ವಿಟ್ಲ ತಾ| ರಚನೆಗೆ ಆಗ್ರಹ, ಉಗ್ರ ಹೋರಾಟಕ್ಕೆ ತೀರ್ಮಾನ
Team Udayavani, Dec 20, 2017, 3:55 PM IST
ವಿಟ್ಲ : ಕಳೆದ ನಾಲ್ಕು ದಶಕಗಳಿಂದ ವಿಟ್ಲ ತಾಲೂಕು ಆಗಬೇಕೆಂದು ಹೋರಾಟ ನಡೆಸುತ್ತ ಬರಲಾಗಿದೆ. ಮನವಿ ಸಲ್ಲಿಸುವ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಕರಾವಳಿ ಕರ್ನಾಟಕ ಗಡಿ, ನೆಲ ಜಲ ಸಂರಕ್ಷಣಾ ಸಮಿತಿಯ ಅಧ್ಯಕ್ಷ ರಾಮಣ್ಣ ಶೆಟ್ಟಿ ಪಾಲಿಗೆ ತಿಳಿಸಿದರು.
ಅವರು ಮಂಗಳವಾರ ವಿಟ್ಲ ಪಂಚಮಿಯಲ್ಲಿ ತಾ| ರಚನೆಯ ಬಗ್ಗೆ ಮುಂದಿನ ಕಾರ್ಯ ಯೋಜನೆಯನ್ನು ಯಾವ ರೀತಿಯಲ್ಲಿ ನಡೆಸಬಹುದೆಂಬ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದರು. ತಾಲೂಕು ಆಗುವ ಎಲ್ಲ ಅರ್ಹತೆಯಿದ್ದರೂ ಯಾವುದೇ ಸರಕಾರಗಳು ಸ್ಪಂದಿಸಿಲ್ಲ. ಈ ಬಾರಿ ತಾಲೂಕು ಘೋಷಣೆಯಾಗುವವರೆಗೆ ರಸ್ತೆಗಿಳಿದು ಉಗ್ರವಾಗಿ ಹೋರಾಟವನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ನಾಯಕತ್ವದ ಕೊರತೆ
ಸಮಾಜಸೇವಕ ಡಾ| ಇರ್ಮಾಡಿ ಶರಶ್ಚಂದ್ರ ಶೆಟ್ಟಿ ಮಾತನಾಡಿ, ವಿಟ್ಲ ತಾಲೂಕು ಹೋರಾಟದ ವಿಚಾರದಲ್ಲಿ ಇತ್ತೀಚಿನ ದಿನದಲ್ಲಿ ಯುವ ನಾಯಕತ್ವದ ಕೊರತೆ ಉಂಟಾಗಿದೆ. ತಾ| ರಚನೆಗಾಗಿ ಉಗ್ರ ಹೋರಾಟ ಖಂಡಿತವಾಗಿ ಅಗತ್ಯವಿದೆ. ರಾಜಕೀಯ ರಹಿತವಾಗಿ ರೈತ ಸಂಘದ ಮುಂದಾಳತ್ವದಲ್ಲಿ ಹೋರಾಟ ನಡೆಸಬೇಕು. ಹೋರಾಟದ ವಿಚಾರದಲ್ಲಿ ಸಹಕಾರಿ ಸಂಸ್ಥೆಗಳನ್ನು, ವಿವಿಧ ಸಂಘ ಸಂಸ್ಥೆಗಳನ್ನು, ಅಂಗಡಿ, ವಾಹನ ಮಾಲಕ ಚಾಲಕ ಸಂಘಗಳನ್ನು ಸೇರಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಯೋಜನ ಆಗಿಲ್ಲ
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಮಾತನಾಡಿ, ವಿಟ್ಲ ತಾಲೂಕಿನ 40 ವರ್ಷಗಳ ಬೇಡಿಕೆಯನ್ನು ಇಲ್ಲಿವರೆಗೆ ಬಂದ ಸರಕಾರಗಳು ಕಡೆಗಣಿಸಿವೆ. ಸತತ ಹೋರಾಟ ನಡೆಸಿದರೂ ಪ್ರಯೋಜನ ಆಗಿಲ್ಲ ಎಂದರು.
ಹೋರಾಟ ಬೆಂಬಲಿಸಲು ಮನವಿ
ಜನವರಿ 2ರಂದು ನಿರ್ದಿಷ್ಟ ಅವಧಿಯಲ್ಲಿ ವಿಟ್ಲ ಪೇಟೆಯನ್ನು ಬಂದ್ ಮಾಡುವ ಮೂಲಕ ಉಗ್ರ ಹೋರಾಟವನ್ನು ನಡೆಸಲು ನಿಶ್ಚಯಿಸಲಾಗಿದೆ. ವಿಟ್ಲ ಹೋಬಳಿಯ ಪ್ರತಿಯೊಂದು ಗ್ರಾಮಗಳ ಹಿರಿಯರನ್ನು ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಒಗ್ಗೂಡಿಸಿ, ಹೋರಾಟಕ್ಕೆ ಬೆಂಬಲಿಸುವಂತೆ ಮನವಿ ಮಾಡುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು. ಹೋರಾಟಗಾರ ಮುರುವ ನಡುಮನೆ ಮಹಾಬಲ ಭಟ್, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ವಿ.ಎನ್.ಸುದರ್ಶನ ಪಡಿಯಾರ್ ಮತ್ತಿತರರು ಉಪಸ್ಥಿತರಿದ್ದರು.
1973ರಿಂದ ಮನವಿ
ಸರಕಾರ 1973ರಲ್ಲಿ ತಾ| ಪುನಾರಚನೆ ಬಗ್ಗೆ ಅಧ್ಯಯನ ನಡೆಸಲು ವಾಸುದೇವ ರಾವ್ ಸಮಿತಿ ಮುಂದೆ ಅಂದು ವಿಟ್ಲದ ಬಾಬು ಶೆಟ್ಟಿ, ದೇವಸ್ಯ ನಾರಾಯಣ ಭಟ್, ಮಾಜಿ ಸಚಿವ ವಿಠಲದಾಸ ಶೆಟ್ಟಿ ಮನವಿ ನೀಡಿ ತಾ| ರಚನೆಗೆ ಒತ್ತಾಯಿಸಿದ್ದರು. ಬಳಿಕ 1985ರಲ್ಲಿ ಹುಂಡೇಕರ್ ಸಮಿತಿಯ ಮುಂದೆ ಕೂಡೂರು ಕೃಷ್ಣ ಭಟ್ಟರ ನೇತƒತ್ವದಲ್ಲಿ ಮನವಿ ಸಲ್ಲಿಸಲಾಯಿತು. 2009ರಲ್ಲಿ ಮತ್ತೆ ಎಂ.ಬಿ. ಪ್ರಕಾಶ್ ಸಮತಿ ಮುಂದೆ ಕರ್ನಾಟಕ ಗಡಿ, ನೆಲ ಜಲ ಸಂರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ. ಆದರೆ ತಾಲೂಕು ರಚನೆ ಪ್ರಸ್ತಾಪವನ್ನು ಅಲ್ಲಗಳೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
MUST WATCH
ಹೊಸ ಸೇರ್ಪಡೆ
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.