ದೇವಸ್ಥಾನ ಅಧ್ಯಕ್ಷರಿಂದ ಮಸೀದಿಗೆ ಭೂದಾನ !


Team Udayavani, Dec 17, 2017, 1:59 PM IST

1612kpk4Bhumi.jpg

ಪುತ್ತೂರು: ಕೋಮುಸೂಕ್ಷ್ಮ ಜಿಲ್ಲೆಯೆಂದೇ ಗುರುತಿಸಲ್ಪಟ್ಟಿರುವ ಕರಾವಳಿಯಲ್ಲಿ ಸಣ್ಣಪುಟ್ಟ ವಿಚಾರಕ್ಕೂ ಕೋಮು ಭಾವನೆಗಳು ಕೆರಳುತ್ತಿದ್ದು, ನೋವು, ಸಂಕಷ್ಟ, ಜೀವಹಾನಿಗಳು ಸಂಭವಿಸುತ್ತಿವೆ. ಇವೆಲ್ಲದರ ನಡುವೆ ಮಸೀದಿಗಾಗಿ ತನ್ನ ಸ್ವಂತ ಭೂಮಿಯನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷರೊಬ್ಬರು ಸೌಹಾರ್ದಕ್ಕೆ ಸಾಕ್ಷಿಯಾಗಿದ್ದಾರೆ.

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮ ಓಲೆಮುಂಡೋವು ನಿವಾಸಿ ಮೋಹನ್‌ ರೈ ಅವರು ತನ್ನ ಭೂಮಿಯನ್ನು ಮಸೀದಿಗೆ ದಾನ ಮಾಡುವ ಮೂಲಕ ಕೋಮು ಸಾಮರಸ್ಯ ಮೆರೆದವರು.

ಓಲೆಮುಂಡೋವು ನಿವಾಸಿ ಪ್ರಗತಿಪರ ಕೃಷಿಕರೂ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರೂ ಆಗಿರುವ ಓಲೆಮುಂಡೋವು ಮೋಹನ್‌ ರೈ ಅವರ ಜಾಗಕ್ಕೆ ತಾಗಿಕೊಂಡೇ ಓಲೆಮುಂಡೋವು ದರ್ಗಾ ಮತ್ತು ಮಸೀದಿ ಇದೆ. ದರ್ಗಾ ಕಟ್ಟಡ ವಿಸ್ತರಣೆಗೆ ಸ್ಥಳಾವಕಾಶದ ಕೊರತೆ ಇರುವ ಕಾರಣ ಮಸೀದಿ ಸಮಿತಿಯವರು ಮೋಹನ್‌ ರೈ ಅವರಲ್ಲಿ ಜಾಗವನ್ನು ನೀಡುವಂತೆ ಕೇಳಿಕೊಂಡಿದ್ದರು. 

ಮಸೀದಿಯವರ ಬೇಡಿಕೆಗೆ ಸಮ್ಮತಿಸಿದ ಅವರು  ಡಿ. 15 ರಂದು ಶುಕ್ರವಾರ ಮಸೀದಿಗೆ ತೆರಳಿ ತನ್ನ ಸ್ವಾಧೀನದ ಪಟ್ಟಾ ಜಾಗದಲ್ಲಿ ಸುಮಾರು 12 ಸೆಂಟ್ಸ್‌ ಸ್ಥಳವನ್ನು ಮಸೀದಿಗೆ ಬಿಟ್ಟುಕೊಡುವುದಾಗಿ ವಾಗ್ಧಾನ ಮಾಡಿದ್ದಾರೆ.

ಓಲೆಮುಂಡೋವು ದರ್ಗಾದಲ್ಲಿ ನಡೆಯುವ ಉರೂಸ್‌ ಕಾರ್ಯಕ್ರಮಗಳಲ್ಲಿ ಈ ಹಿಂದೆಯೂ ಭಾಗವಹಿಸುತ್ತಾ ತನ್ನಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಸಹಕಾರವನ್ನು ನೀಡುತ್ತಿದ್ದ ಮೋಹನ್‌ ರೈ ಅವರು ಕೆಯ್ಯೂರು ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದಾರೆ. ಶುಕ್ರವಾರ ಮಸೀದಿಗೆ ಆಗಮಿಸಿ ಭೂಮಿಯನ್ನು ದಾನ ಮಾಡುವ ವೇಳೆ ಓಲೆಮುಂಡೋವು ಮಸೀದಿ ಅಧ್ಯಕ್ಷ ಪುತ್ತುಮೋನು ಹಾಜಿ, ಮಸೀದಿಯ ಖತೀಬರಾದ ಸಯ್ಯದಲವಿ ತಂšಳ್‌ ಮಾಸ್ತಿಕುಂಡು, ಉಮ್ಮರ್‌ ಮುಸ್ಲಿಯಾರ್‌, ಇಬ್ರಾಹಿಂ ಕಡ್ಯ, ರೆಂಜಲಾಡಿ ಇಸ್ಲಾಮಿಕ್‌ ಸೆಂಟರ್‌ನ ಸಂಚಾಲಕ ಕೆ.ಆರ್‌. ಹುಸೈನ್‌ ದಾರಿಮಿ ರೆಂಜಲಾಡಿ  ಉಪಸ್ಥಿತರಿದ್ದರು.

