ಕೇಂದ್ರ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್‌

Team Udayavani, Dec 16, 2017, 10:19 AM IST

16-18.jpg

ಬೆಂಗಳೂರು: ಸಿಗರೇಟು, ಬೀಡಿ ಸೇರಿ ತಂಬಾಕು ಉತ್ಪನ್ನಗಳ ಕವರ್‌, ಪಾಕೆಟ್‌ಗಳ ಮೇಲೆ ಶೇ.85ರಷ್ಟು ಎಚ್ಚರಿಕೆ ಸಂದೇಶ ಸಾರುವ ಚಿತ್ರದ ಮುದ್ರಣ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ ತೀರ್ಪು ನೀಡಿದೆ.  ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ವಿವಿಧ ರಾಜ್ಯಗಳ ತಂಬಾಕು ಕಂಪೆನಿಗಳು ಸಲ್ಲಿಸಿದ್ದ ಸುಮಾರು ಇನ್ನೂರಕ್ಕೂ ಹೆಚ್ಚು ರಿಟ್‌ ಅರ್ಜಿಗಳನ್ನು ಶುಕ್ರವಾರ ಹೈಕೋರ್ಟ್‌ ಪುರಸ್ಕರಿಸಿದೆ. 

ನ್ಯಾಯಮೂರ್ತಿಗಳಾದ ಬಿ.ಎಸ್‌ ಪಾಟೀಲ್‌ ಹಾಗೂ ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠ, ತಂಬಾಕು ಉತ್ಪನ್ನಗಳ ಮೇಲೆ ಶೇ.85ರಷ್ಟು ಚಿತ್ರಸಹಿತ ಎಚ್ಚರಿಕೆ ಸಂದೇಶದ ಅಧಿಸೂಚನೆ ಸಂವಿಧಾನ ಬಾಹಿರ. ವಾಸ್ತವವಾಗಿ ವಿಧಿಸಲಾಗಿರುವ ಕೆಲ ನಿಯಮಗಳ ಪಾಲನೆ ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟು, ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ರದ್ದುಪಡಿಸಿದೆ. ಈ ಮೊದಲು ಬೀಡಿ, ಸಿಗರೇಟ್‌ ಸೇರಿ ತಂಬಾಕು ಉತ್ಪನ್ನಗಳ ಕವರ್‌ ಅಥವಾ ಪಾಕೆಟ್‌ ಮೇಲೆ ಶೇ. 40ರಷ್ಟು ಎಚ್ಚರಿಕೆ ಸಂದೇಶ ವಿತ್ತು. ಈ ನಿಯಮ ಮಾರ್ಪಡುಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ತಂಬಾಕು ಉತ್ಪನ್ನಗಳ ಮೇಲೆ ಶೇ.85ರಷ್ಟು ಆರೋಗ್ಯಕ್ಕೆ ಹಾನಿಕಾರಕ ಎಂಬ ಚಿತ್ರ ಸಹಿತ ಸಂದೇಶವನ್ನು ಕಡ್ಡಾಯವಾಗಿ ಪ್ರಕಟಿಬೇಕೆಂದು 2014ರ ಅಕ್ಟೋಬರ್‌ 15ರಂದು ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿರುವ ತಂಬಾಕು ಉತ್ಪನ್ನಗಳ ತಯಾರಿಕಾ ಕಂಪೆನಿಗಳು ಆಯಾ  ಹೈಕೋರ್ಟ್‌ಗಳು, ಸುಪ್ರೀಂಕೋರ್ಟ್‌ ಮೊರೆಹೋಗಿದ್ದವು. ಈ ಕುರಿತು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌, ಎಲ್ಲ ರಿಟ್‌
ಅರ್ಜಿಗಳನ್ನು ವಿಚಾರಣೆ ನಡೆಸಿ ತೀರ್ಪು ನೀಡಲು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಗೊಳಿಸಿತ್ತು

ವಾದ ಏನಾಗಿತ್ತು?
ಈ ಹಿಂದೆ ಇದ್ದ ನಿಯಮವನ್ನು ಮಾರ್ಪಾಡುಗೊಳಿಸಿ ಕೇಂದ್ರ ಸರ್ಕಾರ ಶೇ.85ರಷ್ಟು ಎಚ್ಚರಿಕೆ ಸಂದೇಶ ಪ್ರಕಟಿಸಬೇಕೆಂಬ
ನಿಯಮ ಜಾರಿಗೊಳಿಸಿರುವುದು ಕಾನೂನುಬಾಹಿರ ಕ್ರಮವಾಗಿದೆ. ಈಗಾಗಲೇ ತಂಬಾಕು ಉತ್ಪನ್ನ ಕಂಪೆನಿಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿವೆ. ಅಲ್ಲದೆ ತಂಬಾಕು ಬೆಳೆಗಾರರಿಗೂ ತೊಂದರೆಯಾಗಲಿದೆ. ಹೊಸ ನಿಯಮ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶ ರದ್ದುಪಡಿಸುವಂತೆ ಕೋರಿ ದೇಶದ ವಿವಿಧ ಸಿಗರೇಟ್‌ ಕಂಪೆನಿಗಳು ಹಾಗೂ ತಂಬಾಕು ಉತ್ಪನ್ನ ಕಂಪೆನಿಗಳು ಹೈಕೋರ್ಟ್‌ ಮೊರೆ ಹೋಗಿದ್ದವು.

ಟಾಪ್ ನ್ಯೂಸ್

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

UBI: ಸಿಬಿಐಗೆ ವಾಲ್ಮೀಕಿ ನಿಗಮ ಕೇಸ್‌: ಹೈಕೋರ್ಟ್‌ ನಕಾರ

UBI: ಸಿಬಿಐಗೆ ವಾಲ್ಮೀಕಿ ನಿಗಮ ಕೇಸ್‌: ಹೈಕೋರ್ಟ್‌ ನಕಾರ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.