ಡಿ. 23ರಂದು ಜಿಡೆಕಲ್ಲು ಸ.ಪ್ರ.ದ. ಕಾಲೇಜಿನಲ್ಲಿ ಉದ್ಯೋಗ ಮೇಳ


Team Udayavani, Dec 21, 2017, 10:17 AM IST

1000_2.jpg

ನಗರ: ಮಂಗಳೂರಿನ ಬಿ.ಜಿ. ಎಜುಕೇಶನಲ್‌ ಆ್ಯಂಡ್‌ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಡಿ. 23ರಂದು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್‌ ಉದ್ಯೋಗ ಮೇಳ- 2017 ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ನಳಿನಾಕ್ಷಿ ಎ.ಎಸ್‌. ಅವರು ಹೇಳಿದರು. 

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ಫೋಸಿಸ್‌, ಬಿಪಿಓ, ವಿಪ್ರೋ, ಹಿಂದುಜಾ ಗ್ಲೋಬಲ್‌ ಸೊಲ್ಯೂಷನ್ಸ್‌, ವಿನ್‌ಮ್ಯಾನ್‌ ಸಾಫ್ಟ್‌ ವೇರ್‌ ಇಂಡಿಯಾ ಮೊದಲಾದ ಬೆಂಗಳೂರಿನ 24 ಕಂಪೆನಿಗಳು ಹಾಗೂ ಪುತ್ತೂರು, ಮಂಗಳೂರಿನ 6 ಕಂಪೆನಿಗಳು ಪಾಲ್ಗೊಳ್ಳಲಿವೆ. ಸುಮಾರು 500ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಿವೆ ಎಂದು ಮಾಹಿತಿ ನೀಡಿದರು.

ಶಾಸಕಿ, ರಾಜ್ಯ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿ ಮೇಳ ಉದ್ಘಾಟಿಸಲಿದ್ದು, ಬಿ.ಜಿ. ಎಜು ಕೇಶನಲ್‌ ಆ್ಯಂಡ್‌ ಚಾರಿ ಟೆಬಲ್‌ ಟ್ರಸ್ಟ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಗಣೇಶ್‌ ಜಿ. ಭಟ್‌, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ| ಉದಯಶಂಕರ ಎಚ್‌., ಕಾಲೇಜು ಶಿಕ್ಷಣ ಇಲಾಖೆಯ ಪ್ಲೇಸ್‌ಮೆಂಟ್‌ ಸೆಲ್‌ನ ನೋಡೆಲ್‌ ಅ ಧಿಕಾರಿ ಎ. ನಾರಾಯಣ ಪ್ರಸಾದ್‌ ಭಾಗವಹಿಸುವರು. ಗ್ರಾಮೀಣ ಪ್ರದೇಶದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪದವಿ ಪೂರ್ಣಗೊಂಡ ಮತ್ತು ಅಂತಿಮ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಬಿ.ಜಿ. ಎಜುಕೇಶನಲ್‌ ಆ್ಯಂಡ್‌ ಚಾರಿಟೆಬಲ್‌ ಟ್ರಸ್ಟ್‌ನ ಸಂಪನ್ಮೂಲ ಅಧಿಕಾರಿ ನಳಿನಾಕ್ಷಿ ಎ.ಎಸ್‌. ಮಾತನಾಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮಂಗಳೂರು, ಉಡುಪಿ, ಬೆಳ್ತಂಗಡಿ ಪರಿಸರದ ಸ.ಪ್ರ.ದ. ಕಾಲೇಜಿನ 500 ವಿದ್ಯಾರ್ಥಿಗಳು ಈಗಾಗಲೇ ತಮ್ಮ ಹೆಸರು ನೋಂದಾಯಿಸಿದ್ದಾರೆ. ಸುಮಾರು 800 ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಹೆಸರು ನೋಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೇಳದ ದಿನದಂದು ಪುತ್ತೂರು ಖಾಸಗಿ ಬಸ್‌ ನಿಲ್ದಾಣದ ಬಳಿಯಿಂದ ಕಾಲೇಜಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಇಂದು ತರಬೇತಿ
ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಡಿ. 21ರಂದು ಕಾಲೇಜಿನಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ತನಕ ರಾಷ್ಟ್ರೀಯ ಮಾನ್ಯತೆ ಪಡೆದ ತರಬೇತುದಾರರಿಂದ ಉಚಿತ ಸಂದರ್ಶನಪೂರ್ವ ತರಬೇತಿ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ಲೇಸ್‌ ಮೆಂಟ್‌ ಸೆಲ್‌ನ ಸಂಚಾಲಕ ಪದ್ಮನಾಭ, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸಾ ಕೋಶದ ಸಂಚಾಲಕ ಹರೀಶ್‌ ನಾಯಕ್‌ ಎನ್‌. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.