ಅಲ್ಪಸಂಖ್ಯಾತರ ಏಳ್ಗೆಗೆ ಶ್ರಮಿಸಿಲ್ಲ ಕಾಂಗ್ರೆಸ್: ಜೆಡಿಎಸ್ ಆರೋಪ
Team Udayavani, Dec 21, 2017, 6:15 PM IST
ಮೂಡಿಗೆರೆ: ಕಳೆದ 70 ವರ್ಷದಿಂದ ದಲಿತರ ಹಾಗೂ ಅಲ್ಪಸಂಖ್ಯಾತರ ಮತ ಪಡೆಯುತ್ತಿರುವ ಕಾಂಗ್ರೆಸ್, ದಲಿತರ ಹಾಗೂ ಅಲ್ಪಸಂಖ್ಯಾತರ ಏಳಿಗೆಗಾಗಿ ಶ್ರಮಿಸಿಲ್ಲ ಎಂದು ಜೆಡಿಎಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಝಕರಿಯ್ನಾ ಜಾಕೀರ್ ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ ಧರ್ಮಿಯರ ಭಾವೈಕ್ಯತೆ ಕೇಂದ್ರವಾಗಿರುವ ಬಾಬಾಬುಡನ್ಗಿರಿಯಲ್ಲಿ ಇತ್ತೀಚೆಗೆ ದತ್ತ ಜಯಂತಿ ಸಂದರ್ಭದಲ್ಲಿ ದತ್ತ ಮಾಲಾಧಾರಿಗಳು ಗೋರಿಗಳನ್ನು ಹಾನಿಗೊಳಿಸಿದ್ದಾರೆ. ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ದೌರ್ಜನ್ಯವೆಸಗಿದ್ದಾರೆ. ಇದು ಖಂಡನೀಯ. ತಕ್ಷಣವೇ ಅವರ ವಿರುದ್ಧ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಮೊದಲಿನಿಂದಲೂ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅನೇಕ ಬಾರಿ ಅಧಿ ಕಾರಕ್ಕೂ ತಂದಿದ್ದಾರೆ. ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಮುಸ್ಲಿಮರ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ. ಎಲ್ಲಾ
ರಂಗದಲ್ಲೂ ಕಡೆಗಣಿಸುತ್ತಲೇ ಬಂದಿದ್ದಾರೆ. ಸರಕಾರ ಇದ್ದಾಗಲೂ ಯಾವುದೇ ಹುದ್ದೆಗಳಿಗೆ ಮುಸ್ಲಿಮರನ್ನು ನೇಮಕ ಮಾಡುತ್ತಿಲ್ಲ.ದೌರ್ಜನ್ಯಕ್ಕೊಳಗಾದಾಗ ಕಾಂಗ್ರೆಸ್ ನಾಯಕರು ನಮ್ಮ ಪರ ನಿಲ್ಲುತ್ತಿಲ್ಲ. ಈಗ ಮುಸ್ಲಿಮರು ಪ್ರಬುದ್ಧರಾಗಿದ್ದು, ಕಾಂಗ್ರೆಸ್
ಓಟ್ ಬ್ಯಾಂಕ್ಗಾಗಿ ನಾಟಕವಾಡುತ್ತಿರುವುದು ತಿಳಿದಿಲ್ಲವೆಂದುಕೊಂಡಿದ್ದಾರೆಂದು ತಿಳಿಸಿದರು.
ಜೆಡಿಎಸ್ ಪಕ್ಷವು ಅಲ್ಪಸಂಖ್ಯಾತರ ರಕ್ಷಣೆಗೆ ಕಟಿಬದ್ಧವಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದ ಅಲ್ಪಸಂಖ್ಯಾತರ ಅಭಿವೃದ್ಧಿಯತ್ತ ಹೆಚ್ಚಿನ ಕಾಳಜಿ ವಹಿಸಿರುವ ಶಾಸಕ ಬಿ.ಬಿ.ನಿಂಗಯ್ಯ ಅವರು, ಮೂಲ ಸೌಕರ್ಯ ಸೇರಿದಂತೆ ಮಸೀದಿ, ಮದರಸ ಹಾಗೂ ಚಚ್
ìಗಳಗೆ ಶಾಸಕರ ನಿಧಿ ಯಿಂದ 1.60 ಕೋಟಿ ಅನುದಾನ ನೀಡಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಒಂದು ತಿಂಗಳಲ್ಲಿ ಸಾಚಾರ್ ವರದಿ ಅನುಷ್ಠಾನ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಆದ್ದರಿಂದಲೇ ಕಾಂಗ್ರೆಸ್ನ ಹಿರಿಯ ಮುಸ್ಲಿಂ ನಾಯಕರು ಸೇರಿದಂತೆ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶೇ.75 ರಷ್ಟು ಮುಸ್ಲಿಮರು ಜೆಡಿಎಸ್ಗೆ ಸೇರಲಿದ್ದಾರೆ. ಸದ್ಯದಲ್ಲೇ ಶಾಸಕರು ಸಭೆಯೊಂದನ್ನು ನಡೆಸಿ ಅಲ್ಪಸಂಖ್ಯಾತರ ಸಮಾವೇಶ ಆಯೋಜಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆರೀಫ್, ತಾಲೂಕು ಪ್ರಧಾನ ಕಾರ್ಯದರ್ಶಿ ಸೈಯದ್ ರಿಜ್ವಾನ್, ಗೋಣಿಬೀಡು ಹೋಬಳಿ ಅಧ್ಯಕ್ಷ ಎ.ಪಿ.ಮಹಮ್ಮದ್, ಬಣಕಲ್ ಹೋಬಳಿ ಅಧ್ಯಕ್ಷ ಅಬ್ದುಲ್ ಅಜೀಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.