ಕಬ್ಬು ಬಾಕಿ ಉಳಿಸಿದ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂ
Team Udayavani, Dec 23, 2017, 6:15 AM IST
ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯು ರೈತರ ಬಿಲ್ ಬಾಕಿ ಉಳಿಸಿಕೊಂಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ ಕೂಡಲೇ ಇದರ ಪಾವತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಅವರು, ಕಾರ್ಖಾನೆಯವರು ಎಷ್ಟೇ ಪ್ರಭಾವಿಗಳಾಗಿರಲಿ ರೈತರ ಬಾಕಿ ಹಣ ಉಳಿಸಿಕೊಳ್ಳಲು ಅವಕಾಶ ನೀಡಬೇಡಿ. ಒಂದು ವೇಳೆ ತಕ್ಷಣ ಹಣ ಪಾವತಿ ಮಾಡದೇ ಇದ್ದರೆ ಕಾರ್ಖಾನೆಯನ್ನು ವಶಕ್ಕೆ ತೆಗೆದುಕೊಂಡು ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ರೈತ ಮುಖಂಡರು ಕಾರ್ಖಾನೆಯು ಕಳೆದ ಎರಡು ಹಂಗಾಮಿನಿಂದ ಬಾಕಿ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದರು. ಕಾರ್ಖಾನೆಯಿಂದ ನಾಲ್ಕು ಕೋಟಿ ರೂ.ಗಿಂತ ಅಧಿಕ ಬಾಕಿ ಬರಬೇಕಿದೆ. ಈ ಸಂಬಂಧ ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಾರ ಸಾಲ ಮಾಡಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ನೋವು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.