ನನ್ನ ಜಾಗದ ಪಕ್ಕದಲ್ಲೇ ಮಸೀದಿ ಮತ್ತು ದರ್ಗಾ ಇದೆ, ಅವರಿಗೆ ಸ್ಥಳಾವಕಾಶದ ಕೊರತೆ ಇತ್ತು, ಇದಕ್ಕಾಗಿ ನಾನು 12 ಸೆಂಟ್ಸ್‌ ಸ್ಥಳವನ್ನು ಮಸೀದಿಗೆ ಉಚಿತವಾಗಿ ನೀಡಿದ್ದೇನೆ. ಎಷ್ಟು ಜಾಗ ಅವರಿಗೆ ಬೇಕಿತ್ತೂ ಅಷ್ಟು ನೀಡಿದ್ದೇನೆ. ದೇವರು ಎಲ್ಲರಿಗೂ ಒಬ್ಬನೇ ಆಗಿದ್ದಾನೆ, ನಾವು ಎಲ್ಲರನ್ನೂ ಗೌರವಿಸಬೇಕು, ಕೋಮುಗಳ ಮಧ್ಯೆ ಪರಸ್ಪರ ಅಪನಂಬಿಕೆ ಸಲ್ಲದು, ಯಾರಧ್ದೋ ಸಾವಿನಲ್ಲಿ ಸಂತೋಷಪಡುವ ಮನೋಭಾವ ನಮ್ಮದಾಗಬಾರದು. ನನಗೆ ದೇವರು ಎಲ್ಲವನ್ನೂ ಕೊಟ್ಟಿದ್ದಾನೆ, ಅವನು ಕೊಟ್ಟಿದ್ದ ಭೂಮಿಯಿಂದ ಸ್ವಲ್ಪ ಭಾಗವನ್ನು ದೇವರಿಗೆ ಕೊಟ್ಟಿದ್ದೇನೆ. ನಾವು ಯಾರೇ ಆಗಲಿ ಜಾತಿ, ಧರ್ಮದ ಹೆಸರಿನಲ್ಲಿ ಎಂದಿಗೂ ಕಚ್ಚಾಟ ಮಾಡಬಾರದು ಅದರಿಂದ ಯಾರಿಗೂ ಏನೂ ಲಾಭವಿಲ್ಲ.
 ಓಲೆಮುಂಡೋವು ಮೋಹನ್‌ ರೈ, ಅಧ್ಯಕ್ಷರು ವಿಷ್ಣುಮೂರ್ತಿ ದೇವಸ್ಥಾನ

ಇದೊಂದು ಅತ್ಯಂತ ಅವಿಸ್ಮರಣೀಯ ದಿನವಾಗಿದೆ. ಓಲೆಮುಂಡೋವು ಮೋಹನ್‌ ರೈಗಳಂತಹ ಹೃದಯವಂತಿಕೆ ಪ್ರತಿಯೊಬ್ಬ ಭಾರತೀಯನಲ್ಲೂ ಇರಬೇಕು. ಹಿಂದೂ- ಮುಸ್ಲಿಂ ಸಮುದಾಯದವರು ಸಹಕಾರದಿಂದ ಬದುಕು ಸಾಗಿಸುವಂತಾದರೆ ಅದಕ್ಕಿಂತ ದೊಡ್ಡ ಸಂಪತ್ತು ದೇಶಕ್ಕೆ ಬೇರೆ ಬೇಕಿಲ್ಲ. ರೈಗಳು  ಜಗತ್ತೇ ಮೆಚ್ಚುವ ಕೆಲಸವನ್ನು ಮಾಡಿದ್ದಾರೆ.
ಕೆ.ಆರ್‌. ಹುಸೈನ್‌ ದಾರಿಮಿ ರೆಂಜಲಾಡಿ, ಸಂಚಾಲಕರು, ರೆಂಜಲಾಡಿ ಇಸ್ಲಾಮಿಕ್‌ ಸೆಂಟರ್‌

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.