59ನೇ ವಸಂತಕ್ಕೆ ಕಾಲಿಟ್ಟ ಎಚ್‌ಡಿಕೆ

Team Udayavani, Dec 17, 2017, 6:10 AM IST

16BNP-(2).jpg

ಬೆಂಗಳೂರು:ಹೃದಯ ಶಸ್ತ್ರ ಚಿಕಿತ್ಸೆಯ ನಂತರ ನನಗೆ ಮರುಜನ್ಮ ಸಿಕ್ಕಿದ್ದು, ನನ್ನ ಜೀವನ ಜನಸೇವೆಗೆ ಮುಡಿಪು. ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ತರುವವರೆಗೂ ವಿಶ್ರಾಂತಿ ಮಾತೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ 59 ನೇ ಹುಟ್ಟುಹಬ್ಬ ಆಚರಿಸಿಕೊಂಡ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಬಡವರ ಕಲ್ಯಾಣಕ್ಕಾಗಿ ನಾನು ಕಂಡಿರುವ ಕನಸು ನನಸು ಮಾಡಲು ಜೆಡಿಎಸ್‌ ಪಕ್ಷಕ್ಕೆ ಮತದಾರರು ಮುಂದಿನ ಚುನಾವಣೆಯಲ್ಲಿ ಆರ್ಶೀವದಿಸಬೇಕು ಎಂದು ಹೇಳಿದರು.

ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೇ ನನ್ನ ಶಕ್ತಿ. ನನ್ನ ಮುಂದಿನ ಜೀವನ ಜನಸೇವೆಗಾಗಿಯೇ ಮುಡಿಪಾಗಿರುತ್ತದೆ. 59 ನೇ ಜನ್ಮದಿನದ ಸಂತಸದ ಜತೆಗೆ ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ಸವಾಲು ಹೊಣೆಗಾರಿಕೆಯೂ ನನ್ನ ಮೆಲಿದೆ ಎಂದು ತಿಳಿಸಿದರು. ಮತದಾರರು ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ಒಂದೊಂದು ಅವಕಾಶ ನೀಡಿದ್ದೀರಿ ಒಮ್ಮೆ ಜೆಡಿಎಸ್‌ಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ಬಂದರೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಳ್ಳಲಿದೆ. ಯುವಕರಿಗೆ ಉದ್ಯೋಗ ಸೃಷ್ಠಿಸುವ ಕಾರ್ಯಕ್ರಮ ರೂಪಿಸಲಿದೆ ಎಂದು ಹೇಳಿದರು.

ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಕನಿಷ್ಠ15  ಕ್ಷೇತ್ರಗಳಲ್ಲಾದ್ರೂ ಪಕ್ಷವನ್ನು ಗೆಲ್ಲಿಸಬೇಕು. ಜೆಡಿಎಸ್‌ ಸ್ವತಂತ್ರವಾಗಿ ಸರ್ಕಾರ ರಚಿಸಲು ರಾಜಧಾನಿಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕು. ಆ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ನಿಖೀಲ… ರಾಜಕೀಯಕ್ಕೆ ಬರೋ ಪ್ರಶ್ನೆಯೇ ಇಲ್ಲ. ಆದರೆ ಪಕ್ಷದ ಪ್ರಚಾರದಲ್ಲಿ ಭಾಗವಹಿಸುತ್ತಾನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂಸದ ಪುಟ್ಟರಾಜು, ಮಾಜಿ ಸಚಿವರಾದ ಎಚ್‌.ವಿಶ್ವನಾಥ್‌, ಪಿ.ಜಿ.ಆರ್‌.ಸಿಂದ್ಯಾ, ಬಂಡೆಪ್ಪ ಕಾಶಂಪುರ್‌,  ಶಾಸಕರಾದ ಗೋಪಾಲಯ್ಯ, ಸುರೇಶ್‌ಬಾಬು, ವಿಧಾನಪರಿಷತ್‌ ಸದಸ್ಯರಾದ ರಮೇಶ್‌ಬಾಬು, ಟಿ.ಎ.ಶರವಣ, ಕಾಂತರಾಜ್‌, ಮುಖಂಡರಾದ ಬಿ.ಎಂ.ಫ‌ರೂಕ್‌, ಜಫ್ರುಲ್ಲಾ ಖಾನ್‌, ರಮೇಶ್‌ಗೌಡ, ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

