9ನೇ ತರಗತಿ ಬಾಲಕಿಯನ್ನು ಎಳೆದೊಯ್ದು ಗ್ಯಾಂಗ್ ರೇಪ್ & ಮರ್ಡರ್!
Team Udayavani, Dec 20, 2017, 3:38 PM IST
ವಿಜಯಪುರ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದ್ದು, ಕಾಮುಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಬಾಲಕಿಯ ಪೋಷಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಅಂಬೇಡ್ಕರ್ ವೃತ್ತದಲ್ಲಿ ನಿನ್ನೆಯಿಂದ ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಅಲ್ಲದೇ ಬಾಲಕಿಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 8 ಲಕ್ಷ ರೂಪಾಯಿ ಹಾಗೂ ತಾನು ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಬಳಿಕ ಬಾಲಕಿಯ ಪೋಷಕರು ಪ್ರತಿಭಟನೆಯನ್ನು ವಾಪಸ್ ತೆಗೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಬಾಲಕಿ ಮೇಲೆ ಗ್ಯಾಂಗ್ ರೇಪ್:
ಶಾಲೆಗೆ ಹೋಗುತ್ತಿದ್ದ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ ದಾನೇಶ್ವರಿಯನ್ನು ಎಳೆದೊಯ್ದು ಕಾಮ ಪಿಶಾಚಿಗಳು ಆಕೆಯ ತಂಗಿ ಎದುರೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು ಎಂದು ವರದಿ ವಿವರಿಸಿದೆ.
ಆರೋಪಿಗಳನ್ನು ಬಂಧಿಸಬೇಕೆಂದು ಬಾಲಕಿಯ ಪೋಷಕರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಮತ್ತೊಂದೆಡೆ ಪ್ರಕರಣ ಆದರ್ಶ ನಗರ ಠಾಣೆಯಲ್ಲಿ ದಾಖಲಿಸಿದ್ದು, ಶಂಕಿತ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಘಟನೆಗೆ ಸಂಬಂಧಪಟ್ಟ ನಿಜವಾದ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಬಾಲಕಿಯ ಪೋಷಕರು ಹಾಗೂ ವಿವಿಧ ಸಂಘಟನೆಗಳು ಆರೋಪಿಸಿವೆ.
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.