ತೊಗರಿಗೆ ಬೆಂಬಲ ಬೆಲೆ ನೀಡಿ
Team Udayavani, Dec 12, 2017, 10:40 AM IST
ವಿಜಯಪುರ: ತೊಗರಿ ಬೆಳೆಗೆ 8 ಸಾವಿರ ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಆರ್.ಕೆ.ಎಸ್. ಹಾಗೂ ಎಸ್‌ಯುಸಿಐ
ನೇತೃತ್ವದಲ್ಲಿ ರೈತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾನಿರತ ರೈತರು, ಕೇಂದ್ರ ಸರ್ಕಾರ ರೈತ ವಿರೋಧಿ ನೀತು ಅನುಸರಿಸುತ್ತಿರುವುದಾಗಿ ದೂರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಭಗವಾನ್ ರೆಡ್ಡಿ, ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದಲ್ಲಿ ಬೆಳೆಯುವ ತೊಗರಿ ಬೆಳೆಗೆ ಸರ್ಕಾರ 5.500 ರೂ. ಬೆಂಬಲ ಬೆಲೆ ನೀಡುತ್ತಿದೆ. ಇದು ಬೆಳೆಗೆ ತಗಲುವ ಖರ್ಚಿಗೆ ಸರಿದೂಗದ ಕಾರಣ 8 ಸಾವಿರ ರೂ. ಬೆಂಬಲ ಬೆಲೆ ನೀಡಬೇಕು. ಪ್ರತಿ ಗ್ರಾಪಂ ಕೇಂದ್ರದಲ್ಲೇ ಖರೀದಿ ಕೇಂದ್ರ ತೆರೆಯಬೇಕು, ಬೆಳೆ ಖರೀದಿಸಿದ ಹಣವನ್ನು ತ್ವರಿತವಾಗಿ ರೈತರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಆಗ್ರಹಿಸಿದರು.
ಆರ್‌ಕೆಎಸ್ ಜಿಲ್ಲಾ ಸಂಚಾಲಕ ಬಾಳು ಜೇವೂರ ಮಾತನಾಡಿ, ವಿವಿಧ ಆಯೋಗಗಳಿಂದ ವರದಿ ಆಧರಿಸಿ ತೊಗರಿ, ಕಡಲೆ ಬೆಳೆಗಳಿಗೆ ಸೂಕ್ತ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು. ಬೆಂಬಲ ಬೆಲೆ ನೀಡುವಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ತಮ್ಮ ಪಾಲು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್.ಟಿ., ಶಿವಬಾಳಮ್ಮ, ಜ್ಯೋತಿ, ತಿಪ್ಪರಾಯ ಹತ್ತರಕಿ, ಶ್ರೀಶೈಲ ನಿಡೋಣಿ, ಮಹಾದೇವ ಲಿಗಾಡೆ, ಪ್ರಕಾಶ ಕಿಲಾರೆ, ಚಿದಾನಂದ ಯಳಮೇಲಿ, ಶ್ರೀಶೈಲ ನಿಮಂಗ್ರೇ, ಕಾಶಿರಾಯಗೌಡ ಪಾಟೀಲ, ಶಿವಪ್ಪ ಬ್ಯಾಕೋಡ್,
ಈರಪ್ಪ ಹತ್ತಿ, ಬಾಳಾಸಾಬ ಬಿರಾದಾರ, ದಾನೇಶ್ವರಿ ರಾಥೋಡ್, ಕಾಶಿಬಾಯಿ ರಾಠೊಡ, ನಿರ್ಮಲ ಚವ್ಹಾಣ, ನೀಲವ್ವ ರಾಠೊಡ, ಜಯಶ್ರೀ, ಕೆ.ಬಿ ಪಾಟೀಲ, ಮಲ್ಲಿಕಾರ್ಜುನ ಕಲಾದಗಿ ಹಾಗೂ ರತ್ನಾಪುರ, ತಾಜಾಪುರ, ಕಣಮುಚನಾಳ. ಹರನಾಳ, ಕನ್ನಾಳ್, ಗುಣಕಿ, ಡೋಣೂರ, ಬರಟಗಿ ತಾಂಡಾ, ಹಡಗಲಿ, ರಂಭಾಪುರ, ಬಾರಕೋಟ್ರಿ, ತಾಂಡಾ, ಬುರಣಾಪುರ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.