ಸಿಟಿ ಪೊಲೀಸ್‌ ಟ್ವಿಟರ್‌ಗೆ 10 ಲಕ್ಷ ಫಾಲೋವರ್ಸ್‌


Team Udayavani, Dec 18, 2017, 12:52 PM IST

city-police-twwer.jpg

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ಟ್ವಿಟರ್‌ಗಳ ಮೂಲಕ ಜಾಗೃತಿ ಮೂಡಿಸಲು, ದೂರುಗಳನ್ನು ಸ್ವೀಕರಿಸಲು ಮುಂದಾಗಿರುವ “ಬೆಂಗಳೂರು ಸಿಟಿ ಪೊಲೀಸ್‌’ ಟ್ವಿಟರ್‌ ಖಾತೆಯ ಫಾಲೋವರ್ಸ್‌ ಸಂಖ್ಯೆ 10 ಲಕ್ಷ ದಾಟಿದೆ!

ತನ್ಮೂಲಕ  ದೇಶದಲ್ಲೇ ಅತೀ ಹೆಚ್ಚು ಫಾಲೋವರ್ಸ್‌ ಹೊಂದಿರುವ ಪೊಲೀಸ್‌ ಇಲಾಖೆಯ ಅಧಿಕೃತ ಟ್ವಿಟರ್‌ ಖಾತೆಗಳ ಪೈಕಿ ಬೆಂಗಳೂರು ಸಿಟಿ ಪೊಲೀಸ್‌ ಟ್ವಿಟರ್‌ ಖಾತೆ ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನ ಮುಂಬೈ ಪೊಲೀಸ್‌ ಆಗಿದೆ.

2012ರಲ್ಲಿ ಫೇಸ್‌ಬುಕ್‌ ಹಾಗೂ ಟ್ವಿಟರ್‌ ಖಾತೆಯನ್ನು ನಗರ ಪೊಲೀಸರು ಆರಂಭಿಸಿದ್ದರು. ಅನಂತರ 2015ರಲ್ಲಿ ಅಂದಿನ ಪೊಲೀಸ್‌ ಆಯುಕ್ತ ಎಂ.ಎನ್‌.ರೆಡ್ಡಿ, ಪೊಲೀಸ್‌ ಕಮಿಷನರ್‌ ಮತ್ತು ಬೆಂಗಳೂರು ಪೊಲೀಸ್‌ ಎಂಬ ಹೆಸರಿನ ಟ್ವಿಟರ್‌ ಖಾತೆಯನ್ನು ತೆರೆದು, ಇಲ್ಲಿಯೇ ಜಾಗೃತಿ ಕಾರ್ಯಕ್ರಮಗಳನ್ನು ಪ್ರಚಾರ ಮಾಡಿದರು.

ಇದರಿಂದ ಕೆಲ ದಿನಗಳಲ್ಲೇ ಸಾವಿರಾರು ಮಂದಿ ಈ ಟ್ವಿಟರ್‌ ಖಾತೆಯನ್ನು ಫಾಲೋ ಮಾಡಲು ಆರಂಭಿಸಿದರು. ಈ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚು ಜನಪ್ರಿಯವಾಗುತ್ತಿರುವ ಸಾಮಾಜಿಕ ಜಾಲಾತಾಣವನ್ನು ನಿರ್ವಹಿಸಲು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿರುವ ಕಮಾಂಡ್‌ ಸೆಂಟರ್‌ನಲ್ಲಿ ಪ್ರತ್ಯೇಕ ಸೋಷಿಯಲ್‌ ಮಿಡಿಯಾ ನಿರ್ವಹಣೆ ವಿಭಾಗ ತೆರೆದು, ಡಿಸಿಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ 12 ಮಂದಿ ಸಿಬ್ಬಂದಿ ಇದನ್ನು ನಿರ್ವಹಿಸುತ್ತಿದ್ದಾರೆ.

ಟ್ವಿಟರ್‌ ಖಾತೆ ಜನಪ್ರಿಯವಾಗುತ್ತಿದ್ದಂತೆ ಪೊಲೀಸ್‌ ಕಮಿಷನರ್‌, ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರು, ಸಂಚಾರ ಪೊಲೀಸ್‌, 7 ಡಿಸಿಪಿಗಳು, ಮೂವರು ಸಂಚಾರ ವಿಭಾಗದ ಡಿಸಿಪಿ, ಆಡಳಿತ ವಿಭಾಗದ ಡಿಸಿಪಿ, ಎಸಿಪಿ ಹೀಗೆ ನಗರದಲ್ಲಿರುವ ಎಲ್ಲ ಹಿರಿಯ ಹುದ್ದೆಗಳು ಹಾಗೂ ಠಾಣೆ ಹೆಸರಿನಲ್ಲಿ ಟ್ವಿಟರ್‌ ಖಾತೆಗಳನ್ನು ತೆರೆಯಲಾಯಿತು.

ಇದರ ಪ್ರಯೋಜನ ಪಡೆದುಕೊಂಡ ನಗರದ ಜನರು ತಮ್ಮ ದೂರುಗಳನ್ನು ಇಲ್ಲಿಯೇ ಕೊಡಲು ಆರಂಭಿಸಿದರು. ಪೊಲೀಸ್‌ ಆಯುಕ್ತರ ಖಾತೆಗೆ ಟ್ಯಾಗ್‌ ಮಾಡುತ್ತಿದ್ದರು. ಇದನ್ನು ಗಮನಿಸಿದ ಸೋಷಿಯಲ್‌ ಮಿಡಿಯಾ ಸಿಬ್ಬಂದಿ ಕೂಡಲೇ ಸಂಬಂಧಪಟ್ಟ ಠಾಣೆ ಅಧಿಕಾರಿಗಳಿಗೆ ವರ್ಗಾಹಿಸಿ ಕ್ರಮಕ್ಕೆ ಸೂಚಿಸುತ್ತಿದ್ದರು.

ಟ್ವಿಟರ್‌ನ ಅನುಕೂಲ: ಈ ಟ್ವಿಟರ್‌ ಖಾತೆ ಮೂಲಕ ಸಾರ್ವಜನಿಕರ ಗೊಂದಲ ಹಾಗೂ ಕೆಲ ಅನಗತ್ಯ ವದಂತಿಗಳಿಗೆ ಪರಿಹಾರ ಸೂಚಿಸಲಾಯಿತು. ಅದೇ ರೀತಿ ಸಂಚಾರ ದಟ್ಟಣೆಯ ಮಾಹಿತಿ, ಪ್ರತಿಭಟನೆ ಮಾಹಿತಿ, ಯಾವ ಮಾರ್ಗ ಬಳಸಿದರೆ ಬೇಗ ನಿರ್ದಿಷ್ಟ ಸ್ಥಳ ತಲುಪಬಹುದು ಎಂಬೆಲ್ಲ ಮಾಹಿತಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.