ಕೊನೆಗೂ ನರಹಂತಕ ಪುಂಡಾನೆ ಸೆರೆ

Team Udayavani, Dec 22, 2017, 6:40 AM IST

wild-elephant.jpg

ಚನ್ನಗಿರಿ: ನೆರೆಯ ಆಂಧ್ರಪ್ರದೇಶದ ಕಾಡಿನಿಂದ ಗಡಿ ಜಿಲ್ಲೆ ಚಿತ್ರದುರ್ಗಕ್ಕೆ ಬಂದು ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಸಿ ಸಾವು-ನೋವುಗಳಿಗೆ ಕಾರಣವಾಗಿದ್ದ ನರಹಂತಕ ಕಾಡಾನೆ ಕೊನೆಗೂ ಸೆರೆಸಿಕ್ಕಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿಯ ಕಗ್ಗಿ ಅರಣ್ಯಪ್ರದೇಶದಲ್ಲಿ ಗುರುವಾರ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಆದರೆ, ಇನ್ನೊಂದು ಆನೆ ಇನ್ನೂ ಸಿಕ್ಕಿಲ್ಲ. ಇದಕ್ಕಾಗಿ ಶೋಧ ಮುಂದುವರಿದಿದೆ.

ಕಳೆದ ಆರು ದಿನಗಳ ಹಿಂದೆ ಕುಕ್ಕ ವಾಡೇಶ್ವರಿ ಉಬ್ರಾಣಿ ಅರಣ್ಯ ಪ್ರವೇಶಿಸಿದ್ದ ಎರಡು ಕಾಡಾನೆಗಳು ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಗದೆ ಕಾಡಿನಲ್ಲಿ ಅವಿತುಕೊಂಡಿದ್ದವು. ಸಾಕಷ್ಟು ಜನರ ಮೇಲೆ ದಾಳಿ ಮಾಡಿದ್ದವು. ಆನೆ ದಾಳಿಗೆ ಸಿಲುಕಿ ನಾಲ್ಕಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಸಾಕಷ್ಟು ಬೆಳೆ ಹಾನಿಯಾಗಿದೆ. ಜನರ ನಿದ್ದೆಗೆಡಿಸಿದ್ದ ಆನೆಗಳು ನಂತರ ಉಬ್ರಾಣಿ ಅರಣ್ಯ ಪ್ರದೇಶದಲ್ಲಿ ಸೇರಿಕೊಂಡಿದ್ದವು. ಆನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ “ಆಪರೇಷನ್‌ ಉಬ್ರಾಣಿ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿತ್ತು.

ಕಗ್ಗಿ ಅರಣ್ಯದಲ್ಲಿ ಸೆರೆ: ಗುರುವಾರ ಬೆಳಗ್ಗೆ 8:30ರ ಸುಮಾರಿಗೆ ಕಗ್ಗಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಕಾಡಾನೆ, ನೀರನ್ನು ಅರಸಿ ಹೊರಟಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ, ಪಶುವೈದ್ಯರು, ಅರವಳಿಕೆ ತಜ್ಞರು, ಮಾವುತರು, ಐದು ಸಾಕು ಆನೆಗಳೊಂದಿಗೆ ಕಾಡಾನೆಯನ್ನು ಬೆನ್ನಟ್ಟಿದರು. ಬೆಳಗ್ಗೆ 10:15ರ ಸುಮಾರಿಗೆ ಕಾಡಾನೆ ಪರಾರಿಯಾಗಲು ಯತ್ನಿಸಿತಾದರೂ ಸ್ಥಳದಲ್ಲಿದ್ದ ಅರವಳಿಕೆ ತಜ್ಞರು ಕಾಡಾನೆ ಮೇಲೆ ಅರವಳಿಕೆ ಚುಚ್ಚುಮದ್ದು ಹಾರಿಸಿದರು. ಇದರಿಂದ ಸ್ವಲ್ಪ ದೂರದವರೆಗೆ ಓಡಿದ ಆನೆ ಕೊನೆಗೆ ಪ್ರಜ್ಞೆ ತಪ್ಪಿ ಬಿತ್ತು. ತಕ್ಷಣ ದೊಡ್ಡ ಹಗ್ಗದಿಂದ ಕಾಡಾನೆಯನ್ನು ಬಿಗಿದು ಸಾಕು ಆನೆಗಳ ಸಹಾಯದಿಂದ ಲಾರಿಯ ಒಳಗೆ ಸೇರಿಸಲಾಯಿತು. ಸೆರೆ ಸಿಕ್ಕ ಆನೆಯನ್ನು ಗಾಜನೂರಿನ ಸಕ್ರೆಬೈಲು ಅರಣ್ಯ ಪ್ರದೇಶಕ್ಕೆ ಕಳುಹಿಸಲಾಗಿದೆ. ಮತ್ತೂಂದು ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಾಡಾನೆಯನ್ನು ಸೆರೆ ಹಿಡಿಯುವುದು ಸಿಬ್ಬಂದಿಗೆ ಕಠಿಣ ಕೆಲಸವಾಗಿದ್ದು, ಪುಂಡಾನೆ ಸೆರೆಗೆ ಸತತ ಪ್ರಯತ್ನ ನಡೆದಿದೆ.
ಈ ಯಶಸ್ಸಿಗೆ ತಂಡದಲ್ಲಿ ಕಾರ್ಯ ನಿರ್ವಹಿಸಿದ ಪ್ರತಿಯೊಬ್ಬರ ಶ್ರಮವಿದೆ. ಮೈಸೂರಿನ ಅಭಿಮನ್ಯು ಸೇರಿದಂತೆ ಉಳಿದ ಐದು
ಸಾಕು ಆನೆಗಳ ಸಹಕಾರವೂ ಸಾಕಷ್ಟಿದೆ. ಸದ್ಯ ಕಗ್ಗಿ ಅರಣ್ಯ ಪ್ರದೇಶದಲ್ಲಿ ಮತ್ತೂಂದು ಕಾಡಾನೆ ಕಣ್ಮರೆಯಾಗಿದ್ದು, ಅದನ್ನು ಕೂಡಾ ಸೆರೆ ಹಿಡಿಯುವ ಮೂಲಕ “ಆಪರೇಷನ್‌ ಉಬ್ರಾಣಿ ಕಾರ್ಯಾಚರಣೆ’ಯನ್ನು ಯಶಸ್ವಿಗೊಳಿಸಲಾಗುವುದು.

– ದಿನೇಶ್‌
ಚನ್ನಗಿರಿ ವಲಯ ಅರಣ್ಯಾಧಿಕಾರಿ

ಟಾಪ್ ನ್ಯೂಸ್

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.