-ಭೂಷಣಗಳನ್ನು ದಾನಿ ಗಳ ಸಹಕಾರದೊಂದಿಗೆ ಅರ್ಪಿಸಿದ ಕಲಾಪ್ರೇಮಿ ಇವರು. ಆಧ್ಯಾತ್ಮಿಕ ಚಿಂತಕರೂ ಆಗಿರುವ ಇವರು ಕಳೆದ ಐದು ವರ್ಷಗಳ ಹಿಂದೆ ಹುಟ್ಟೂರಾದ ಸಜಿಪದಲ್ಲಿ ಸುಮಾರು 40 ಲಕ್ಷ ರೂ. ಗಳಲ್ಲಿ ಶ್ರೀರಾಮ ಭಜನ ಮಂದಿರವನ್ನು ನಿರ್ಮಿಸಿರುವುದಲ್ಲದೆ, ಊರಿನ ಪ್ರತಿಯೊಂದು ದೈವ-ದೇವಸ್ಥಾನಗಳಿಗೆ ಇವರ ಕೊಡುಗೆ ಅಪಾರವಾಗಿದೆ.
ಕಳೆದ ಒಂಭತ್ತು ವರ್ಷಗಳಿಂದ ಹೊಸನಗರ ಮೇಳವನ್ನು ಮುಂಬಯಿಗೆ ಆಹ್ವಾನಿಸಿ ಉಚಿತ ಯಕ್ಷಗಾನ ಪ್ರದರ್ಶನ
ಗಳನ್ನು ನೀಡಿದ ಕಲಾ ಶ್ರೀಮಂತಿಕೆ ಇವರದ್ದಾಗಿದೆ. ಅವರ ಕ್ರಿಯಾಶೀಲತೆಗೆ ಬಂಟರ ಸಂಘದ ವರ್ಷದ ಅತ್ಯುತ್ತಮ ಸಮಾಜ ಸೇವಕ ಚಿನ್ನದ ಪದಕ ಲಭಿಸಿರುವುದು ಸಾಕ್ಷಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.