ಫರಂಗಿಪೇಟೆ – ಮಾಣಿ ಸಚಿವ ರೈ ನೇತೃತ್ವದಲ್ಲಿ ಇಂದು ಸಾಮರಸ್ಯ ನಡಿಗೆ
Team Udayavani, Dec 12, 2017, 7:31 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮೂಡಿಸುವ ಆಶಯದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಮಂಗಳವಾರ ಫರಂಗಿಪೇಟೆಯಿಂದ ಮಾಣಿ ವರೆಗೆ “ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ’ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ರಾ.ಹೆ. 75ರಲ್ಲಿ ಬರುವ ಫರಂಗಿಪೇಟೆಯಿಂದ ಬಿ.ಸಿ.ರೋಡ್ ಮಾರ್ಗವಾಗಿ ಮಾಣಿ ವರೆಗಿನ ಸುಮಾರು 20 ಕಿ.ಮೀ. ಈ ಪಾದಯಾತ್ರೆ ನಡೆಯಲಿದ್ದು, ಪಕ್ಷಾತೀತವಾಗಿ ಸಮಾನ ಮನಸ್ಕರೆಲ್ಲ ನಡಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಮೆಲ್ಕಾರ್‌ನಲ್ಲಿ ಗಂಜಿ ಊಟ: ಸಾಮರಸ್ಯ ನಡಿಗೆಯಲ್ಲಿ ಭಾಗವಹಿಸುವವರಿಗೆ ಬಿಳಿ ಟೋಪಿಗಳನ್ನು ಒದಗಿಸಲಾಗುತ್ತದೆ. ಮಧ್ಯಾಹ್ನ ಮೆಲ್ಕಾರ್ ನಲ್ಲಿ ಗಂಜಿ ಊಟದ ವ್ಯವಸ್ಥೆ ಮಾಡಲಾಗಿದೆ. ಸ್ವಲ್ಪ ಹೊತ್ತಿನ ವಿರಾಮದ ಬಳಿಕ ನಡಿಗೆ ಮುಂದುವರಿ ಯಲಿದೆ. ಮಾಣಿ ಸಮೀಪದ ನೇರಳ ಕಟ್ಟೆಯಲ್ಲಿ 5 ಗಂಟೆಗೆ ಜಾಥಾ ಸಮಾಪ್ತಿಯಾಗಲಿದೆ. ಬಳಿಕ ಸಾರ್ವಜನಿಕ ಸಭೆ ನಡೆಯಲಿದ್ದು, ಸಚಿವ ಬಿ. ರಮಾನಾಥ ರೈ, ವಿವಿಧ ಪಕ್ಷಗಳ ನಾಯಕರಾದ ಶ್ರೀರಾಮ ರೆಡ್ಡಿ, ಸಿದ್ಧನಗೌಡ ಪಾಟೀಲ್, ಡಾ| ಎಲ್. ಹನುಮಂತಯ್ಯ, ನಟ ಪ್ರಕಾಶ್ ರೈ ಮೊದಲಾದವರು ಭಾಷಣ ಮಾಡಲಿದ್ದಾರೆ.
ಸಾಮರಸ್ಯ ನಡಿಗೆಯು ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳನ್ನು ಹಾದು ಹೋಗಲಿದೆ. ಮಂಗಳೂರು ವಿಧಾನಸಭಾ ವ್ಯಾಪ್ತಿಯ ಫರಂಗಿಪೇಟೆಯಿಂದ ಆರಂಭವಾಗಿ ಬಂಟ್ವಾಳ ಕ್ಷೇತ್ರದ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಣಿ ವರೆಗೆ ಸಾಗಲಿದೆ.
ಪಾದಯಾತ್ರೆಗೆ ಬೆಂಬಲ: ನಡಿಗೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಬೇಕೆಂದು ಸಮಿತಿ ಜಿಲ್ಲಾಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್ ಕರೆ ನೀಡಿರುತ್ತಾರೆ ಎಂದು ಇಬ್ರಾಹಿಂ ಕೋಡಿಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ನಡಿಗೆಗೆ ಸಂಪೂರ್ಣ ಬೆಂಬಲ ಸೂಚಿಸಿರುವುದಾಗಿ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು ಕಣಚೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಸ್ಲಿಂ ಲೀಗ್ ಬೆಂಬಲವಿಲ್ಲ: ನಡಿಗೆಗೆಗೆ ಮುಸ್ಲಿಂ ಲೀಗ್ ಬೆಂಬಲ ನೀಡುವುದಿಲ್ಲ ಎಂದು ರಾಜ್ಯ ಮುಸ್ಲಿಂ ಲೀಗ್ ಸದಸ್ಯ ಮಹಮ್ಮದ್ ಇಸ್ಮಾಯಿಲ್ ಸ್ಪಷ್ಟಪಡಿಸಿದ್ದಾರೆ.
ಬಹುಭಾಷಾ ನಟ ಪ್ರಕಾಶ್ ರೈ ಅವರು ಬೆಳಗ್ಗೆ 9 ಗಂಟೆಗೆ ಫರಂಗಿಪೇಟೆಯಲ್ಲಿ ಶಾಂತಿಯ ಸಂಕೇತವಾದ ಪಾರಿವಾಳವನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಜಾಥಾಕ್ಕೆ ಸಾಂಕೇತಿಕವಾಗಿ ಚಾಲನೆ ನೀಡುವರು. ಉದ್ಘಾಟನೆ ಸಂದರ್ಭ ಯಾವುದೇ ಭಾಷಣ ಇರುವುದಿಲ್ಲ. ಬದಲಿಗೆ ಐದು ಕೊಂಬು ವಾದನದ ಮೂಲಕ ಸಾಮರಸ್ಯದ ಸಂದೇಶ ಮೊಳಗಿಸಲಾಗುವುದು. ಜಾಥಾದಲ್ಲಿ ಯಾವುದೇ ರೀತಿ ಘೋಷಣೆ ಕೂಗಲು, ಪಕ್ಷ-ಸಂಘಟನೆಗಳ ಧ್ವಜ ಪ್ರದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಸಚಿವ ರಮಾನಾಥ ರೈ “ಉದಯವಾಣಿ’ಗೆ ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಇಲ್ಲ
ಪಾದಯಾತ್ರೆ ಹಾದು ಹೋಗುವ ರಸ್ತೆಯುದ್ದಕ್ಕೂ ಆಯಾ ಠಾಣೆ ವ್ಯಾಪ್ತಿಯ ಪೊಲೀಸರು ಕಾನೂನು- ಸುವ್ಯವಸ್ಥೆ ಹಾಗೂ ಭದ್ರತೆಯನ್ನು ನೋಡಿ ಕೊಳ್ಳುತ್ತಾರೆ. ಯಾತ್ರೆಗೆ ಬಂದೋಬಸ್ತ್ಗಾಗಿ ಹೆಚ್ಚುವರಿ ಪೊಲೀಸರನ್ನು ಜಿಲ್ಲೆಯಲ್ಲಿ ನಿಯೋಜಿಸಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪಶ್ಚಿಮ ವಲಯದ ಉಸ್ತುವಾರಿ ಎಡಿಜಿಪಿ ಪ್ರತಾಪ್ ರೆಡ್ಡಿ ಜಿಲ್ಲೆಯ ಒಟ್ಟಾರೆ ಭದ್ರತೆ ವಿಚಾರಗಳ
ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಗಳೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.