ಮಾ.23ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ
Team Udayavani, Dec 15, 2017, 6:00 AM IST
ಬೆಂಗಳೂರು : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ 2018ರ ಮಾರ್ಚ್ 23ರಿಂದ ಏ.6ರ ತನಕ ನಡೆಯಲಿದೆ.
ಈ ಹಿಂದೆ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಪಟ್ಟಿಗೆ ಬಂದಿರುವ ಆಕ್ಷೇಪಣೆಗಳ ಆಧಾರದಲ್ಲಿ ಸ್ವಲ್ಪ ಬದಲಾವಣೆ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಗುರುವಾರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
ಬುಧವಾರ ಪಿಯು ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಅಂತಿಮಗೊಳಿಸಿದ್ದ ಬೆನ್ನಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಅಧಿಕಾರಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 2018ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಮಾರ್ಚ್ ತಿಂಗಳಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ ಪೂರ್ಣಗೊಳ್ಳಲಿದೆ. 2018ರ ಮಾರ್ಚ್ 1 ರಿಂದ 17ರ ತನಕ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 23 ರಿಂದ ಏ.6ರ ತನಕ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.
ಪ್ರಥಮ ಭಾಷೆ ಕನ್ನಡದಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮಾಜ ವಿಜ್ಞಾನ ವಿಷಯದೊಂದಿಗೆ ಕೊನೆಯಾಗಲಿದೆ. ಬೆಳಗ್ಗಿನ ಪರೀಕ್ಷೆ 9.30ರಿಂದ 12.15ರ ತನಕ ಹಾಗೂ ಮಧ್ಯಾಹ್ನ ಪರೀಕ್ಷೆ 2 ಗಂಟೆಯಿಂದ 5.15ರ ತನಕ ನಡೆಯಲಿದೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ವಿಜ್ಞಾನ ಪರೀಕ್ಷೆಗೆ ಎರಡು ದಿನ ರಜೆ ನೀಡಿದ್ದರು ಮತ್ತು ಏ.4ಕ್ಕೆ ಕೊನೆಯ ಪರೀಕ್ಷೆ ನಡೆಸುವುದಾಗಿ ಹೇಳಿದ್ದರು. ಅಂತಿಮ ವೇಳಾಪಟ್ಟಿಯಲ್ಲಿ ಪರೀಕ್ಷೆ ಎರಡು ದಿನ ವಿಸ್ತರಣೆಯಾಗಿದೆ. ವಿಜ್ಞಾನ ವಿಷಯಕ್ಕೆ ನಾಲ್ಕು ದಿನ ರಜೆ ನೀಡಲಾಗಿದೆ.
ತಾತ್ಕಾಲಿಕ ವೇಳಾಪಟ್ಟಿಗೆ ಎರಡೇ ಆಕ್ಷೇಪಣೆ
ಈ ಮಧ್ಯೆ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ಬಂದಿರುವುದು ಕೇವಲ ಎರಡು ಆಕ್ಷೇಪಣೆ! ಹೌದು, ರಾಜ್ಯ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.
ಅಕ್ಟೋಬರ್ ತಿಂಗಳಲ್ಲಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ 2018ರ ಮಾರ್ಚ್ ತಿಂಗಳಲ್ಲೇ ನಡೆಯಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂಬ ಕೂಗು ರಾಜ್ಯಾದ್ಯಂತ ಕೇಳಿಬಂದಿತ್ತಾದರೂ, ಯಾರೂ ಕೂಡ ಆಕ್ಷೇಪಣೆಯ ರೂಪದಲ್ಲಿ ಸಲ್ಲಿಸಿಲ್ಲ.
ಎಸ್ಸೆಸ್ಸೆಲ್ಸಿ ವೇಳಾಪಟ್ಟಿ
ಮಾ.23 ಪ್ರಥಮ ಭಾಷೆ(ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತ)
ಮಾ.24 (ಕೋರ್ ಸಬೆjಕ್ಟ್), ಅರ್ಥಶಾಸ್ತ್ರ
ಮಾ.26 ಗಣಿತ(ಮಧ್ಯಾಹ್ನ-ಸಮಾಜ ಶಾಸ್ತ್ರ)
ಮಾ.28 ದ್ವಿತೀಯ ಭಾಷೆ(ಕನ್ನಡ, ಇಂಗ್ಲಿಷ್)
ಏ.2 ವಿಜ್ಞಾನ, ರಾಜ್ಯಶಾಸ್ತ್ರ (ಮಧ್ಯಾಹ್ನ- ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ)
ಏ.4 ತೃತೀಯ ಭಾಷೆ(ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು,ಸಂಸ್ಕೃತ, ಕೊಂಕಣಿ, ತುಳು)(ಎನ್‌ಎಸ್‌ಕ್ಯೂಎಫ್ ಪರೀಕ್ಷೆ)
ಏ.6 ಸಮಾಜ ವಿಜ್ಞಾನ
ವಿಜ್ಞಾನ ಪರೀಕ್ಷೆಗೆ ನಾಲ್ಕು ದಿನ ರಜೆ :
ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಮಾ.31ರಂದು ವಿಜ್ಞಾನ ಪರೀಕ್ಷೆ ನಡೆಸುವುದಾಗಿ ತಿಳಿಸಲಾಗಿತ್ತು. ಅಂತಿಮ ವೇಳಾಪಟ್ಟಿಯಲ್ಲಿ ಅದನ್ನು ಬದಲಿಸಲಾಗಿದೆ. ಏ.2ರಂದು ವಿಜ್ಞಾನ ಪರೀಕ್ಷೆ ನಡೆಯಲಿದ್ದು, ಮಾ.28ಕ್ಕೆ ದ್ವಿತೀಯ ಭಾಷೆ ಪರೀಕ್ಷೆ ಮುಗಿದ ನಂತರ ಮಾ.29ರಂದು ಮಹಾವೀರಜಯಂತಿ, ಮಾ.30 ಗುಡ್‌ಫ್ರೈಡ್ ಜತೆ ಶನಿವಾರ, ಭಾನುವಾರ ಸೇರಿಕೊಂಡಿರುವುದರಿಂದ ವಿಜ್ಞಾನ ಪರೀಕ್ಷೆಗೆ ಓದಲು ನಾಲ್ಕು ದಿನ ರಜೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.