ಮತಗಟ್ಟೆಯಲ್ಲಿ ಪ್ರಧಾನಿ ನೋಡಲು ಜನಸಾಗರ; ಕಾಂಗ್ರೆಸ್ ದೂರು!
Team Udayavani, Dec 14, 2017, 1:34 PM IST
ಅಹ್ಮದಾಬಾದ್: ಗುಜರಾತ್ ವಿಧಾನಸಭೆಗೆ ಇಂದು ಗುರುವಾರ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ವಿಶೇಷವಾಗಿ ಮಾಧ್ಯಮಗಳ ಗಮನ ಸೆಳೆಯಿತು.
ಸಬರಮತಿಯ ರಣಿಪ್ನ ನಿಶಾನ್ ಹೈಸ್ಕೂಲ್ನ ಮತಗಟ್ಟೆಗೆ ಭಾರೀ ಭದ್ರತೆಯೊಂದಿಗೆ ಆಗಮಿಸಿದ ಮೋದಿ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿ ಕೆಲ ಕಾಲ ಕಳೆದರು. ಬಳಿಕ ಸರತಿಯ ಸಾಲಿನಲ್ಲಿ ಸಾಮಾನ್ಯನಂತೆ ನಿಂತು ಮತ ಚಲಾಯಿಸಿದರು.
ಮತಗಟ್ಟೆಯ ಹೊರಗೆ ಬಂದ ಪ್ರಧಾನಿ ಮೋದಿ ತಮ್ಮನ್ನು ನೋಡಲು ನೆರೆದಿದ್ದ ಸಾವಿರಾರು ಜನರತ್ತ ತಮ್ಮ ಶಾಯಿ ಹಚ್ಚಿದ ಬೆರಳನ್ನು ತೋರಿಸಿದರು.
ಒಂದು ರೀತಿಯಲ್ಲಿ ರೋಡ್ ಶೋ ವಾತವರಣ ಕಂಡು ಬಂದಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ನಿಯಂತ್ರಿಸಲು ಭಾರಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಕಾಂಗ್ರೆಸ್ ದೂರು
‘ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿ ರೋಡ್ ಶೋ ನಡೆಸಿ ಮತದಾರರನ್ನು ಸೆಳೆಯುವ ಕೆಲಸ ಮಾಡಿದ್ದಾರೆ’ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ‘ನಾವು ಯಾರನ್ನೂ ಕರೆದಿಲ್ಲ ಜನರು ಸ್ವಯಂ ಪ್ರೇರಿತರಾಗಿ ಮತ ಗಟ್ಟೆಯ ಸುತ್ತ ನೆರೆದಿದ್ದರು’ ಎಂದಿದೆ.
2014 ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮೋದಿ ವಿರುದ್ಧ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.