ವಿಂಡೀಸಿಗೆ ಮತ್ತೂಂದು ಸೋಲಿನ ಭೀತಿ

Team Udayavani, Dec 12, 2017, 6:50 AM IST

New-Zealand-and-West-Indies.jpg

ಹ್ಯಾಮಿಲ್ಟನ್‌: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಬಿಗಿಯಾದ ಹಿಡಿತ ಸಾಧಿಸಿರುವ ನ್ಯೂಜಿಲ್ಯಾಂಡ್‌ ಹ್ಯಾಮಿಲ್ಟನ್‌ ಟೆಸ್ಟ್‌ ಪಂದ್ಯವನ್ನೂ ಗೆಲ್ಲುವತ್ತ ದಾಪುಗಾಲಿಕ್ಕಿದೆ. ಇದರೊಂದಿಗೆ ಸರಣಿಯನ್ನು 2 0 ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಳ್ಳುವ ಸಾಧ್ಯತೆಯನ್ನು ಹೆಚ್ಚಿಸಿಕೊಂಡಿದೆ.

ಗೆಲುವಿಗೆ 444 ರನ್ನುಗಳ ಕಠಿನ ಗುರಿ ಪಡೆದಿರುವ ವಿಂಡೀಸ್‌, 3ನೇ ದಿನದ ಅಂತ್ಯಕ್ಕೆ ಬಹಳ ಸಂಕಟ ಸ್ಥಿತಿಗೆ ತಳ್ಳಲ್ಪಟ್ಟಿದೆ. 2 ವಿಕೆಟ್‌ ಉರುಳಿಸಿಕೊಂಡು ಕೇವಲ 30 ರನ್‌ ಮಾಡಿದೆ. ಪಂದ್ಯವಿನ್ನೂ 2 ದಿನ ಕಾಣಲಿಕ್ಕಿದೆಯಾದರೂ ಉಳಿದ 8 ವಿಕೆಟ್‌ಗಳ ನೆರವಿನಿಂದ 414 ರನ್‌ ಪೇರಿಸುವುದು ಕೆರಿಬಿಯನ್ನರ ಈಗಿನ ಬ್ಯಾಟಿಂಗ್‌ ಲೈನ್‌ಅಪ್‌ನಿಂದ ಅಸಾಧ್ಯ ಎಂದೇ ಹೇಳಬೇಕಾಗುತ್ತದೆ. ನಾಯಕ ಕ್ರೆಗ್‌ ಬ್ರಾತ್‌ವೇಟ್‌ 13 ರನ್‌ ಹಾಗೂ ಶೈ ಹೋಪ್‌ ಒಂದು ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಆರಂಭಕಾರ ಕೈರನ್‌ ಪೊವೆಲ್‌ ಖಾತೆ ತೆರೆಯದೆ ನಿರ್ಗಮಿಸಿದರೆ, ವನ್‌ಡೌನ್‌ನಲ್ಲಿ ಬಂದ ಶಿಮ್ರನ್‌ ಹೆಟ್‌ಮೈರ್‌ 15 ರನ್‌ ಮಾಡಿ ಔಟಾದರು. ಈ ವಿಕೆಟ್‌ಗಳು ಸೌಥಿ ಮತ್ತು ಬೌಲ್ಟ್ ಪಾಲಾಗಿವೆ.

ಟಯ್ಲರ್‌ 17ನೇ ಶತಕ
ಈ ಪಂದ್ಯದ 3ನೇ ದಿನದಾಟದಲ್ಲಿ ಸಾಕಷ್ಟು ಬೆಳವಣಿಗೆಗಳು ಸಂಭವಿಸಿದವು. 8ಕ್ಕೆ 215 ರನ್‌ ಮಾಡಿದ್ದ ವೆಸ್ಟ್‌ ಇಂಡೀಸ್‌ ದಿನದಾಟ ಮುಂದುವರಿಸಿ ಕೇವಲ 6 ರನ್‌ ಸೇರಿಸಿ 221ಕ್ಕೆ ಆಲೌಟ್‌ ಆಯಿತು. ಈ ಎರಡೂ ವಿಕೆಟ್‌ ಬೌಲ್ಟ್ ಪಾಲಾದವು. 73ಕ್ಕೆ 4 ವಿಕೆಟ್‌ ಕಿತ್ತ ಬೌಲ್ಟ್ ಕಿವೀಸ್‌ ಸರದಿಯ ಯಶಸ್ವಿ ಬೌಲರ್‌ ಎನಿಸಿದರು. ಸೌಥಿ, ಗ್ರ್ಯಾಂಡ್‌ಹೋಮ್‌ ಮತ್ತು ವ್ಯಾಗ್ನರ್‌ ತಲಾ 2 ವಿಕೆಟ್‌ ಉರುಳಿಸಿದರು.

152 ರನ್ನುಗಳ ಮುನ್ನಡೆಯೊಂದಿಗೆ ದ್ವಿತೀಯ ಸರದಿ ಆರಂಭಿಸಿದ ನ್ಯೂಜಿಲ್ಯಾಂಡ್‌ ಬಿರುಸಿನ ಆಟಕ್ಕಿಳಿದು 8ಕ್ಕೆ 291 ರನ್‌ ಪೇರಿಸಿ ಡಿಕ್ಲೇರ್‌ ಮಾಡಿತು. ರಾಸ್‌ ಟಯ್ಲರ್‌ ಅವರ ಶತಕ ಕಿವೀಸ್‌ ಸರದಿಯ ಆಕರ್ಷಣೆಯಾಗಿತ್ತು. ಟಯ್ಲರ್‌ 198 ಎಸೆತಗಳಿಂದ 107 ರನ್‌ (11 ಬೌಂಡರಿ) ಬಾರಿಸಿ ಅಜೇಯರಾಗಿ ಉಳಿದರು. ಇದು ಅವರ 17ನೇ ಶತಕ. ಇದರೊಂದಿಗೆ ನ್ಯೂಜಿಲ್ಯಾಂಡ್‌ ಪರ ಆತಿ ಹೆಚ್ಚು ಶತಕ ಬಾರಿಸಿದ ಮಾರ್ಟಿನ್‌ ಕ್ರೋವ್‌ ಮತ್ತು ಕೇನ್‌ ವಿಲಿಯಮ್ಸನ್‌ ದಾಖಲೆಯನ್ನು ಟಯ್ಲರ್‌ ಸರಿದೂಗಿಸಿದರು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌ 373 ಮತ್ತು 8 ವಿಕೆಟಿಗೆ 291 ಡಿಕ್ಲೇರ್‌ (ಟಯ್ಲರ್‌ ಔಟಾಗದೆ 107, ವಿಲಿಯಮ್ಸನ್‌ 54, ಸ್ಯಾಂಟ್ನರ್‌ 26, ಕಮಿನ್ಸ್‌ 69ಕ್ಕೆ 3, ಗ್ಯಾಬ್ರಿಯಲ್‌ 52ಕ್ಕೆ 2, ಚೇಸ್‌ 51ಕ್ಕೆ 2). ವೆಸ್ಟ್‌ ಇಂಡೀಸ್‌ 221 ಮತ್ತು 2 ವಿಕೆಟಿಗೆ 30.

ಟಾಪ್ ನ್ಯೂಸ್

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.