ಆಳ್ವಾಸ್‌ನಲ್ಲಿ ಎನ್‌ಸಿಸಿ ರಾಷ್ಟ್ರೀಯ ಭಾವೈಕ್ಯ ಶಿಬಿರ ಪ್ರಾರಂಭ
Team Udayavani, Dec 15, 2017, 11:44 AM IST
ಮೂಡಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಆಶ್ರಯದಲ್ಲಿ ಸಂಸ್ಥೆಯ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಡಿ.23ರ ವರೆಗೆ ನಡೆಯಲಿರುವ ಎನ್‌ಸಿಸಿ ರಾಷ್ಟ್ರೀಯ ಮಟ್ಟದ ಭಾವೈಕ್ಯ ಶಿಬಿರಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಶಿಬಿರದ ಮುಖ್ಯ ಕಮಾಂಡರ್ ಕರ್ನಲ್ ಅನಿಲ್ ನೌಟಿಯಲ್ ಅವರು ಕೆಡೆಟ್‌ಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ವಿವಿಧ ರಾಜ್ಯಗಳ ಸಂಸ್ಕೃತಿಯ ಅನಾವರಣ ಈ ಶಿಬಿರದ ಮೂಲಕ ಆಗುತ್ತಿದೆ. ಇಲ್ಲಿ ಪಡೆದ ಜ್ಞಾನ, ಅನುಭವಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಮುಂದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿಂದೆ ಎನ್‌ಸಿಸಿ ಕೆಡೆಟ್‌ಗಳಾಗಿದ್ದವರು ಇಂದು ಅಪ್ರತಿಮ ಸಾಧಕರಾಗಿದ್ದಾರೆ. ಅವರನ್ನು ಮಾದರಿಯನ್ನಾಗಿ ಸ್ವೀಕರಿಸಿ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಬಿರದಲ್ಲಿ ವಿವಿಧ ರಾಜ್ಯಗಳ ಶ್ರೇಷ್ಠತೆಯು ಪ್ರತಿ ಬಿಂಬಿಸಲಿ. ರಾಷ್ಟ್ರೀಯ ಏಕತೆ ಈ ಶಿಬಿರದ ಮೂಲಕ ಸಾಕಾರಗೊಳ್ಳಲಿ ಎಂದರು.
19ನೇ ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ವಿ.ಎಂ. ನಾಯಕ್, 19ನೇ ಕರ್ನಾಟಕ ಬೆಟಾಲಿಯನ್ ಮಡಿಕೇರಿಯ ಆಡಳಿತಾಧಿಕಾರಿ ಸಂಜಯ್ ಅಮ್ಟೆ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್, ಶಿಬಿರದ ಸಂಯೋಜಕ ಡಾ| ರಾಜೇಶ್ ಉಪಸ್ಥಿತರಿದ್ದರು. ಮೊದಲ ದಿನ ವಿವಿಧ ಸ್ಪರ್ಧೆಗಳನ್ನು ಕೆಡೆಟ್‌ಗಳಿಗೆ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.