ಎಂ.ಜಿ.ರಸ್ತೆಗೆ ಅಧಿಕಾರಿಗಳ ಭೇಟಿ
Team Udayavani, Dec 23, 2017, 11:12 AM IST
ಬೆಂಗಳೂರು: 31ರಂದು ನಡೆಯುವ ಹೊಸ ವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಭದ್ರತೆ ಕುರಿತು ಪೂರ್ವ ಸಿದ್ಧತೆ
ಕೈಗೊಳ್ಳುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ, ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಕಳೆದ ವರ್ಷ ನಡೆದಿದ್ದ ಸಾಮೂಹಿಕ ಲೈಂಗಿಕ ಕಿರುಕುಳದಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತೆ ಕ್ರಮ ವಾಗಿ ಬಂದೋಬಸ್ತ್ ಮಾಡಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ನಿರ್ಧರಸಲು ಅಧಿಕಾರಿಗಳು ಭೇಟಿ ನೀಡಿದ್ದು, ಎಲ್ಲಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಮತ್ತು ಯಾವ ರೀತಿ ಸಿಬ್ಬಂದಿ ನಿಯೋಜಿಸಬೇಕು ಎಂಬ ಬಗ್ಗೆ ಪರಿಶೀಲಿಸಿದ್ದಾರೆ. ನಗರದಲ್ಲಿ
ಹೊಸ ವರ್ಷ ಆಚರಣೆ ಮಾಡಲು ಸಾವಿರಾರು ಮಂದಿ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆಗೆ ಆಗಮಿಸುತ್ತಾರೆ. ಇದಕ್ಕಾಗಿ ಎಷ್ಟು ಸಿಬ್ಬಂದಿ ಭದ್ರತೆಗೆ ನಿಯೋಜಿ ಸಬೇಕು ಎಂಬ ಬಗ್ಗೆ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದು ಕೇಂದ್ರ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಬಾರಿ ಸಾಮೂಹಿಕವಾಗಿ ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.