ಹೊಸ ವರ್ಷಕ್ಕೆ ಮದ್ಯ ನಿಷೇಧ ಕುರಿತು ಸರ್ಕಾರದ ನಿಲುವು ಕೇಳಿದ ಕೋರ್ಟ್‌


Team Udayavani, Dec 14, 2017, 12:55 PM IST

new-year.jpg

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ನಗರಾದ್ಯಂತ ಮದ್ಯಮಾರಾಟ ನಿಷೇಧ ಸಂಬಂಧ ಸರ್ಕಾರದ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ. ಡಿ.31 ಹಾಗೂ ಜನವರಿ 1ರಂದು ನಗರದಲ್ಲಿ ಮದ್ಯ ಮಾರಾಟ ನಿರ್ಬಂಧ ಹೇರುವಂತೆ ಕೋರಿ ಎನ್‌. ನಾಗೇಶ್‌ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸಿದ  ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಕಳೆದ ವರ್ಷ ಡಿ.31ರಂದು ರಾತ್ರಿ ನಡೆದ ಹೊಸ ವರ್ಷದ ಸಂಭ್ರಮಾಚರಣೆ  ವೇಳೆ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಗಳು ವರದಿಯಾಗಿವೆ. ಈ ವಿಚಾರ ಅಂತಾರಾಷ್ಟ್ರೀಯ  ಮಟ್ಟದಲ್ಲಿ ಸುದ್ದಿಯಾಗಿದೆ.  ಜೊತೆಗೆ ಎರಡೂ ದಿನಗಳ ಕಾಲ ನಡೆಯಲಿರುವ ಸಂಭ್ರಮಾಚರಣೆಯಲ್ಲಿ ಪಾನಮತ್ತರಾಗುವ ಮಂದಿ ವಾಹನಗಳನ್ನು ವೇಗವಾಗಿ ಚಲಾಯಿಸಿ ಸಂಚಾರ ನಿಯಮಗಳನ್ನು ಉಲ್ಲಂ ಸುತ್ತಾರೆ.

ಹೀಗಾಗಿ ಮುಂಜಾಗ್ರತೆ ಕ್ರಮವಾಗಿ  ಡಿ.31 ಹಾಗೂ ಜನವರಿ 1ರಂದು ನಗರಾದ್ಯಂತ ಮದ್ಯ ಮಾರಾಟ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.ಇದಕ್ಕೆ  ಪ್ರತಿಕ್ರಿಯಿಸಿದ ನ್ಯಾಯಪೀಠ, ಕಳೆದ ವರ್ಷ ಅರ್ಜಿದಾರರು ಉಲ್ಲೇಖೀಸಿದ ರೀತಿ ಪ್ರಕರಣಗಳು ವರದಿಯಾಗಿಯಾಗಿದ್ದು ನಿಜವೇ? ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಕೆಲವು ಪ್ರಕರಣಗಳು ವರದಿಯಾಗಿದ್ದವು ಎಂದು ತಿಳಿಸಿದರು.

ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಹಾಗಾದರೇ ರಾಜ್ಯಸರ್ಕಾರ ಈ ಬಾರಿ ಎರಡೂ ದಿನಗಳ ಕಾಲ ಹೊಸ ವರ್ಷ ಸಂಭ್ರಮಾಚಾರಣೆ ವೇಳೆಯಲ್ಲಿ ಕೈಗೊಳ್ಳಲಿರುವ ಕ್ರಮಗಳ ವರದಿ ಹಾಗೂ  ಅರ್ಜಿದಾರರ ಮನವಿಯನ್ನು ಪರಿಗಣಿಸುವ ಕುರಿತು ಸರ್ಕಾರದ ನಿಲುವೇನು ಎಂಬುದನ್ನು ಮುಂದಿನ ವಿಚಾರಣೆ ವೇಳೆ ಸ್ಪಷ್ಟಪಡಿಸುವಂತೆ  ಸೂಚಿಸಿ ಡಿ. 15ಕ್ಕೆ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.