ಸಂಪತ್ತು ಗಳಿಕೆಗಾಗಿ ಭ್ರಷ್ಟಾಚಾರ ಬೇಡ: ಡಾ| ಸಂತೋಷ್‌ ಹೆಗ್ಡೆ 


Team Udayavani, Dec 17, 2017, 10:43 AM IST

18Dec-3.jpg

ಮೂಡಬಿದಿರೆ: ಸಂಪತ್ತನ್ನು ಗಳಿಸಬೇಕೆಂಬ ಧಾವಂತದಲ್ಲಿ ಭ್ರಷ್ಟಾಚಾರ ಮಾಡುವುದಾಗಲೀ ಅದನ್ನು ಪ್ರೋತ್ಸಾಹಿಸುವುದಾಗಲೀ ಸಲ್ಲದು. ಭ್ರಷ್ಟಾಚಾರಮುಕ್ತ ಸಮಾಜ ಕಟ್ಟಬೇಕಾದರೆ ಮೊದಲು ನಾವು ಬದಲಾಗಬೇಕು ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಡಾ|ಎನ್‌. ಸಂತೋಷ್‌ ಹೆಗ್ಡೆ ಹೇಳಿದರು. ಎಕ್ಸಲೆಂಟ್‌ ಪ.ಪೂ. ಕಾಲೇಜು ಆವರಣದ ‘ವೀರ ಸಾಗರ’ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ‘ರೋಟೆಕ್ಸ್‌ ಡಿಬೇಟ್‌ 2017 ಮೆಗಾ ಫಿನಾಲೆ’ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ನಾಲ್ಕನೆಯ ಸ್ತಂಭವೆಂದೇ ಪರಿಗಣಿಸಲ್ಪಟ್ಟ ಮಾಧ್ಯಮ ರಂಗವೂ ಭ್ರಷ್ಟಾಚಾರಕ್ಕೆ ಹೊರತಾಗಿಲ್ಲದಿರುವುದು ಘೋರ ದುರಂತ ಎಂದ ಅವರು ಹೈಸ್ಕೂಲು ಮಟ್ಟದಲ್ಲೇ ರಾಜಕಾರಣ, ವಂಶಪಾರಂಪರ್ಯ ಆಡಳಿತ, ಭ್ರಷ್ಟಾಚಾರ ಮೊದಲಾದ ವಿಷಯಗಳ ಚರ್ಚೆಯಲ್ಲಿ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಈ ಹಂತದಲ್ಲೇ ವಿದ್ಯಾರ್ಥಿಗಳು ಭ್ರಷ್ಟಾಚಾರ ಮುಕ್ತ ಭಾರತ ಕಟ್ಟಲು ಸಂಕಲ್ಪ ತೊಟ್ಟರೆ ಅದೇ ದೇಶಕ್ಕೆ ದೊಡ್ಡ ಕೊಡುಗೆ’ ಎಂದರು.

ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂಡಬಿದಿರೆ ರೋಟರಿ ಕ್ಲಬ್‌ ಟೆಂಪಲ್‌ ಟೌನ್‌ ಬೆಂಬಲದೊಂದಿಗೆ ಮಂಗಳೂರಿನ ಸೆಂಟರ್‌ ಫಾರ್‌ ಇಂಟೆಗ್ರಲ್‌ ಲರ್ನಿಂಗ್‌ ಸಂಘಟಿಸಿದ ಡಿಬೇಟ್‌ ಸ್ಪರ್ಧೆಯಲ್ಲಿ 50 ಮಂದಿ ಭಾಗವಹಿಸಿದ್ದರು. ಸಿಐಎಲ್‌ನ ನಂದಗೋಪಾಲ್‌ ಡಿಬೇಟ್‌ ನಡೆಸಿಕೊಟ್ಟರು. ಎಕ್ಸಲೆಂಟ್‌ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್‌ ಜೈನ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಶ್ಮಿತಾ ಯುವರಾಜ್‌ ಸ್ವಾಗತಿಸಿದರು.

ವೇದಿಕೆಯಲ್ಲಿ ಸಿಐಎಲ್‌ ನಿರ್ದೇಶಕಿ ಸಚಿತಾ ನಂದಗೋಪಾಲ್‌, ಐ.ಎಸ್‌.ಓ. ಸಂಯೋಜಕ ಆನಂದ ಕುಮಾರ್‌, ಎಕ್ಸಲೆಂಟ್‌ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಯಶೀಲ್‌ ಉಪಸ್ಥಿತರಿದ್ದರು. ಉಪನ್ಯಾಸಕಿ ವರ್ಷಾ ಕಾಮತ್‌ ಮುಖ್ಯ ಅಥಿತಿಗಳನ್ನು ಪರಿಚಯಿಸಿದರು. ಪ್ರಾಂಶುಪಾಲ ಸುರೇಶ್‌ ಬಾಬು ವಂದಿಸಿದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥ ವಿಮಲ್‌ ರಾಜ್‌ ಕಾರ್ಯಕ್ರಮ ನಿರೂಪಿಸಿದರು.

ಪ್ರಶ್ನಿಸುವ ಹಕ್ಕು
ಭಾರತದ ರಾಷ್ಟ್ರಪತಿ, ಪ್ರಧಾನಿ ಒಳಗೊಂಡಂತೆ ಎಲ್ಲ ಸರಕಾರದಿಂದ ಸಂಬಳ, ಸವಲತ್ತು ಪಡೆಯುವವರೆ ಲ್ಲರೂ ಜನಸೇವಕರೇ ಆಗಿದ್ದಾರೆ. ಈ ಜನಸೇವಕರ ನಡೆಯನ್ನು ಪ್ರಶ್ನಿಸುವ ಹಕ್ಕು ಈ ಪ್ರಜಾಪ್ರಭುತ್ವ ದೇಶದ ಎಲ್ಲರಿಗೂ ಇದೆ ಎಂದ ಸಂತೋಷ್‌ ಹೆಗ್ಡೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.