ತಾಲಿಬಾನ್‌ ಸಂಸ್ಕೃತಿಗೆ ಪ್ರೋತ್ಸಾಹ: ಮಠಂದೂರು


Team Udayavani, Dec 20, 2017, 9:44 AM IST

20-Jan-4.jpg

ಪುತ್ತೂರು: ಚುನಾವಣೆಯಲ್ಲಿ ಮತ ಗಳಿಸುವ ಉದ್ದೇಶದಿಂದ ಸರಕಾರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಸರಕಾರದ
ಕುಮ್ಮಕ್ಕಿನಿಂದ ತಾಲೀಬಾನ್‌ ಸಂಸ್ಕೃತಿಯಲ್ಲಿ ಹಿಂದೂಗಳನ್ನು ದಮನಿಸುವ ಕಾರ್ಯ ನಡೆಯುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗೆ ರಾಜ್ಯ ಸರಕಾರ ನೇರ ಬೆಂಬಲ ನೀಡುವುದನ್ನು ವಿರೋಧಿಸಿ,
ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತ ಹತ್ಯೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ, ಹಿಂದೂ ಸಂಘಟನೆಗಳ ವತಿಯಿಂದ ಮಂಗಳವಾರ ಮಿನಿ ವಿಧಾನ ಸೌಧದ ಮುಂಭಾಗ ನಡೆದ ಪ್ರತಿಭಟನ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಸರಕಾರ ಪೊಲೀಸ್‌ ಇಲಾಖೆಯನ್ನು ಬಳಸಿಕೊಂಡು ದಬ್ಟಾಳಿಕೆ ನಡೆಸುತ್ತಿದೆ. ಕರಾವಳಿಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆಯ ಆರೋಪಿಗಳನ್ನು ಬಂಧಿಸುವಲ್ಲಿ ಸರಕಾರ, ಗೃಹ ಇಲಾಖೆ ವಿಫಲವಾಗಿದೆ. ಶರತ್‌ ಮಡಿವಾಳ, ಪರೇಶ್‌ ಮೇಸ್ತ ಹತ್ಯೆ ಇಡೀ ರಾಜ್ಯವನ್ನೇ ಭಯಗೊಳಿಸಿವೆ. ಆದರೆ ಅಧಿಕಾರದ ಮದದಿಂದ ಮೆರೆಯುತ್ತಿರುವ ಸಿದ್ದರಾಮಯ್ಯ ಹಾಗೂ ಸಚಿವರು ಕೈಕಟ್ಟಿ ಕುಳಿತಿದ್ದಾರೆ . ಇದಕ್ಕೆ ತಕ್ಕ ಪಾಠ ಕಲಿಸಲು ಹಿಂದೂಗಳು ಸಿದ್ಧರಾಗಿದ್ದಾರೆ ಎಂದರು. 

ಹತ್ಯೆಗಳ ಕೊಡುಗೆ
ರಾಜ್ಯ ಕಾಂಗ್ರೆಸ್‌ ಸರಕಾರ ಹತ್ಯೆಗಳ ಕೊಡುಗೆಯನ್ನಷ್ಟೇ ಜನತೆಗೆ ನೀಡಿದೆ. ಪುತ್ತೂರು ಸಂಪ್ಯದ ಎಸ್‌ಐ ಹಾಗೂ ಸಿಬಂದಿ ಒಂದು ಕೋಮಿಗೆ ಬೆಂಬಲ ನೀಡುತ್ತಿರುವುದು ಜಗಜ್ಜಾಹೀರಾಗಿದೆ. ಅಮಾಯಕ ಹಿಂದೂಗಳ ಮೇಲೆ ಇಲ್ಲಿನ ಠಾಣೆಯ ಮೂಲಕ ನಿರಂತರ ದಬ್ಟಾಳಿಕೆ ನಡೆಯುತ್ತಿದೆ. ಆದರೂ ಶಾಸಕರು ಅವರಿಗೆ ಸಮ್ಮಾನ ಮಾಡುತ್ತಾರೆ ಎಂದು
ಸಂಜೀವ ಮಠಂದೂರು ಆರೋಪಿಸಿದರು.

