ಮೆರಿಟ್ ಆಧರಿತ ವೀಸಾ ನೀಡಲು ಅಮೆರಿಕ ನಿರ್ಧಾರ?
Team Udayavani, Dec 16, 2017, 6:30 AM IST
ವಾಷಿಂಗ್ಟನ್: ಅಮೆರಿಕದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಕುಟುಂಬ ಆಧಾರಿತ ವಲಸೆ ವೀಸಾ ನೀತಿಯನ್ನು ಮೆರಿಟ್ ಆಧರಿತವನ್ನಾಗಿ ಬದಲಿಸಲು ಡೊನಾಲ್ಡ್ ಟ್ರಂಪ್ ಸರಕಾರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಪ್ರಾಥಮಿಕ ತಯಾರಿ ವೈಟ್ಹೌಸ್ನಲ್ಲಿ ಆರಂಭವಾಗಿದೆ. ಈಗಾಗಲೇ ಇರುವ ವೀಸಾ ನೀತಿ ಅಮೆರಿಕದ ಕೆಲಸಗಾರರಿಗೆ ಅಪಾ ಯವಷ್ಟೇ ಅಲ್ಲ, ಹಾನಿಕರವೂ ಆಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರವನ್ನು ಟ್ರಂಪ್ ಚುನಾವಣಾ ಪ್ರಣಾಳಿಕೆಯಲ್ಲೇ ಪ್ರಸ್ತಾವಿಸಿದ್ದರು. ಇದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಈಗ ಕ್ರಮ ಕೈಗೊಳ್ಳಲಾಗುತ್ತಿದೆ.
2005ರಿಂದ 2016ರ ಅವಧಿಯಲ್ಲಿ ಅಮೆರಿಕಕ್ಕೆ ವಲಸೆ ಬಂದ 1.3 ಕೋಟಿ ಜನರ ಪೈಕಿ 93 ಲಕ್ಷ ಜನರು ಕುಟುಂಬ ಸದಸ್ಯರನ್ನೂ ಕರೆತಂದಿದ್ದಾರೆ. ಅಲ್ಲದೆ ಕಳೆದ ಒಂದು ದಶಕದಲ್ಲಿ ಸರಾಸರಿ 15 ವಲಸಿಗರಲ್ಲಿ ಒಬ್ಬರಿಗೆ ಮಾತ್ರ ಗ್ರೀನ್ ಕಾರ್ಡ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.