ಕನ್ನಡ ಹಬ್ಬಕ್ಕೆ ಕಡಬ ಪಟ್ಟಣ ಸಿಧ್ಧ
Team Udayavani, Dec 16, 2017, 9:43 AM IST
ಕಡಬ: ಶನಿವಾರ ನಡೆಯಲಿರುವ ಪುತ್ತೂರು ತಾಲೂಕಿನ 17ನೇ ಅಕ್ಷರ ಜಾತ್ರೆಗೆ ಇಡೀ ಪಟ್ಟಣ ಸಿದ್ಧಗೊಂಡಿದ್ದು, ಕ್ಷಣಗಣನೆ ಆರಂಭವಾಗಿದೆ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಸಮ್ಮೇಳನ ನಡೆಯುತ್ತಿದ್ದು, ಹಿರಿಯ ಸಾಹಿತಿ ನಾ. ಕಾರಂತ ಪೆರಾಜೆ ಸಮ್ಮೇಳನಾಧ್ಯಕ್ಷತೆ ವಹಿಸುವರು. ಬೆಳಗ್ಗೆ 8ಕ್ಕೆ ಕನ್ನಡ ಭುವನೇಶ್ವರಿಯ ಮೆರವಣಿಗೆ ಸೈಂಟ್ ಜೋಕಿಮ್ಸ್ ಶಾಲಾ ಆವರಣದಿಂದ ಆರಂಭ ವಾಗಲಿದೆ. ಬಳಿಕ 9.15ಕ್ಕೆ ರಾಷ್ಟ್ರ ಧ್ವಜಾರೋಹಣ, ಕಸಾಪ ಧ್ವಜಾರೋಹಣ ಹಾಗೂ ಸಮ್ಮೇಳನದ ಧ್ವಜಾರೋಹಣ ನೆರವೇರಲಿದೆ.
ಬೆಳಗ್ಗೆ 9.45 ಕ್ಕೆ ನಾಡೋಜ ಡಾ| ಮಹೇಶ್ ಜೋಷಿ ಸಮ್ಮೇಳನವನ್ನು ಉದ್ಘಾಟಿಸುವರು. ಸುಳ್ಯ ಶಾಸಕ ಎಸ್.ಅಂಗಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪುಸ್ತಕ ಪ್ರದರ್ಶನ ಉದ್ಘಾಟಿಸುವರು. ವಸ್ತು ಪ್ರದರ್ಶನವನ್ನು ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಲಾ ಪ್ರದರ್ಶನವನ್ನು ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಅವರು ಉದ್ಘಾಟಿಸುವರು.
ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಉಪನ್ಯಾಸ ಹಾಗೂ ಸಾಧಕರಿಗೆ ಸಮ್ಮಾನ ನಡೆಯಲಿದೆ. ಸಾಹಿತಿ ಗೋಪಾಲರಾವ್ ಅವರ ಸಂಸ್ಮರಣೆಯನ್ನೂ ಆಯೋಜಿಸಲಾಗಿದೆ. ಕವಿಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ಕವಿ ಟಿ.ಜಿ. ಮುಡೂರು ವಹಿಸುತ್ತಿರುವುದು ವಿಶೇಷ.
ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭ ಸಂಜೆ 4.30 ಕ್ಕೆ ಆರಂಭವಾಗಲಿದೆ. ಕಸಾಪ ಜಿಲ್ಲಾಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸುವರು. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ| ಸದಾನಂದ ಪೆರ್ಲ ಸಮಾರೋಪ ಭಾಷಣ ಮಾಡುವರು. ಸಮ್ಮೇಳನಾಧ್ಯಕ್ಷ ನಾ| ಕಾರಂತ ಪೆರಾಜೆ ಸಮ್ಮೇಳನದ ವಿಮರ್ಶೆ ಮಾಡುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ವೇದಿಕೆ ಸಜ್ಜು
ಅಕ್ಷರ ಜಾತ್ರೆಗೆ ಇಲ್ಲಿಯ ಸರಕಾರಿ ಪ.ಪೂ. ಕಾಲೇಜು ಆವರಣದ ಬಿ.ಟಿ.ಆರಿಗ ಜೈನ್ ಸಭಾಂಗಣದಲ್ಲಿ ಕುಲ್ಕುಂದ ಶಿವರಾವ್ ವೇದಿಕೆ ಸಜ್ಜಾಗಿದೆ. ಸಮ್ಮೇಳನದ ಸಿದ್ಧತೆಯಲ್ಲಿ ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಒಳಗೊಂಡಿದ್ದು,ಯುವಜನರನ್ನು ಕನ್ನಡದೊಂದಿಗೆ ಬೆಸೆಯುವ ಕೆಲಸ ನಡೆದಿದೆ. ವಿದ್ಯಾರ್ಥಿಗಳೇ ಸಭಾಂಗಣ, ವೇದಿಕೆ ಹಾಗೂ ಕಾಲೇಜಿನ ಪರಿಸರವನ್ನು ಸಿಂಗರಿಸಿದ್ದಾರೆ. ಈಗಾಗಲೇ ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನಕ್ಕೆ ಮಳಿಗೆಗಳು ಸಿದ್ಧಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.