ಸರ್ಕಾರದ ಸೌಲಭ್ಯ ತಲುಪದಿದ್ದರೆ ಕ್ರಮ
Team Udayavani, Dec 20, 2017, 4:52 PM IST
ತಿಪಟೂರು: ಸರ್ಕಾರ ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ತಲುಪಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಕಲ್ಪತರು ಆಡಿಟೋರಿಯಂನಲ್ಲಿ ನಡೆದ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ದಲಿತ ಮುಖಂಡರಿಗೆ ನಾಗರಿಕ ಹಕ್ಕು ಅಧಿನಿಯಮ 55 ಹಾಗೂ ಪರಿಶಿಷ್ಟ ಜಾತಿ ವರ್ಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 ಮತ್ತು ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಅನುಷ್ಠಾನ ಕಾಯ್ದೆ 2013ರ ಬಗ್ಗೆ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಹಿಂದುಳಿದವರು ಅಭಿವೃದ್ಧಿಯಾಗಬೇಕು: ಹಿಂದುಳಿದ ವರ್ಗಗಳು ಸಮಾಜಮುಖೀಯಾಗಿ ಅಭಿವೃದ್ಧಿಯಾಗಬೇಕು. ಸರ್ಕಾರದ ಅನುದಾನಗಳು ಸಕಾಲಕ್ಕೆ ಅರ್ಹರಿಗೆ ಸದುಪಯೋಗವಾಗಬೇಕು. ಹಿಂದುಳಿದ ವರ್ಗದ ಪೋಷಕರು ಮುಖ್ಯವಾಗಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಲು ಅವಕಾಶ ಮಾಡಿಕೊಡಬೇಕು. ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದೆಂಬ ಎಚ್ಚರಿಕೆ ನೀಡಿದರು.
ಅನುದಾನ ವಿಳಂಬವಾಗದಿರಲಿ: ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಡಾ.ವಿ.ಮಂಜುನಾಥ್ ಮಾತನಾಡಿ, ಸರ್ಕಾರ ಜನರಿಗೆ ಕೊಟ್ಟಿರುವ ಯೋಜನೆಗೆ ಪೂರಕವಾಗಿ ನಿಯಮಗಳಿರುತ್ತವೆ. ಅನುದಾನಗಳು ಕೊಡುವಾಗ ವಿಳಂಬ ಮಾಡಬಾರದು. ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳು ಅವರ ಕುಂದುಕೊರತೆಗಳನ್ನು ಸ್ವೀಕರಿಸಿ, ಶೋಷಿತ ವರ್ಗಕ್ಕೆ ಬೇಕಾಗುವ ಅನುದಾನಗಳನ್ನು ಕಿಂಚಿತ್ತೂ ಲೋಪವಾಗದೆ ನೀಡುವುದು ಕರ್ತವ್ಯ. ಅನಕ್ಷರತೆ ಎಂಬ ಮೂಗುದಾರವನ್ನು ಕಳಚಿ ಸಮಾಜಮುಖೀಯಾಗಿ ಬೆಳೆಸಿ, ದಲಿತ ಪರ ಯೋಜನೆಗಳನ್ನು ಪಡೆದು ಶಿಕ್ಷಣಕ್ಕೆ ಒತ್ತು ನೀಡಿ ಸಾಮರಸ್ಯ ಜೀವನವನ್ನು ಹುಟ್ಟು ಹಾಕುವ ಮೂಲಕ ಹಿಂದುಳಿದ ವರ್ಗಗಳನ್ನು ಸಬಲೀಕರಣವಾಗಿಸಬೇಕು ಎಂದರು.
ಕಾಳಜಿ ವಹಿಸಿ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲೋಕೇಶ್‌ಮೂರ್ತಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಷಡಕ್ಷರಿ ಮಾತನಾಡಿ, ಸಂಬಂದಿಸಿದ ಎಲ್ಲಾ ಅಧಿಕಾರಿಗಳು ವಿಶೇಷ ಜವಾಬ್ದಾರಿ ವಹಿಸಿ ಸರ್ಕಾರದ ಸೌಲತತುಗಳನ್ನು ಸಂಬಂದಿಸಿದ ವರ್ಗದ ಫಲಾನುಭವಿಗಳಿಗೆ ಯಾವುದೇ ಲೋಪವಾಗದಂತೆ ತಲುಪಿಸಬೇಕು. ಸರ್ಕಾರ ಯೋಜನೆಗಳನ್ನು ಇವರಿಗೆ ತಿಳಿಯುವಂತೆ ಪ್ರಚುರ ಪಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಎನ್.ಎಂ.ಸುರೇಶ್, ಉಪಾಧ್ಯಕ್ಷ ಶಂಕರ್, ವಕೀಲರಾದ ವೆಂಕಟೇಶ್, ಶೋಭಾ ಜಯದೇವ್ ಸೇರಿದಂತೆ ದಲಿತ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.