2 ಸಾವಿರ ರೂ. ನೋಟುಗಳ ಚಲಾವಣೆ ನಿಯಂತ್ರಣ?
Team Udayavani, Dec 21, 2017, 8:00 AM IST
ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಚಲಾವಣೆಗೆ ಬಿಡುಗಡೆ ಮಾಡುತ್ತಿಲ್ಲ ಅಥವಾ ಅವುಗಳ ಮುದ್ರಣವನ್ನೇ ಸ್ಥಗಿತಗೊಳಿಸಿರಬಹುದು. ಹೀಗೆಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಸಂಶೋಧನಾ ವರದಿ ತಿಳಿಸಿದೆ. ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಮಂಡಿಸಲಾಗಿರುವ ಆರ್ಬಿಐ ವಾರ್ಷಿಕ ವರದಿ ಅಂಶ ಮತ್ತು ಲೋಕಸಭೆ ಅಂಕಿ ಅಂಶಗಳನ್ನು ಹೋಲಿಕೆ ಮಾಡಿದಾಗ ಈ ಅಂಶ ಗೊತ್ತಾಗುತ್ತದೆ ಎಂದು ಹೇಳಿದೆ.
ಡಿಸೆಂಬರ್ವರೆಗಿನ ದಾಖಲೆಯ ಪ್ರಕಾರ ಅಧಿಕ ಮೌಲ್ಯದ ನೋಟುಗಳ ಒಟ್ಟು ಮೌಲ್ಯವು 13.32 ಲಕ್ಷ ಕೋಟಿ ರೂ. ಆಗಿದೆ ಎಂದು ಆರ್ಬಿಐ ಪ್ರಕಟಿಸಿದೆ. ಆದರೆ ಇತ್ತೀಚೆಗೆ ಲೋಕಸಭೆಯಲ್ಲಿ ಬಹಿರಂಗಗೊಳಿಸಲಾಗಿರುವ ಮಾಹಿತಿ ಪ್ರಕಾರ 15.78 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳನ್ನು ಆರ್ಬಿಐ ಮುದ್ರಿಸಿದೆ. ಅಂದರೆ ಈ ವ್ಯತ್ಯಾಸದ ಮೊತ್ತವಾದ 2.4 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳನ್ನು ಆರ್ಬಿಐ ಮುದ್ರಿಸಿ ಚಲಾವಣೆಗೆ ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ. ಇಲ್ಲವಾದರೆ ಈ ನೋಟುಗಳನ್ನು ಮುದ್ರಿಸದೆಯೇ ಇರಬಹುದು ಎಂದು ವರದಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.