ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಸಿಐಡಿ ತನಿಖೆಗೆ
Team Udayavani, Dec 21, 2017, 6:05 AM IST
ವಿಜಯಪುರ: ಶಾಲೆಗೆ ಹೊರಟಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಹಾಡುಹಗಲೇ ಅಪಹರಿಸಿ, ಸಾಮೂಹಿಕ ಅತ್ಯಾಚಾರಗೈದು, ಹತ್ಯೆ ಮಾಡಿರುವ ಅಮಾನವೀಯ ಘಟನೆ ನಗರದಲ್ಲಿ ಜರುಗಿದೆ. ಘಟನೆ ಬಳಿಕ ಶಂಕಿತ ಮೂವರನ್ನು ಹಿಡಿದು ಜನರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೇ ವೇಳೆ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾಲಕರು ರಸ್ತೆಯಲ್ಲೇ ಶವ ಇರಿಸಿ ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬಳಿಕ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಆಗಮಿಸಿ, ಪ್ರತಿಭಟನಾನಿರತರ ಮನವೊಲಿಸುವಲ್ಲಿ ಯಶಸ್ವಿಯಾದರು.
ಶಾಲೆಗೆ ಹೊರಟಿದ್ದಾಗ ಅಪಹರಣ: ನಗರದ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ತನ್ನ ಗೆಳತಿಯೊಂದಿಗೆ ಮಂಗಳವಾರ ಶಾಲೆಗೆ ಹೊರಟಿದ್ದಳು. ಆಗ ಆಟೋದಲ್ಲಿ ಬಂದ ದೀಪಕ ಮುಳಸಾವಳಗಿ ಎಂಬಾತ ತನ್ನ ಇಬ್ಬರು ಸ್ನೇಹಿತರೊಂದಿಗೆ ಆಕೆಯನ್ನು ಅಪಹರಿಸಿ ನಗರದ ಹೊರವಲಯಕ್ಕೆ ಕರೆದೊಯ್ದ. ಬಳಿಕ ಇತರ ಆರೇಳು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ. ಬಳಿಕ ಬಾಲಕಿಯ ಕತ್ತು ಹಿಸುಕಿ ಪರಾರಿಯಾಗಿದ್ದಾರೆ. ಜೊತೆಗಿದ್ದ ಗೆಳತಿ ಶಾಲೆಗೆ ತೆರಳಿ ಶಿಕ್ಷಕರಿಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿದ ಪಾಲಕರು ಹುಡುಕಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಳು.
ಸಂಜೆ ವೇಳೆಗೆ ಶಂಕಿತ ಆರೋಪಿಗಳಲ್ಲಿ ಮೂವರನ್ನು ಪತ್ತೆ ಹಚ್ಚಿದ ಸಾರ್ವಜನಿಕರು ಮನಬಂದಂತೆ ಥಳಿಸಿ, ಆದರ್ಶ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದರು. ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಪಡೆದ ಮೃತ ಬಾಲಕಿ ಪಾಲಕರು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿ ಧಿಸಬೇಕು ಎಂದು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶವ ಇರಿಸಿ ಅಹೋರಾತ್ರಿ ಧರಣಿ ನಡೆಸಿದರು. ಹಲವು ಪ್ರಗತಿಪರ ಸಂಘಟನೆಗಳು ಹೋರಾಟಕ್ಕೆ ಬೆಂಬಲ ನೀಡಿದವು.
ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಬುಧವಾರ ಬೆಳಗ್ಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸುವ ಭರವಸೆ ನೀಡಿದರು. ಅಲ್ಲದೇ ವೈಯಕ್ತಿಕವಾಗಿ 5 ಲಕ್ಷ ರೂ. ಪರಿಹಾರ ವಿತರಿಸಿ, ಸರ್ಕಾರದಿಂದ 8 ಲಕ್ಷ ರೂ. ಪರಿಹಾರ ಕೊಡಿಸುವ ಭರವಸೆ ನೀಡಿದರು.
ಸಚಿವರ ಕೋರಿಕೆ ಮೇರೆಗೆ ಪ್ರತಿಭಟನೆ ಹಿಂಪಡೆದ ಪಾಲಕರು ನಗರದ ದರ್ಗಾ ಪ್ರದೇಶದಲ್ಲಿ ಶವವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವಾಗ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾದಾಗ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಪ್ರಕರಣದ ತನಿಖೆಗೆ ಎರಡು ತನಿಖಾ ತಂಡಗಳನ್ನು ರಚಿಸಲಾಗಿದೆ. ಪ್ರಕರಣಕ್ಕೆ ಸಂಬಂ ಧಿಸಿದಂತೆ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಪೊಲೀಸರು ಪ್ರಮುಖ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳಕ್ಕೆ ಬೇಟಿ ನೀಡಿ 4 .20 ಲಕ್ಷ ರೂ . ಪರಿಹಾರ ಚೆಕ್ ವಿತರಿಸಿದರು.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಗ್ಗೆ ಕುರುಹುಗಳು ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಒಬ್ಬನೇ ಆರೋಪಿ ಅತ್ಯಾಚಾರ ಎಸಗಿರುವ ಮಾಹಿತಿ ಲಭ್ಯವಾಗಿದ್ದು, ಪ್ರಮುಖ ಆರೋಪಿಗಾಗಿ ತನಿಖಾ ತಂಡ ಶೋಧ ನಡೆಸಿದೆ.
– ಕುಲದೀಪ ಜೈನ್, ಎಸ್ಪಿ
ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು:ವಿಜಯಪುರದಲ್ಲಿ ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ತ್ವರಿತವಾಗಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.ವೀರಯ್ಯ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ಹಾಗೂ ವಕ್ತಾರ ಅಶ್ವಥ್‌ನಾರಾಯಣ, ಪ್ರಕರಣದ ತನಿಖೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ ತ್ವರಿತವಾಗಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಘಟನೆಯನ್ನು ರಾಜ್ಯಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರದಲ್ಲಿ ಸಾಧನಾ ಸಂಭ್ರಮ ಯಾತ್ರೆ ನಡೆಸುತ್ತಿದ್ದರೂ ಹತ್ಯೆಗೀಡಾದ ಬಾಲಕಿಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಸೌಜನ್ಯ ತೋರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರಾಲಿ, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರಾಗಲಿ ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿಲ್ಲ. ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿ ಕೈ ತೊಳೆದುಕೊಳ್ಳಲಾಗಿದೆ. ಪ್ರಾಣಕ್ಕೆ ಬೆಲೆ ಕೊಟ್ಟುವ ಸರ್ಕಾರ ಇದು ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.