ಬಿಎಂಟಿಸಿ ಚಾಲಕರಿಗೆ ತರಬೇತಿ
Team Udayavani, Dec 19, 2017, 11:51 AM IST
ಬೆಂಗಳೂರು: ಮತ್ತಷ್ಟು ಪ್ರಯಾಣಿಕ ಸ್ನೇಹಿ ಸೇವೆ ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) 600ಕ್ಕೂ ಅಧಿಕ ಚಾಲಕರಿಗೆ ಭಾನುವಾರ ಒಂದು ದಿನದ “ಪರಿಣಾಮಕಾರಿ ಸಂಪರ್ಕ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ’ ತರಬೇತಿ ನೀಡಲಾಯಿತು.
ಕತ್ರಿಗುಪ್ಪೆ ಘಟಕದ ಹಿಂಭಾಗದಲ್ಲಿರುವ ವೆಂಕಟಾದ್ರಿ ಸಮುದಾಯ ಭವನದಲ್ಲಿ ಬಿಎಂಟಿಸಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಪ್ರಯಾಣಿಕರೊಂದಿಗೆ ಸೌಜನ್ಯಯುತ ವರ್ತನೆ, ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು, ಸುರಕ್ಷಿತ ಮತ್ತು ಗುಣಮಟ್ಟದ ಸಾರಿಗೆ ವ್ಯವಸ್ಥೆ, ಮಾಹಿತಿ ತಂತ್ರಜ್ಞಾನ ಬಳಕೆ ಕುರಿತು ತರಬೇತಿ ನೀಡಲಾಯಿತು.
ನ್ಯಾಷನಲ್ ಬೋರ್ಡ್ ಫಾರ್ ವರ್ಕರ್ ಎಜುಕೇಷನ್ ಆಂಡ್ ಡೆವಲಪ್ಮೆಂಟ್, ಮ್ಯಾಕ್ಸ್ ಬ್ರೈಟ್ ಇನ್ಸ್ಟಿಟ್ಯೂಟ್ ಆಫ್ ಟ್ರೈನಿಂಗ್ ಸೇರಿದಂತೆ ಹಲವು ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಸಂಸ್ಥೆಯಲ್ಲಿ ಒಟ್ಟಾರೆ 27 ಸಾವಿರ ಚಾಲನಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 600ರಿಂದ 800 ಸಿಬ್ಬಂದಿಗೆ ಮೊದಲ ಹಂತದಲ್ಲಿ ತರಬೇತಿ ನೀಡಲಾಗುತ್ತಿದೆ.
ಹಂತ-ಹಂತವಾಗಿ ಉಳಿದೆಲ್ಲ ಸಿಬ್ಬಂದಿಗೂ ವಿಸ್ತರಿಸಲಾಗುವುದು ಎಂದು ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಡಾ.ಎ.ಎನ್.ಪ್ರಕಾಶ್ಗೌಡ ತಿಳಿಸಿದರು. ಕಾಲ ಕಾಲಕ್ಕೆ ಬದಲಾಗುತ್ತಿರುವ ಪರಿಸ್ಥಿತಿ ಮತ್ತು ತಂತ್ರಜ್ಞಾನಕ್ಕೆ ತಕ್ಕಂತೆ ಸಂಸ್ಥೆಯ ಮಾನವ ಸಂಪನ್ಮೂಲದ ಕೌಶಲ್ಯ, ಜ್ಞಾನ ಮತ್ತು ವ್ಯಕ್ತಿತ್ವ ವಿಕಸನಗೊಳಿಸುವುದು ಅತ್ಯಗತ್ಯ. ಈ ಮೂಲಕ ಬದಲಾದ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.