ದೇಶೀ ಕ್ರೀಡೆ ಉಳಿವಿಗೆ ಕೈ ಜೋಡಿಸಿ


Team Udayavani, Dec 11, 2017, 3:04 PM IST

vij-3.jpg

ಕಲಕೇರಿ: ಯುವಕರು ಮತ್ತು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡುವ ಮಹತ್ವವನ್ನು ಕ್ರೀಡೆಗಳಿಗೂ ನೀಡಬೇಕು. ಅಂದಾಗ ಮಾತ್ರ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಹೇಳಿದರು.

ಗ್ರಾಮದ ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಎಂಪಿಎಸ್‌ ಶಾಲಾ ಆವರಣದಲ್ಲಿ ಎಬಿಡಿ ಫೌಂಡೇಶನ್‌ ಮತ್ತು ಅದ್ದೂರಿ ಗೆಳೆಯರ ಬಳಗದ ಸಹಯೋಗದಲ್ಲಿ ದಿ| ರಮೇಶ ಗಡಗಿ ಇವರ ಸ್ಮರಣಾರ್ಥ ಹಮ್ಮಿಕೊಂಡ ಖೇಲ್‌ ಕಬಡ್ಡಿ ಕಲಕೇರಿ ಕಬಡ್ಡಿ ಹೊನಲು ಬೆಳಕಿನ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಕಬಡ್ಡಿ ಭಾರತೀಯರ ಪಾರಂಪರಿಕ ಕ್ರೀಡೆಯಾಗಿದ್ದು, ಅನಾದಿ ಕಾಲದಿಂದಲೂ ಈ ಕ್ರೀಡೆ ತನ್ನ ಮೆರಗನ್ನು ಉಳಿಸಿಕೊಂಡು ಬಂದಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಗತ್ತನ್ನು ಬಿಂಬಿಸುವ ಲಗೋರಿ, ಚಿಣಿದಾಂಡು, ಖೋಖೋ, ಕಬಡ್ಡಿ, ಕುಸ್ತಿಯಂತಹ ದೇಶೀಯ ಕ್ರೀಡೆಗಳ ಕಡೆಗೆ ಯುವಕರ ಒಲವು ಕಡಿಮೆಯಾಗುತ್ತಿರುವದು ಕಳವಳಕಾರಿಯಾಗಿದೆ ಎಂದರು. 

ತಾಪಂ ಸದಸ್ಯ ಲಕ್ಕಪ್ಪ ಬಡಿಗೇರ ಮಾತನಾಡಿದರು. ಪಂಚರಂಗ ಸಂಸ್ಥಾನ ಗದ್ದುಗೆಮಠದ ಮಡಿವಾಳೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದೇ ವೇಳೆ  ವಣಗೆರೆಯಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಪಡೆದ ಬಸವೇಶ್ವರ ಕಾಲೇಜಿನ ಈರಯ್ಯ ಕಪ್ಪಡಿಮಠ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡಿದವರಿಗೆ ಎಬಿಡಿ ಫೌಂಡೇಶನ್‌ ವತಿಯಿಂದ ಗೌರವಿಸಲಾಯಿತು. ದೈಹಿಕ ಶಿಕ್ಷಕ ಬಸವರಾಜ ಚಳ್ಳಗಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಬಿಡಿ ಫೌಂಡೇಶನ್‌ನ ಸಂತೋಷ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು.

ಡಾ| ಸುರೇಶ ಕಾಕಲರಡ್ಡಿ, ಯಮನೂರಿ ಕುಲಕರ್ಣಿ ಮಾತನಾಡಿದರು. ಮುಕುಂದ ದೇಸಾಯಿ, ಶಾಂತಾಬಾಯಿ ಕಾಕಲರಡ್ಡಿ, ಅರವಿಂದ ಬೇನಾಳ, ದವಲು ನಾಯ್ಕೋಡಿ, ಶಿವರಾಯ ಮೋಪಗಾರ, ಹುಸೇನ ನಾಯ್ಕೋಡಿ, ವಿಶ್ವನಾಥ ರಾಠೊಡ, ಸದಾಶಿವ ಪಾಟೀಲ, ನಬಿಲಾಲ ನಾಯ್ಕೋಡಿ, ಬಿ.ಎಸ್‌. ಬಗಲಿ, ರಾಜು ರಾಠೊಡ, ಪರಶುರಾಮ ವಡ್ಡರ, ಅಪ್ಪು ದೇಸಾಯಿ, ಸಚಿನ ಝಳಕಿ, ಮಲ್ಲು ಜಂಬಗಿ, ಪ್ರಜ್ವಲ ದೇಸಾಯಿ, ಅಶೋಕ ವಡ್ಡರ, ಮಹ್ಮದಅಲಿ ಯಾಳವಾರಕರ, ಸಂತೋಷ ಪೂಜಾರಿ ಇದ್ದರು.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.