ಸಣ್ಣ ವ್ಯಾಪಾರಿಗಳತ್ತ ಭೂಗತ ಲೋಕದ ದೃಷ್ಟಿ!


Team Udayavani, Dec 16, 2017, 8:46 AM IST

16-6.jpg

ಮಂಗಳೂರು: ರಿಯಲ್‌ ಎಸ್ಟೇಟ್‌ ವ್ಯವಹಾರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಈಗ ಭೂಗತ ಪಾತಕಿಗಳ ಚಿತ್ತ ಸಣ್ಣ ವ್ಯಾಪಾರಿಗಳತ್ತ ತಿರುಗಿದೆ. ಹೀಗಾಗಿ, ಈಗ ಸಣ್ಣಪುಟ್ಟ ವ್ಯಾಪಾರಸ್ಥರು ಕೂಡ ಭೂಗತ ಪಾತಕಿಗಳ ಹಫ್ತಾ ವಸೂಲಿಗೆ ಟಾರ್ಗೆಟ್‌
ಆಗುತ್ತಿದ್ದಾರೆ!

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ 30ಕ್ಕೂ ಅಧಿಕ ಸಣ್ಣ ವ್ಯಾಪಾರಿಗಳಿಗೆ ಭೂಗತ ಪಾತಕಿ ಕಲಿ ಯೋಗೀಶ ಮತ್ತು ಆತನ ಸಹಚರರಿಂದ ಬೆದರಿಕೆ ಕರೆ ಬಂದಿದ್ದು, ಯಾರೂ ಈ ಬಗ್ಗೆ ಪೊಲೀಸರಿಗೆ ದೂರು ನೀಡುವ ಧೈರ್ಯ ಪ್ರದರ್ಶಿಸಿಲ್ಲ. ಅದರ ಪರಿಣಾಮ ಎಂಬಂತೆ ಡಿ.8ರಂದು ಮಂಗಳೂರಿನ ಕಾರ್‌ ಸ್ಟ್ರೀಟ್‌ನ ಪ್ರಸಿದ್ಧ  ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್‌ ಸ್ಯಾರಿಸ್‌ ಬಟ್ಟೆ ಮಳಿಗೆಯಲ್ಲಿ ರಾತ್ರಿ 8ರ ವೇಳೆ ಏಕಾಏಕಿ ಗುಂಡಿನ ದಾಳಿ ನಡೆದಿದ್ದು, ಅಂಗಡಿಯ ಕೆಲಸಗಾರ ಮಹಾಲಿಂಗ ನಾಯ್ಕ ಗಾಯ ಗೊಂಡಿದ್ದರು. ಈ ಘಟನೆ ನಡೆದ ಮರುದಿನ ಭೂಗತ ಪಾತಕಿ ಕಲಿ ಯೋಗೀಶ ಕೆಲವು ಮಾಧ್ಯ ಮಗಳಿಗೆ ಫೋನ್‌ ಕರೆ ಮಾಡಿ ಈ ಶೂಟೌಟ್‌ ನಡೆಸಿರುವುದಾಗಿ ಹೇಳಿಕೊಂಡಿದ್ದಾನೆ.

ಪೊಲೀಸರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೆಲವು ಬಿಲ್ಡರ್‌ಗಳು ಭೂಗತ ಪಾತಕಿಗಳ ತಂಟೆ ಬೇಡ ಎಂದುಕೊಂಡು ಪಾತಕಿಗಳಿಗೆ ಮಾಮೂಲು ಸಂದಾಯ ಮಾಡುತ್ತಲೇ ಬಂದಿದ್ದರು. ಆದರೆ 2016ರ ನವೆಂಬರ್‌ನಲ್ಲಿ ಕೇಂದ್ರ ಸರಕಾರದ ನೋಟು ರದ್ದತಿ ಕ್ರಮದ ಬಳಿಕ ರಿಯಲ್‌ ಎಸ್ಟೇಟ್‌ ಉದ್ಯಮ ಸಂಪೂರ್ಣವಾಗಿ ನೆಲ ಕಚ್ಚಿದ್ದು, ಆ ಬಳಿಕ ಪಾತಕಿಗಳಿಗೆ ಬಿಲ್ಡರ್‌ಗಳಿಂದ ಸಂದಾಯವಾಗುವ ಹಫ್ತಾ ಹಣಕ್ಕೆ ಸಂಪೂರ್ಣ ಬ್ರೇಕ್‌ ಬಿದ್ದಿದೆ. ಸುಮಾರು ಒಂದು ವರ್ಷದಿಂದ ಹಫ್ತಾ ಸಂದಾಯವಾಗದ ಕಾರಣ ಭೂಗತ ಪಾತಕಿಗಳು ಕಾಂಚಾಣವಿಲ್ಲದೆ ಕಂಗಾಲಾಗಿದ್ದಾರೆ. ಹಾಗಾಗಿ ಈಗ ಅವರೆಲ್ಲ ಅನಿವಾರ್ಯವಾಗಿ ಸಣ್ಣ ವ್ಯಾಪಾರಿಗಳನ್ನು ಟಾರ್ಗೆಟ್‌ ಮಾಡಿ ಸಿಕ್ಕಿದ್ದನ್ನು ದಕ್ಕಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಭೂಗತ ಪಾತಕಿ ಕಲಿ ಯೋಗೀಶನಿಂದ ಮೂಲ್ಕಿ, ಕಿನ್ನಿಗೋಳಿ, ಪಡುಬಿದ್ರೆ ಪರಿಸರದ ಸಣ್ಣ ವ್ಯಾಪಾರಿಗಳಿಗೆ ಹಫ್ತಾ ಹಣಕ್ಕೆ ಬೇಡಿಕೆ ಇರಿಸಿ ಬೆದರಿಕೆ ಕರೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಭೂಗತ ಪಾತಕಿಗಳೊಂದಿಗೆ ಯಾವುದೇ ಸಂಪರ್ಕ ಇಲ್ಲದಿರುವ ವ್ಯಕ್ತಿಗಳು ಈಗ ಈತನ ಬಲೆಗೆ ಸಿಲುಕಿದ್ದಾರೆ. ವಿದೇಶದಿಂದ ಕರೆಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಿದಾಗ ಕೆಲವು ಕರೆಗಳು ಆಸ್ಟ್ರೇಲಿಯಾದಿಂದ ಬಂದಿರಬೇಕೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನೋಟು ಅಮಾನ್ಯಿಕರಣ ಮತ್ತು ಜಿಎಸ್‌ಟಿಯಿಂದಾಗಿ ಸಣ್ಣ ವ್ಯಾಪಾರಿಗಳು ಈಗಾಗಲೇ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಭೂಗತ ಪಾತಕಿಗಳ ಬೆದರಿಕೆಗಳಿಂದಾಗಿ ಹೈರಾಣಾಗಿದ್ದಾರೆ. ಈ ಸಂಕಟದಿಂದ ಪಾರಾಗುವ ಮಾರ್ಗ ಹೇಗೆ ಎಂಬ ಆತಂಕದಲ್ಲಿದ್ದಾರೆ. ಇತ್ತ ಭೂಗತ ಪಾತಕಿಗಳ ಬೆದರಿಕೆಯಿಂದ ಕಂಗೆಟ್ಟ, ಅತ್ತ ಪೊಲೀಸರಿಗೆ ದೂರು ಕೊಡಲಾಗದ ಸ್ಥಿತಿ ಅವರದ್ದಾಗಿದೆ. 

ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.