ಗ್ರಾಪಂ ನಿವೇಶನ ಹಂಚಿಕೆಯಲ್ಲಿ ಗೋಲ್‌ಮಾಲ್!
Team Udayavani, Dec 18, 2017, 4:32 PM IST
ಜಮಖಂಡಿ: ತಾಲೂಕಿನ ಕನ್ನೊಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರತಕ್ಕ ಬಡವರಿಗೆ, ಫಲಾನುಭವಿಗಳಿಗೆ ಸರಕಾರ ಹಾಗೂ ಶಾಸಕರ ಪ್ರಯತ್ನದಿಂದ ಮಂಜೂರಾಗಿದ್ದ ನಿವೇಶನಗಳು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಕಬಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತರೊಬ್ಬರು ಮಾಹಿತಿ ಹಕ್ಕಿನಡಿ 2012 ರಿಂದ 2017ರವರೆಗೆ ಆಶ್ರಯ ಯೋಜನೆ ಮನೆಗಳು ಎಷ್ಟು ಮಂಜೂರಾಗಿವೆ. ಯಾವ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಮಾಹಿತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು.
ಕನ್ನೊಳ್ಳಿ ಪಿಡಿಒ ಪ್ರಕಾರ ಮಾಹಿತಿ ಹಕ್ಕು ಅಧಿನಿಯಮದಲ್ಲಿ ತಾವು ತಿಳಿಸಿರುವ ಅವಧಿಯಲ್ಲಿ ಸರಕಾರದಿಂದ ಯಾವುದೇ ರೀತಿಯ ಆಶ್ರಯ ಮನೆಗಳು ಮಂಜೂರಾಗಿರುವುದಿಲ್ಲ. ಫಲಾನುಭವಿಗಳಿಗೆ ಕೂಡ ಹಂಚಿಕೆ ಮಾಡಿರುವುದಿಲ್ಲ ಎಂದು ಉತ್ತರ ನೀಡಿದ್ದಾರೆ.
ರಾಜ್ಯ ಸರಕಾರದ ಪಂಚಾಯತ್ ರಾಜ್ಯ ಇಲಾಖೆ ಅಭಿವೃದ್ಧಿಪಡಿಸಿರುವ ಪಂಚತಂತ್ರ ಯೋಜನೆ ಕಂಪ್ಯೂಟರ್ ಸಾಫ್ಟ್‌ವೇರ್‌ದಲ್ಲಿ ಕನ್ನೊಳ್ಳಿ ಗ್ರಾಪಂಗೆ ಸಂಬಂಧಿ ಸಿದ ಗದ್ಯಾಳ, ಕುರಗೋಡ ಕನ್ನೊಳ್ಳಿ ಗ್ರಾಮಗಳಲ್ಲಿ ಹಂಚಿಕೆಯಾಗಿರುವ ಫಲಾನುಭವಿಗಳ ಹೆಸರು, ಗ್ರಾಮದ ವಿವರ ಸಹಿತ ಎಲ್ಲ ಮಾಹಿತಿ ಲಭ್ಯವಿದೆ. ಕುರಗೋಡದಲ್ಲಿ ಸರಕಾರದಿಂದ ಮಂಜೂರಾದ ಆಶ್ರಯ ಯೋಜನೆಯಲ್ಲಿ ಗ್ರಾಪಂ
ಅಧ್ಯಕ್ಷರು ತಮ್ಮ ಹೆಸರಿನಲ್ಲಿ ಎರಡು ನಿವೇಶನ ಪಡೆದುಕೊಂಡಿದ್ದು ಮಾಹಿತಿ ಬಹಿರಂಗಗೊಂಡಿದೆ. ಅದರಂತೆ ಸದಸ್ಯರು ತಮ್ಮ ಸಂಬಂಧಿ ಕರ ಹೆಸರಿನಲ್ಲಿ ಪಡೆದುಕೊಂಡಿದ್ದಾರೆಂದು ಗ್ರಾಮಸ್ಥರು ಹಾಗೂ ಮಾಹಿತಿ ಹಕ್ಕುದಾರರು ಆರೋಪಿಸಿದ್ದಾರೆ.
ಾಪಂ ಸಾಮಾನ್ಯ ಸಭೆಯಲ್ಲಿ ಕನ್ನೊಳ್ಳಿ, ಸಿದ್ದಾಪುರ ಸಹಿತ ವಿವಿಧ ಗ್ರಾಪಂಗಳಲ್ಲಿ ಬಡವರಿಗೆ, ಫಲಾನುಭವಿಗಳಿಗೆ ಹಂಚಿಕೆಯಾಗಬೇಕಿದ್ದ ನಿವೇಶನಗಳಲ್ಲಿ ಅವ್ಯವಹಾರ ನಡೆದಿರುವ ಕುರಿತು ಚರ್ಚೆಯಾಗಿದೆ. ತಾಲೂಕಿನ ಬಹುತೇಕ ಗ್ರಾಪಂಗಳಲ್ಲಿ ನೈಜ ಫಲಾನುಭವಿಗಳಿಗೆ ನಿವೇಶನ, ಕಟ್ಟಡ ಸಹಾಯಧನ ಸರಿಯಾಗಿ ತಲುಪುತ್ತಿಲ್ಲವೆಂದು ಸಭೆಯಲ್ಲಿ ಗಂಭೀರ ಆರೋಪಗಳು ಕೇಳಿಬಂದಿವೆ. ಯಾವ ಮಾನದಂಡ ಮೂಲಕ ಫಲಾನುಭವಿಗಳ ಆಯ್ಕೆಗೊಂಡಿದೆ ಪರಿಶೀಲಿಸಿ, ಮೇಲಾಧಿ ಕಾರಿಗಳ ಗಮನಕ್ಕೆ ತರುವ ಮೂಲಕ ಪ್ರಾಮಾಣಿಕ ತನಿಖೆ ನಡೆಸಿ ಅರ್ಹ ಫಲಾನುಭಗಳಿಗೆ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡುತ್ತೇನೆ.
ಎನ್.ವೈ. ಬಸರಿಗೀಡದ, ತಾಪಂ ಇಒ
ತಾಲೂಕಿನ ಬಹುತೇಕ ಗ್ರಾಪಂ ಅರ್ಹ ಫಲಾನುಭವಿಗಳಿಗೆ ನಿವೇಶನ, ಕಟ್ಟಡ ಸಹಾಯಧನ ತಲುಪುತ್ತಿಲ್ಲ. ಸರಕಾರದ ಎಲ್ಲ ಅನುದಾನಗಳು ಬಹುತೇಕ ಗ್ರಾಪಂ ಸದಸ್ಯರ, ಮಧ್ಯವರ್ತಿಗಳ ಅಥವಾ ಇನ್ನಾವುದೋ ಮೂಲದಿಂದ ಬೇರೆಯರ ಪಾಲಾಗುತ್ತಿದ್ದು, ಬಡವರು ಬಡವರಾಗಿಯೇ ಉಳಿದುಕೊಂಡಿದ್ದಾರೆ. ತಾಪಂ ಇಒ ಸೂಕ್ತ ತನಿಖೆ ನಡೆಸುವ ಮೂಲಕ ನ್ಯಾಯ ಒದಗಿಸಬೇಕು.
ಶ್ರೀಮಂತ ಚೌರಿ, ತಾಪಂ ಸದಸ್ಯರು, ತೊದಲಬಾಗಿ.
ಮಲ್ಲೇಶ ರಾ. ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.