ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಕಂಬಳದ ಬೆಳ್ಳಿಹಬ್ಬ


Team Udayavani, Dec 17, 2017, 4:37 PM IST

18Dec-15.jpg

ವೇಣೂರು: ಕಂಬಳ ನಮ್ಮ ಸಂಸ್ಕೃತಿ. ಅದನ್ನು ಉಳಿಸಿ ಮುಂದುವರಿಸುವ ಕೆಲಸ ನಮ್ಮದಾಗಬೇಕು. ನ್ಯಾಯಾಲಯದ ಷರತ್ತುಗಳಿಗೆ ಬದ್ಧವಾಗಿ ಕಂಬಳ ಸಂಸ್ಕೃತಿಯನ್ನು ನಡೆಸಿದರೆ ಅದರ ಆಚರಣೆಗೆ ಯಾವುದೇ ಅಡಚಣೆ ಆಗದು ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ| ಪದ್ಮಪ್ರಸಾದ್‌ ಅಜಿಲ ಅವರು ಹೇಳಿದರು.

ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು ಪೆರ್ಮುಡಯಲ್ಲಿ ಶನಿವಾರ ಜರಗಿದ 25ನೇ ವರ್ಷದ ಬೆಳ್ಳಿಹಬ್ಬ ಸೂರ್ಯ-ಚಂದ್ರ ಜೋಡು ಕರೆ ಬಯಲು ಕಂಬಳ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕಂಬಳದಲ್ಲಿ ಕೋಣಗಳ ರೇಸ್‌ ನಡೆಯಬೇಕೇ ಹೊರತು ಇತರ ರೇಸ್‌ ನಡೆಯಬಾರದು. ನ್ಯಾಯಾಲಯದ ಷರತ್ತನ್ನು ಕೋಣಗಳ ಯಜಮಾನರು, ಓಡಿಸುವವರು ಹಾಗೂ ಕಂಬಳ ಅಭಿಮಾನಿಗಳು ಅರಿತುಕೊಂಡರೆ ಕಂಬಳ ನಿರಂತರವಾಗಿ ನಡೆಯಲು ಸಾಧ್ಯ ಎಂದು ತಿಳಿಸಿದರು.

ಕಂಬಳ ಸಮಿತಿ ಅಧ್ಯಕ್ಷ ನಿತೀಶ್‌ ಎಚ್‌. ಅಧ್ಯಕ್ಷತೆ ವಹಿಸಿದ್ದರು. ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭಾಸ್ಕರ ಬಲ್ಯಾಯ, ವೇಣೂರು ಕ್ರಿಸ್ತರಾಜ ದೇವಾಲಯದ ಫಾ| ಆ್ಯಂಟನಿ ವಿ. ಲುವಿಸ್‌, ಕುಂಡದಬೆಟ್ಟು ಜುಮ್ಮಾ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್‌ ಸಖಾμ ಬಂಗೇರ್‌ಕಟ್ಟೆ, ವೇಣೂರು ದಿಗಂಬರ ಜೈನತೀರ್ಥ ಕ್ಷೇತ್ರ ಸಮಿತಿ ಕಾರ್ಯದರ್ಶಿ ಎಂ. ವಿಜಯರಾಜ ಅಧಿಕಾರಿ ಮಾರಗುತ್ತು, ಅಳದಂಗಡಿ ಜಿ.ಪಂಚಾಯತ್‌ ಸದಸ್ಯ ಶೇಖರ ಕುಕ್ಕೇಡಿ, ಕುಕ್ಕೇಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ತೇಜಾಕ್ಷಿ, ಪಡಂಗಡಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷ ಸತೀಶ್‌ ಕುಮಾರ್‌ ಮಿತ್ತಮಾರ್‌, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ವಿಮಲಚಂದ್ರ ಕೋಟ್ಯಾನ್‌, ಸುರೇಶ್‌ ಆರಿಗ ಪೆರ್ಮಾಣು, ಎಚ್‌. ಮಹಮ್ಮದ್‌ ವೇಣೂರು, ಅನೂಪ್‌ ಜೆ. ಪಾಯಸ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ನಿತೀಶ್‌ ಎಚ್‌. ಸ್ವಾಗತಿಸಿ, ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್‌ ಕಂಗಿನಮನೆ ಕಾರ್ಯಕ್ರಮ ನಿರ್ವಹಿಸಿದರು. ಕಂಬಳ ಸಮಿತಿ ಕಾರ್ಯದರ್ಶಿ ಭರತ್‌ರಾಜ್‌ ಪಾಪುದಡ್ಕ ವಂದಿಸಿದರು.

ವಿದೇಶಿಗರ ಗಮನ ಸೆಳೆದ ಕಂಬಳ!
ಫ್ರಾನ್ಸ್‌ನಿಂದ ಪ್ರವಾಸಕ್ಕೆ ಬಂದಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಕರಾವಳಿಯ ಗ್ರಾಮೀಣ ಕಂಬಳ ಕ್ರೀಡೆಯನ್ನು ವೀಕ್ಷಿಸಲು ಆಗಮಿಸಿ ಗಮನ ಸೆಳೆದರು. 2 ತಿಂಗಳಿನಿಂದ ಭಾರತ ಪ್ರವಾಸದಲ್ಲಿರುವ ಗೋಜ್‌ಫ್ರಾಯ್‌ ಹಾಗೂ ಬೊನ್‌ ಹ್ಯುರಿ ಅವರು ಕಂಬಳದ ಬಗ್ಗೆ ಆಸಕ್ತಿಹೊಂದಿ ಕಂಬಳ ವೀಕ್ಷಿಸಲು ಹಾತೊರೆಯುತ್ತಿದ್ದರು. ಇದೀಗ ವೇಣೂರು ಕಂಬಳ ವೀಕ್ಷಣೆಗೆ ನಮಗೆ ಅವಕಾಶ ಒದಗಿ ಬಂದಿದೆ ಎಂದು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(2)

Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್‌

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.