ಭಾರತ ಮೂಲದ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ
Team Udayavani, Dec 11, 2017, 7:25 AM IST
ಷಿಕಾಗೋ: ಅಮೆರಿಕದ ಷಿಕಾಗೋದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿ ಮೊಹಮ್ಮದ್ ಅಕ್ಬರ್ (30) ಮೇಲೆ ಗುಂಡಿನ ದಾಳಿ ನಡೆದಿದೆ.
ಡಿವೆù ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸಿಸ್ಟಮ್ಸ್ ನೆಟ್ವರ್ಕಿಂಗ್ ಆ್ಯಂಡ್ ಟೆಲಿ ಕಮ್ಯೂನಿಕೇಷನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯಾಗಿರುವ ಮೊಹಮ್ಮದ್ ಅಕºರ್ ಅವರು, ಸ್ಥಳೀಯ ಕಾಲಮಾನ 8:45ರ ಸುಮಾರಿಗೆ ನಗರದ ಅಲ್ಬನಿ ಪಾರ್ಕ್ ಬಳಿಯಲ್ಲಿನ ಕಾರ್ ಪಾರ್ಕಿಂಗ್ ಬಳಿ ತೆರಳುತ್ತಿದ್ದಾಗ ದುಷ್ಕರ್ಮಿಯೊಬ್ಬ ಈತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಗುಂಡು ಈತನ ಕೆನ್ನೆಗೆ ತಗುಲಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಯುವಕ ಚಿಕಿತ್ಸೆ ಪಡೆಯುತ್ತಿದ್ದು, ಈತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತ, ಹೈದರಾಬಾದ್ನ ಉಪ್ಪಾಲ್ನಲ್ಲಿರುವ ಅವರ ಕುಟುಂಬ, ಮೊಹಮ್ಮದ್ನನ್ನು ನೋಡಲು ತುರ್ತು ವೀಸಾದಡಿ ಪ್ರಯಾಣಿಸುವಂತೆ ತಮಗೆ ಅನುಕೂಲ ಕಲ್ಪಿಸಬೇಕೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಲ್ಲಿ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.