ವಿಶೇಷ ಪೂಜೆ
ಹುಟ್ಟುಹಬ್ಬ ಪ್ರಯುಕ್ತ ರಾಜರಾಜೇಶ್ವರಿನಗರ ದೇವಾಲಯದಲ್ಲಿ  ಎಚ್‌.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ನಂತರ ಪದ್ಮನಾಭನಗರದಲ್ಲಿ ದೇವೇಗೌಡರ ಆರ್ಶೀವಾದ ಪಡೆದು ವಿಕಲಚೇತನರ ಜತೆ ಹುಟ್ಟುಹಬ್ಬ ಆಚರಿಸಿಕೊಂಡರು.ಆದಿಚುಂಚನಗಿರಿ ಮಠಕ್ಕೆ ತೆರಳಿ ನಿರ್ಮಲಾನಂದನಾಥ ಸ್ವಾಮಿಗಳ ಆರ್ಶೀವಾದ ಪಡೆದರು. ನಂತರ ಪಕ್ಷದ ಕಚೇರಿಯಲ್ಲಿ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಉಸ್ತುವಾರಿಯ “ಅಪ್ಪಾಜಿ ಕ್ಯಾಂಟೀನ್‌’ಗೆ ಚಾಲನೆ ನೀಡಿದರು. ಸಂಜೆ ಬಿಡದಿ ಬಳಿಯ ಕೋತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಕ್ಷೇತ್ರ ರಾಮನಗರಕ್ಕೂ ಭೇಟಿ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು.

58 ವರ್ಷ ತುಂಬಿ 59 ನೇ ವರ್ಷಕ್ಕೆ ಕಾಲಿಟ್ಟಿರುವ ಕುಮಾರಸ್ವಾಮಿಯವರಿಗೆ ತಾಯಿ ರಾಜರಾಜೇಶ್ವರಿ ಆರೋಗ್ಯ ಕೊಡಲಿ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ತರಲು ಮತದಾರರು ಆರ್ಶೀವಾದ ಮಾಡಲಿ.
– ಅನಿತಾ ಕುಮಾರಸ್ವಾಮಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ 124 ದಿನಗಳಷ್ಟೇ ಬಾಕಿ ಮುಂದಿನ ದಿನಗಳಲ್ಲಿ ಕುಮಾರಣ್ಣನ ಸರ್ಕಾರ ಬರಲಿದೆ. ಎಲ್ಲರ ಸಂಕಷ್ಟ ಬಗೆಹರಿಯಲಿದೆ.ರೈತರ ಸಾಲ ಮನ್ನಾ,  70 ವರ್ಷ ಮೆಲ್ಪಟ್ಟವರಿಗೆ 5 ಸಾವಿರ ರೂ. ಮಾಶಾಸನ,  ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಸೇರಿ ಸಾಕಷ್ಟು ಕಾರ್ಯಕ್ರಮ ರೂಪಿಸುವ ಕನಸು ಹೊಂದಿದ್ದಾರೆ. ನಾನು ರಾಹುಲ್‌ ಗಾಂಧಿ ಬಗ್ಗೆ ಟೀಕೆ ಮಾಡಲ್ಲ, ಎರಡೂ ರಾಷ್ಟ್ರೀಯ ಪಕ್ಷಗಳು ಈ ನಾಡಿಗೆ ಏನು ಕೊಟ್ಟಿವೆ ಎಂಬುದು ಎಲ್ಲರಿಗೂ ಗೊತ್ತಿದೆ.
 - ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.