ಅಂಬೇಡ್ಕರ್ ಭವನ ಕಾಮಗಾರಿ ಶೀಘ್ರ ಆರಂಭಿಸಲು ಮನವಿ
Team Udayavani, Dec 16, 2017, 3:17 PM IST
ಹುಣಸಗಿ: ಮಾಳನೂರ ಗ್ರಾಮದ ದಲಿತ ಮುಖಂಡರು ವಿವಿಧ ಬೇಡಿಕೆಗಳು ಈಡೇರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿದರು. ಹುಣಸಗಿಗೆ ಸಿಎಂ ಆಗಮನಕ್ಕೆ ವೇದಿಕೆ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದ್ದು, ಕಳೆದ 2016ರಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ದೊರೆತಿದೆ. ಆದರೆ ಇದುವರೆಗೂ ಕಾಮಗಾರಿ ಆರಂಭವಾಗಿಲ್ಲ. ಆದ್ದರಿಂದ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಾಳನೂರ ಗ್ರಾಮದಲ್ಲಿ ಬೌದ್ಧ ಧರ್ಮ ಕಾರ್ಯಕ್ರಮ ಆಯೋಜನೆ ಮಾಡಲು ಮತ್ತು ಪ್ರಾರ್ಥನೆಗೆ ಮಂದಿರವಿಲ್ಲ. ಆದ್ದರಿಂದ ಬೌದ್ಧ ಮಂದಿರ ಮಂಜೂರು ಮಾಡಬೇಕು ಹಾಗೂ ಹುಣಸಗಿ ನೂತನ ತಾಲೂಕಿಗೆ ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಒತ್ತು ನೀಡಬೇಕು. ಮಾಳನೂರ ಗ್ರಾಮದಲ್ಲಿನ ಅಂಬೇಡ್ಕರ್ ಭವನದ ನಿರ್ಮಾಣ ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಗ್ರಾಮದ ಸಂಗಮೇಶ.ಎಚ್, ಗುರುರಾಜ ದೊಡ್ಡಮನಿ, ಭೀಮಣ್ಣ ನಾಟೇಕಾರ, ಚಂದ್ರಶೇಖರ ಹಳ್ಳೂರ, ಯಲ್ಲಪ್ಪ ಗುಂಡಲಗೇರಾ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.