ಅಂತಾರಾಷ್ಟ್ರಿಯ ಕಬಡ್ಡಿ ಪಟುಗಳಿಗೆ “ಆರ್ಥಿಕ’ ಗ್ರಹಣ
Team Udayavani, Dec 12, 2017, 12:54 PM IST
ಮೈಸೂರು: ಸತತ ಪ್ರಯತ್ನ, ಕಠಿಣ ಪರಿಶ್ರಮದಿಂದ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸಾಧನೆ ಮಾಡಿ, ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿರುವ ನಗರದ ಸರ್ಕಾರಿ ಬಾಲಕಿಯರ ಶಾಲೆ ವಿದ್ಯಾರ್ಥಿನಿಯರು ಆರ್ಥಿಕ ಅಸ್ಥಿರತೆಯಿಂದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದೋ, ಇಲ್ಲವೋ ಎಂಬ ಸಂದಿಗ್ಧತೆಗೆ ಸಿಲುಕಿದ್ದಾರೆ.
ನಗರದ ಪೀಪಲ್ಸ್ ಪಾರ್ಕ್‌ನ ಸರ್ಕಾರಿ ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯರು ಕಳೆದ ಅಕ್ಟೋಬರ್‌ನಲ್ಲಿ ಹರಿಯಾಣದಲ್ಲಿ ನಡೆದ ಅರ್ಬನ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ನ್ಯಾಷನಲ್ ಅರ್ಬನ್ ಗೇಮ್ಸ್-2017(ಅಖೀಲ ಭಾರತ ಚಾಂಪಿಯನ್‌ಷಿಪ್)ನಲ್ಲಿ ಚಿನ್ನದ ಪದಕ ಗೆದ್ದು, ಆ ಮೂಲಕ 2018ರ ಜ.27, 28ರಂದು ನೇಪಾಳದ ಕಠ್ಮಂಡುವಿನಲ್ಲಿ ನಡೆಯುವ ಇಂಡೋ-ನೇಪಾಳ ಅರ್ಬನ್ ಗೇಮ್ಸ್ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ. ಆದರೆ, ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಲು ಲಕ್ಷಾಂತರ ರೂ. ಅಗತ್ಯವಿದ್ದು ಈ ಅವಕಾಶ ಲಭಿಸಲಿದೆಯೇ ಎಂದು ಎದುರು ನೋಡುತ್ತಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆ: ಕಬಡ್ಡಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಪೀಪಲ್ಸ್ ಪಾರ್ಕ್ ಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆ ದೈಹಿಕ ಶಿಕ್ಷಕರಾದ ಮೊಹಮ್ಮದ್ ರಫೀಕ್ ಪಾಷಾ, ಇತರೆ ಶಿಕ್ಷಕರ ಪ್ರೋತ್ಸಾಹದಲ್ಲಿ ಸಾಧನೆ ಹಾದಿಯಲ್ಲಿ ಸಾಗಿರುವ ವಿದ್ಯಾರ್ಥಿನಿಯರು ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ನೇಪಾಳದ ಕಠ್ಮಂಡುವಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ. ಇನ್ನೂ ಇದಕ್ಕೂ ಮುನ್ನ ರೂರಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲೂ ಪೀಪಲ್ಸ್ ಪಾರ್ಕ್‌ನ ಸರ್ಕಾರಿ ಶಾಲೆ ಬಾಲಕಿಯರು ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ಆದರೆ, ಅಂದೂ ಆರ್ಥಿಕ ಸಮಸ್ಯೆಯಿಂದ ಕಳೆದ ನವೆಂಬರ್‌ನಲ್ಲಿ ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿರಲಿಲ್ಲ. ಇದೀಗ ಮತ್ತೆ ಇದೇ ಅವಕಾಶ ಸಿಕ್ಕಿದ್ದರೂ, ಈ ಬಾರಿಯೂ ಆರ್ಥಿಕ ಸಮಸ್ಯೆ ಎದುರಾಗಿರುವುದು ವಿದ್ಯಾರ್ಥಿನಿಯರ ಬೇಸರಕ್ಕೆ ಕಾರಣವಾಗಿದೆ.
ನಿರಾಶೆ ಹೊಂದುತ್ತಾರೆ: ನಮ್ಮ ಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಲು 2ನೇ ಬಾರಿಯೂ ಅರ್ಹತೆ ಪಡೆದಿದೆ. ಈ ಬಾರಿಯಾದರೂ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸದಿದ್ದರೆ ಉತ್ಸಾಹ ಕಳೆದುಕೊಳ್ಳಲಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕ ಮೊಹಮದ್ ರಫೀಕ್ ಪಾಷಾ ಹೇಳುತ್ತಾರೆ.
ಸುಮಾರು 6 ಲಕ್ಷ ರೂ.,ಅಗತ್ಯ: ನಮ್ಮ ಶಾಲೆಯ ಮಕ್ಕಳು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆದರೆ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ 15 ಮಂದಿ ಸ್ಪರ್ಧಿಗಳು ಭಾಗವಹಿಸಲು ಅಂದಾಜು 6 ಲಕ್ಷ ರೂ.ಗಳ ಅಗತ್ಯವಿದೆ.
ಆದರೆ, ಹಣದ ಸಮಸ್ಯೆ ಎದುರಾಗಿದ್ದು, ಆರ್ಥಿಕ ನೆರವಿಗಾಗಿ ಪ್ರಯತ್ನ ಪಡೆಯಲಾಗುತ್ತಿದೆ. ಹಣದ ನೆರವು ಲಭಿಸಿದರೆ ನಮ್ಮ ತಂಡದ ಆಟಗಾರರು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ದೈಹಿಕ ಶಿಕ್ಷಕ ಮೊಹಮದ್ ರಫೀಕ್ ಪಾಷಾ ಮನವಿ ಮಾಡಿದ್ದಾರೆ.
ದೇಶಕ್ಕೆ ಪದಕ ತರುತ್ತೇವೆ: ಶಾಲೆಯ ಕಬಡ್ಡಿ ತಂಡ ನಾಯಕಿ ಸುಲ್ತಾನ, ಕಠಿಣ ಪರಿಶ್ರಮ, ಸತತ ಪ್ರಯತ್ನದಿಂದ ನಮಗೆ ಅವಕಾಶ ಲಭಿಸಿದೆ. ಈ ಹಿಂದೆ ರಾಷ್ಟ್ರೀಯ ಗ್ರಾಮೀಣ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಾಗ ಅವಕಾಶ ಸಿಕ್ಕಿದ್ದರೂ,
ಅಂತಾರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದು ತಂಡದ ವಿದ್ಯಾರ್ಥಿನಿಯರಿಗೆ ನಿರಾಸೆ ಮೂಡಿಸಿದೆ. ಆದರೆ, ಈ ಬಾರಿ ಅವಕಾಶ ಲಭಿಸಿದರೆ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನದ ಮೂಲಕ ದೇಶಕ್ಕೆ ಪದಕ ತಂದುಕೊಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
* ಸಿ.ದಿನೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.