ಎಸ್.ಎಲ್.ಭೈರಪ್ಪಗೆ ನೃಪತುಂಗ ಪ್ರಶಸ್ತಿ
Team Udayavani, Dec 15, 2017, 6:00 AM IST
ಬೆಂಗಳೂರು: ಕನ್ನಡದ ಜ್ಞಾನಪೀಠವೆಂದೇ ಗುರುತಿಸಿಕೊಂಡಿರುವ ನೃಪತುಂಗ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಹಿರಿಯ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ಅವರನ್ನು 2017ನೇ ಸಾಲಿನ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಪ್ರಶಸ್ತಿಯು 7 ಲಕ್ಷ ರೂ.ನಗದು, ಫಲಕ, ಪ್ರಶಸ್ತಿ ಪತ್ರ ಒಳಗೊಂಡಿದೆ. (ಜ್ಞಾನಪೀಠ ಪುರಸ್ಕಾರಕ್ಕೆ 10 ಲಕ್ಷ ರೂ.ನಗದು, ವಾಗೆªàವಿಯ ಕಂಚಿನ ಪ್ರತಿಮೆ ನೀಡಲಾಗುತ್ತದೆ.)
ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಬಿ.ಆರ್.ಲಕ್ಷ್ಮಣರಾವ್, ವಿದ್ವಾಂಸ ಡಾ.ವೀರಣ್ಣ ರಾಜೂರ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಡಾ.ಎ.ಎನ್.ಪ್ರಕಾಶ್‌ಗೌಡ, ಕಾರ್ಮಿಕ ಕಲ್ಯಾಣಾಧಿಕಾರಿ ವಿಜಯಕುಮಾರ್, ಕೆಎಸ್‌ಆರ್‌ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ಇದ್ದರು.ಈ ಹಿಂದೆ ದೇ.ಜವರೇಗೌಡ, ಪಾಟೀಲ ಪುಟ್ಟಪ್ಪ, ಜಿ.ಎಸ್.ಶಿವರುದ್ರಪ್ಪ, ಸಿ.ಪಿ.ಕೃಷ್ಣಕುಮಾರ್, ಎಂ.ಎಂ.ಕಲಬುರ್ಗಿ, ಡಾ.ಚಿದಾನಂದಮೂರ್ತಿ, ಸಾರಾ ಅಬೂಬಕ್ಕರ್, ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ ಹಾಗೂ ಟಿ.ಬಿ.ವೆಂಕಟಾಚಲಶಾಸಿŒ ಅವರು ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು.
ಮಯೂರವರ್ಮ ಸಾಹಿತ್ಯ ಪ್ರಶಸ್ತಿ
2017ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿಗೆ ರಾಮಲಿಂಗೇಶ್ವರ (ಸಿಸಿರಾ), ಡಾ.ಸಿ.ನಂದಿನಿ ಹಾಗೂ ಶಾಂತಿ ಕೆ.ಅಪ್ಪಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ 45 ವರ್ಷದೊಳಿನ ಸಾಹಿತಿಗಳಿಗೆ ಪ್ರಶಸ್ತಿ ನೀಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಈ ಪ್ರಶಸ್ತಿಯನ್ನು ನೀಡುತ್ತಿದೆ. ಪ್ರಶಸ್ತಿಯು 25 ಸಾವಿರ ರೂ.ನಗದು, ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.