ಮತಾಂಧತೆಗೆ ಬೆಂಬಲ
ಮತಾಂಧ ಸಂಘಟನೆಗಳಿಗೆ ಬೆಂಬಲ ನೀಡುವ ಕೆಲಸವನ್ನು ಸರಕಾರ ಮಾಡುತ್ತಿದೆ. ಕಾಂಗ್ರೆಸ್‌ ಸರಕಾರದಲ್ಲಿ ಸಾಮಾಜಿಕ ನ್ಯಾಯ ಎಂಬುದೇ ಇಲ್ಲ. ಪರೇಶ್‌ ಮೇಸ್ತ ಅವರನ್ನು ಕ್ರೂರವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ಕೈಗೊಂಡ ಕ್ರಮವೇ ಇದಕ್ಕೆ ಸಾಕ್ಷಿ. ನ್ಯಾಯ ಕೊಡಬೇಕಾದ ಪೊಲೀಸ್‌ ಇಲಾಖೆ ತನ್ನ ಇನ್ನೊಂದು ಮುಖವನ್ನು ತೋರಿಸುತ್ತಿದೆ. ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ಅಜಿತ್‌ ಹೊಸಮನೆ ಹಾಗೂ ಕಾರ್ಯಕರ್ತರಿಗೆ ಸಂಪ್ಯ ಠಾಣೆಯಲ್ಲಿ ಹಿಂಸಾತ್ಮಕವಾಗಿ ಹೊಡೆಯುವ ಮೂಲಕ ತಾರತಮ್ಯ ನೀತಿ ಎಲ್ಲೆ ಮೀರಿದೆ. ಇದಕ್ಕೆ ತಕ್ಕ ಉತ್ತರವನ್ನು ಹಿಂದೂ ಸಂಘಟನೆಗಳು ನೀಡಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ಸಂಘಟನ ಕಾರ್ಯದರ್ಶಿ ಯತೀಶ್‌ ಅರ್ವಾರ್‌ ದಿಕ್ಸೂಚಿ ಭಾಷಣ ಮಾಡಿದರು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ್‌ ಜೈನ್‌, ಕಾರ್ಯದರ್ಶಿ ರಾಮದಾಸ್‌ ಹಾರಾಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾಗೌರಿ, ನಗರಸಭಾ ಸದಸ್ಯ ರಾಜೇಶ್‌ ಬನ್ನೂರು, ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ಉಪಾಧ್ಯಕ್ಷೆ ರಾಜೇಶ್ವರಿ, ಸದಸ್ಯರಾದ ಮೀನಾಕ್ಷಿ ಮಂಜುನಾಥ, ಸಾಜ ರಾಧಾಕೃಷ್ಣ ಆಳ್ವ, ದಿವ್ಯಾ ಪುರುಷೋತ್ತಮ, ಸುಜಾತಾ ಆಚಾರ್ಯ, ಲಕ್ಷ್ಮಣ ಗೌಡ, ಮುಕುಂದ, ಬಜರಂಗ ದಳ ವಿಭಾಗ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ, ಬಜರಂಗದಳ, ವಿಹಿಂಪ, ಹಿಂಜಾವೇ, ಹಿಂದೂ ಹಿತರಕ್ಷಣ ಸಮಿತಿ, ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ವಿಹಿಂಪ ಜಿಲ್ಲಾಧ್ಯಕ್ಷ ಡಾ| ಕೃಷ್ಣ ಪ್ರಸನ್ನ ವಂದಿಸಿದರು. ದಿನೇಶ್‌ ಜೈನ್‌ ನಿರ್ವಹಿಸಿದರು.

ರಾಜ್ಯಪಾಲರಿಗೆ ಮನವಿ
ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳು, ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತ ಹತ್ಯೆ
ಪ್ರಕರಣಗಳನ್ನು ತತ್‌ಕ್ಷಣ ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸಿ ಭಯೋತ್ಪಾದಕ ಸಂಘಟನೆಗಳನ್ನು
ಮಟ್ಟ ಹಾಕಲು ಕ್ರಮ ಕೈಗೊಳ್ಳಬೇಕು ಹಾಗೂ ಪರೇಶ್‌ ಮೇಸ್ತ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರಧನವನ್ನು ಬಿಡುಗಡೆಗೊಳಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಸಹಾಯಕ ಕಮಿಷನರ್‌ ಕಚೇರಿ ಮೂಲಕ ಮನವಿ ನೀಡಲಾಯಿತು.

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.