ಹೊನ್ನಾವರದಲ್ಲಿ ವಿದ್ಯಾರ್ಥಿನಿಗೆ ಇರಿತ; ಉದ್ವಿಗ್ನ ಸ್ಥಿತಿ
Team Udayavani, Dec 14, 2017, 12:11 PM IST
ಹೊನ್ನಾವರ : ಕೋಮು ಘರ್ಷಣೆ,ಪರೇಶ್ ಮೇಸ್ತಾ ಹತ್ಯೆ, ಹಿಂಸಾಚಾರದಿಂದ ತೀವ್ರ ಆತಂಕ ಮನೆ ಮಾಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಶಾಂತಿ ಕಡಡುವ ಯತ್ನ ಮುಂದುವರಿದಿದ್ದು, ಮಾಗೋಡು ಎಂಬಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಇರಿದು ಅಟ್ಟಹಾಸ ಮೆರೆದಿದ್ದಾರೆ.
ಶಾಲೆಗೆ ತೆರಳುತ್ತಿದ್ದ ಕಾವ್ಯ ಶೇಖರ್ ಎಂಬ ವಿದ್ಯಾರ್ಥಿನಿಗೆ ಅನ್ಯಕೋಮಿನ ಇಬ್ಬರು ಯುವಕರು ಇರಿದು ಹತ್ಯೆಗೈಯಲು ಯತ್ನಿಸಿದ್ದು, ಈ ವೇಳೆ ಆಕೆ ತಪ್ಪಿಸಿಕೊಂಡಿರುವುದಾಗಿ ವರದಿಯಾಗಿದೆ.
ಕಾವ್ಯಾಳ 2 ಕೈಗಳಿಗೆ ಚೂರಿ ಇರಿತದ ಗಾಯಗಳಾಗಿದ್ದು, ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮುಂಜಾಗೃತಾ ಕ್ರಮವಾಗಿ ಹೊನ್ನಾವರದಲ್ಲಿ 24 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿ ಗೊಳಿಸಲಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗುತ್ತಿರುವ ಬಗ್ಗೆ ವರದಿಯಾಗಿದೆ.
ಎಸ್‌ಪಿ ವಿನಾಯಕ್ ಪಾಟೀಲ್ , ಜಿಲ್ಲಾಧಿಕಾರಿ ನಕುಲ್ ಆಸ್ಪತ್ರೆಗೆ ಭೇಟಿ ಕಾವ್ಯಾಳ ಬಳಿ ವಿವರ ಪಡೆದಿದ್ದಾರೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ದುಷ್ಕರ್ಮಿಗಳ ಗುರುತಿನ ಬಗ್ಗೆ ಕಾವ್ಯಾ ಬಳಿ ಕೇಳಿದಾಗ ‘ನನಗೆ ಸರಿಯಾಗಿ ಜ್ಞಾಪಕಕ್ಕೆ ಬರುತ್ತಿಲ್ಲ’ ಎಂದಿರುವುದಾಗಿ ಡಿಸಿ ನಕುಲ್ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.