ರಾಮದಾಸ್ ವಿರುದ್ಧ ಪ್ರೇಮಕುಮಾರಿ ಸ್ಪರ್ಧೆ
Team Udayavani, Dec 16, 2017, 9:01 AM IST
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಮಾಜಿ ಸಚಿವ ಎಸ್ .ಎ.ರಾಮದಾಸ್ ವಿರುದ್ಧ ಸ್ಫರ್ಧೆ ಮಾಡುವುದಾಗಿ ಪ್ರೇಮಕುಮಾರಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೇಮಕುಮಾರಿ, ರಾಮದಾಸ್ ಮತ್ತು ನನ್ನ ವಿಚಾರದಲ್ಲಿ ರಾಜಕೀಯ ಒತ್ತಡಗಳಿಂದಾಗಿ ನನಗೆ ಅನ್ಯಾಯವಾಗಿದೆ. ರಾಮದಾಸ್ ಅವರಿಗೂ ನನ್ನನ್ನು ರಾಜಕೀಯವಾಗಿ ಬೆಳೆಸಬೇಕೆಂಬ ಆಸೆ ಇತ್ತು. ಆದರೆ, ಬೇರೆ ಬೇರೆ
ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ರಾಮದಾಸ್ ವಿರುದ್ಧ ನಾನು ಸ್ಪರ್ಧಿಸಿದರೆ ಗೆಲ್ಲುತ್ತೇನೆ ಎಂಬುದು ಗೊತ್ತಿದೆ. ಆದರೆ, ನನಗೆ ಮಕ್ಕಳ ಭವಿಷ್ಯ ಮುಖ್ಯ. ಹೀಗಾಗಿ ಅವರೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲಿ, ಇಲ್ಲವಾದರೆ ನನಗೆ ಎಲ್ಲಿ
ಅನ್ಯಾಯವಾಯಿತೋ ಅಲ್ಲಿಯೇ ನ್ಯಾಯ ಕಂಡುಕೊಳ್ಳಲು ಚುನಾವಣೆಗೆ ಸ್ಪರ್ಧಿಸಬೇಕಾಗುತ್ತದೆ. ಆದರೆ, ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಉಪೇಂದ್ರ ಅವರ ಕೆಪಿಜೆಪಿ, ಅನುಪಮಾ ಶೆಣೈ ಅವರ ಪಕ್ಷ ಆಗಬಹುದು, ಯಾವುದೂ ಇಲ್ಲ ಎಂದರೆ ಪಕ್ಷೇತರವಾಗಿಯಾದರೂ ಸ್ಪರ್ಧಿಸುತ್ತೇನೆ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಎ.ರಾಮ ದಾಸ್, ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿಂದ ಬೇಕಾದರೂ ಸ್ಪರ್ಧಿಸಬಹುದು. ತಾಯಿ ಚಾಮುಂಡೇಶ್ವರಿ ಆಕೆಗೆ ಒಳ್ಳೆಯದು ಮಾಡಲಿ, ಪ್ರಕರಣ ನ್ಯಾಯಾಲಯ ದಲ್ಲಿರುವುದರಿಂದ ಮಾತುಕತೆ ಪ್ರಶ್ನೆಯೇ ಇಲ್ಲ. ಆದರೆ,
ನಾನು ಯಾವಾಗ ಹೋರಾಟಕ್ಕೆ ಮುಂದಾದರೂ ಈಕೆ ಮುಂದೆ ಬಂದು ತೊಂದರೆ ಕೊಡುತ್ತಿರುವುದನ್ನು ನೋಡಿದರೆ, ಇದರ ಹಿಂದೆ ಯಾರದೋ ಕುಮ್ಮಕ್ಕಿದೆ ಅನಿಸುತ್ತೆ, ನನ್ನ ಕ್ಷೇತ್ರದ ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ, ಅವರೇ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.