ಎಐಸಿಸಿ ನೂತನ ಅಧ್ಯಕ್ಷ ರಾಹುಲ್ಗೆ ಸಿಎಂ ಅಭಿನಂದನೆ
Team Udayavani, Dec 13, 2017, 9:58 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ರಾಹುಲ್ ಗಾಂಧಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಮಂಗಳವಾರ ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷರಾಗಿ
ಆಯ್ಕೆಗೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಕರ್ನಾಟಕಕ್ಕೆ ಆಗಮಿಸುವಂತೆಯೂ
ರಾಹುಲ್ಗಾಂಧಿಯವರಿಗೆ ಆಹ್ವಾನ ನೀಡಿದರು. ಮುಖ್ಯಮಂತ್ರಿಯವರಿಗೆ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ. ಜಾರ್ಜ್ ಸಾಥ್ ನೀಡಿದರು.
ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗಲು ಬೃಹತ್ ಸಮಾವೇಶ ಆಯೋಜಿಸಿದ್ದು, ಆ ಸಮಾವೇಶಕ್ಕೆ ಬರುವಂತೆ ಸಿದ್ದರಾಮಯ್ಯ ನವರು ರಾಹುಲ್ಗಾಂಧಿಯವರಿಗೆ ಆಹ್ವಾನ ನೀಡಿದರು. ಎಐಸಿಸಿ ಉಸ್ತುವಾರಿ ವೇಣುಗೋಪಾಲ್ ಜತೆ ಚರ್ಚಿಸಿ ದಿನಾಂಕ ನಿಗದಿಪಡಿಸುವಂತೆ ರಾಹುಲ್ಗಾಂಧಿ ಸೂಚಿಸಿದರು ಎಂದು ಹೇಳಲಾಗಿದೆ. ಜೆಡಿಎಸ್ ಬಂಡಾಯ ಶಾಸಕರಾದ
ಜಮೀರ್ ಅಹಮದ್ ಹಾಗೂ ಚೆಲುವರಾಯಸ್ವಾಮಿ ಸಹ ಮುಖ್ಯಮಂತ್ರಿ ಜತೆಯಲ್ಲಿ ರಾಹುಲ್ಗಾಂಧಿ ಭೇಟಿ ಮಾಡಿ ಶುಭ ಕೊರಿದರು.
ಟಿಕೆಟ್ ಪಕ್ಕಾ: ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ನಮಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ರಾಹುಲ್ಗಾಂಧಿ ನೀಡಿದ್ದಾರೆ. ಹೀಗಾಗಿ, ನಮಗೇನೂ ಭಯವಿಲ್ಲ. ನಾವು ಕಾಂಗ್ರೆಸ್ ಸೇರ್ಪಡೆಯಾಗುವ ಸಂಬಂಧ
ನಡೆಸಲು ತೀರ್ಮಾನಿಸಿರುವ ಸಮಾವೇಶಕ್ಕೆ ರಾಹುಲ್ಗಾಂಧಿಯವರಿಗೆ ಆಹ್ವಾನ ನೀಡಿದ್ದೇವೆ. ಇನ್ನು ಒಂದಷ್ಟು ಜನ ಶಾಸಕರು ನಮ್ಮ ಜತೆ ಕಾಂಗ್ರೆಸ್ಗೆ ಬರಲಿದ್ದಾರೆ. ಕಾಂಗ್ರೆಸ್ನಲ್ಲಿ ಬೆಳೆಯಲು ನಮಗೆ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು.
ರಾಹುಲ್ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಗುಜರಾತ್ ಚುನಾವಣೆ ಬಗ್ಗೆ ವಿಚಾರಿಸಿದೆ. ಗೆಲ್ಲುವ ಅವಕಾಶ ಇದೆ ಅಂತ
ಹೇಳಿದ್ದರು. ಕಾಂಗ್ರೆಸ್ಗೆ ಮತ್ತಷ್ಟು ಶಾಸಕರು ಬರುವ ಬಗ್ಗೆ ಸಂಪರ್ಕದಲ್ಲಿದ್ದಾರೆ. ಬರುವವರನ್ನೆಲ್ಲಾ ಸೇರಿಸಿಕೊಳ್ಳಲು
ಸಾಧ್ಯವಿಲ್ಲ. ಗೆಲ್ಲುವ ಸಾಧ್ಯತೆ ಮಾನದಂಡ.
● ಸಿದ್ದರಾಮಯ್ಯ, ಸಿಎ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.