ಹೊರಗುತ್ತಿಗೆ ವಾಹನ ಚಾಲಕರ ಪ್ರತಿಭಟನೆ ಇಂದು
Team Udayavani, Dec 20, 2017, 12:09 PM IST
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಗುತ್ತಿಗೆ ವಾಹನ ಚಾಲಕರನ್ನು ಸೇವೆಯಿಂದ ಬಿಡುಗಡೆಗೊಳಿಸುತ್ತಿರುವ ಕ್ರಮ ಖಂಡಿಸಿ ಬುಧವಾರ ನಗರದ ಸ್ವಾತಂತ್ರ ಉದ್ಯಾವನದಲ್ಲಿ ಪ್ರತಿಭಟನೆ ನಡೆಸುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯ ಹೊರಗುತ್ತಿಗೆ ವಾಹನ ಚಾಲಕರ ಸಂಘದ ಅಧ್ಯಕ್ಷ ಧರ್ಮಪ್ಪ ಆರ್. ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊರಗುತ್ತಿಗೆ ಚಾಲಕರನ್ನು ಸೇವೆಯಿಂದ ಬಿಡುಗಡೆಗೊಳಿಸುವ ಆರೋಗ್ಯ ಇಲಾಖೆ ಕ್ರಮದಿಂದಾಗಿ ಚಾಲಕರ ಕುಟುಂಬದವರು ಬೀದಿಗೆ ಬೀಳಲಿದ್ದಾರೆ. ಹೀಗಾಗಿ ಉಡುಪಿಯ ಮಾಹಿತಿ ಸೇವಾ ಸಮಿತಿ ಪ್ರತಿಭಟನೆಗೆ ಬೆಂಬಲವಾಗಿ ನಿಂತಿದ್ದು, ಸುಮಾರು 480 ವಾಹನ ಚಾಲಕರು ಮತ್ತವರ ಕುಟುಂಬದವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಮಾಹಿತಿ ಸೇವಾ ಸಮಿತಿಯ ಅಧ್ಯಕ್ಷ ಜಿ.ಎ.ಕೋಟ್ಯಾನ್ ಮಾತನಾಡಿ, ಕಳೆದ 10 ವರ್ಷಗಳಿಂದ ಹೊರಗುತ್ತಿಗೆ ಮೇಲೆ ವಾಹನ ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾನೂನಿನ ಪ್ರಕಾರ ಹತ್ತು ವರ್ಷ ಸೇವೆಸಲ್ಲಿಸಿದವರನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.